ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.
ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದ್ದಾರೆ.
ಮಹಿಳೆಯರ ಜೊತೆ ಸಭ್ಯತೆ ಇಲ್ಲದೆ ವರ್ತಿಸುವ ಶಾಸಕ ಲಿಂಬಾವಳಿ ರಾಜೀನಾಮೆಗೆ ಎಎಪಿ ಆಗ್ರಹ.
BJP MLA Aravind Limbavali's atrocity cannot not be tolerated. @ArvindLBJP
The dignity of every woman must be protected at all costs. @2006Usha @KushalaSwamy pic.twitter.com/4ZYMAJCzMi
— AAP Bengaluru (@AAPBangalore) September 3, 2022
“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದ್ದಾರೆ.
ಅಲ್ಲದೇ, “ನಾನೇನು ಅವಳನ್ನು ರೇಪ್ ಮಾಡಿದ್ದೇನಾ?” ಎನ್ನುವ ಮೂಲಕ ಘಟನೆಯನ್ನು ಲಿಂಬಾವಳಿ ಸಮರ್ಥಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ ‘ನಾನೇನು ರೇಪ್ ಮಾಡಿದ್ನಾ’ ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ” ಪ್ರಶ್ನಿಸಿದೆ.
ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ Basavaraj Bommai ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಸವಾಲು ಹಾಕಿದೆ.
ಇದನ್ನೂ ಓದಿರಿ: ‘ರೇಪ್ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ
“ಬಿಜೆಪಿಯು ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ, ಗುಜರಾತಿನಲ್ಲಿ ರೇಪಿಸ್ಟರನ್ನು ಸನ್ಮಾನಿಸಿದೆ, ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ ಇಂಥ ಮಹಿಳಾ ವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ” ಎಂದು ಆಕ್ರೋಶ ಹೊರಹಾಕಿದೆ.
ರಾಜ್ಯ ಯೂತ್ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಅಧಿಕಾರದ ಅಮಲು ನೆತ್ತಿಗೆರಿ, ದುರಂಕಾರ ಪರಮಾವಧಿಯಲ್ಲಿ. ನ್ಯಾಯ ಕೇಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ್ದಲ್ಲದೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಸಹ್ಯಕರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಇದೇನಾ ನಿಮ್ಮ ಧರ್ಮ ರಕ್ಷಣೆ, ಇದೇನಾ ನಮ್ಮ ಹಿಂದೂ ಧರ್ಮದಲ್ಲಿ ಹೇಳಿಕೊಡುವುದು. ಶಾಸಕರಾಗಿ ಸಾಧನೆ ತೋರಿಸಲಾಗದೆ ಸಾಮಾನ್ಯ ಜನರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಈ ಕೂಡಲೇ ಅರವಿಂದ್ ಲಿಂಬಾವಳಿಯ ರಾಜೀನಾಮೆ ಪಡೆಯಬೇಕು, ಪಕ್ಷದಿಂದ ಉಚ್ಚಾಟಿಸಬೇಕು” ಎಂದು ಆಗ್ರಹಿಸಿದೆ.