Homeಕರ್ನಾಟಕಪೊಲೀಸರ ದೌರ್ಜನ್ಯಕ್ಕೆ ಎಎಪಿ ಖಂಡನೆ: ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರಕ್ಕೆ ಆಗ್ರಹ

ಪೊಲೀಸರ ದೌರ್ಜನ್ಯಕ್ಕೆ ಎಎಪಿ ಖಂಡನೆ: ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರಕ್ಕೆ ಆಗ್ರಹ

- Advertisement -
- Advertisement -

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಬಂಧಿಸಿದ್ದಲ್ಲದೇ, ಗುರುತರ ಆರೋಪ ಹೊರಿಸಿ ಮೊಕದ್ದಮೆ ದಾಖಲಿಸಿರುವ ಪೊಲೀಸರ ನಡೆಯನ್ನು ಎಎಪಿ ಖಂಡಿಸಿದ್ದು, ಈ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿದೆ.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, “ಸರ್ಕಾರ ಹಾಗೂ ಬಿಬಿಎಂಪಿಯ ನಿರ್ಲಕ್ಷ್ಯದಿಂದಾಗಿ ರಸ್ತೆಗುಂಡಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಬಲಿಯಾಗಿರುವುದನ್ನು ಖಂಡಿಸಿ ಸೋಮವಾರ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದೆವು. ಈ ವೇಳೆ ಪೊಲೀಸರು ಎಎಪಿಯ 14 ಮುಖಂಡರನ್ನು ಬಂಧಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸ್ಥಳೀಯ ಬಿಜೆಪಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಚಿತಾವಣೆಯಿಂದಾಗಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪೊಲೀಸರ ದೌರ್ಜನ್ಯವನ್ನು ಗೃಹಸಚಿವರು ಹಾಗೂ ಮಾನವ ಹಕ್ಕುಗಳ ಆಯೋಗದಲ್ಲಿ ಪ್ರಶ್ನಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

“ಅಶ್ವಿನ್‌ರವರನ್ನು ಬಲಿಪಡೆದ ರಸ್ತೆಗುಂಡಿ ಹುಟ್ಟಿಕೊಳ್ಳಲು ಸ್ಥಳೀಯ ಶಾಸಕರು, ಬಿಬಿಎಂಪಿ ಆಯುಕ್ತರು ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರೇ ನೇರ ಕಾರಣ. ಈ ಮೂವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ನಮ್ಮನ್ನು ಬಂಧಿಸಿದ ಪೊಲೀಸರಿಗೆ ಸಮಾಜದ ಬಗ್ಗೆ ಕಾಳಜಿಯಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಿ. ಅಶ್ವಿನ್‌ ಕುಟುಂಬಕ್ಕೆ ಸಿಎಂ ಬಸವರಾಜ್‌ ಬೊಮ್ಮಾಯಿಯವರು ಶೀಘ್ರವೇ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು” ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಮಾತನಾಡಿ, “ಉತ್ತಮ ರಸ್ತೆಗಾಗಿ ಬೆಂಗಳೂರಿನ ಜನತೆ ವಿವಿಧ ರೀತಿಯ ತೆರಿಗೆ ಕಟ್ಟುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಗುಂಡಿರಹಿತ ರಸ್ತೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಆದ್ಯ ಕರ್ತ್ಯವ್ಯ. ಆದರೆ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದಲ್ಲಿ ತುಂಬಿರುವ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಂದಾಗಿ ರಸ್ತೆಗಳು ಯಮಸ್ವರೂಪಿ ಆಗಿವೆ. ಗುಂಡಿ ಮುಚ್ಚಲು ತಾಕತ್ತಿಲ್ಲ ಸರ್ಕಾರವು ಪ್ರಶ್ನಿಸುವವರ ಬಾಯಿ ಮುಚ್ಚಿಸಲು ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಇಂತಹ ಕುತಂತ್ರಕ್ಕೆ ಆಮ್‌ ಆದ್ಮಿ ಪಾರ್ಟಿಯು ಹೆದರುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಹಾಗೂ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು,ವಿಜಯ್ ಶಾಸ್ತ್ರಿಮಠ, ಸುಹಾಸಿನಿ ಪಣಿರಾಜ್ ಇನ್ನಿತರ ನಾಯಕರುಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...