Homeಮುಖಪುಟಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

ಗುಜರಾತ್‌ನಲ್ಲಿ ಎಎಪಿಯವರು ಕಾಂಗ್ರೆಸ್ ಮತ ಕಬಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಗುಜರಾತ್‌ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ. ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಮತಗಳನ್ನೇ ಕಬಳಿಸಿದ್ದಾರೆ. ಇದು ಬಿಜೆಪಿಯ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಹಿಮಾಚಲ ಪ್ರದೇಶದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದುದ್ದು ನಮಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್‌ ಹಾಗೂ ಹಿಮಾಚಲಪ್ರದೇಶದ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನೂ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಚುನಾವಣಾ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರದು” ಎಂದು ತಿಳಿಸಿದ್ದಾರೆ.

“ಗುಜರಾತಿನಲ್ಲಿ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ ಎಂಬ ಸುದ್ದಿ ಇದೆ. ಇದೇ ರೀತಿ ಜೆಡಿಎಸ್‌ ಜೊತೆ ಬಿಜೆಪಿ ನಮ್ಮ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಅವರಿಬ್ಬರಿಗೂ ಯಾವ ಲಾಭವಾಗಲ್ಲ” ಎಂದಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ರಾಜ್ಯ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಚುನಾವಣೆಯಲ್ಲಿ ಮುಖ್ಯವಾಗಲಿದೆ. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ. 40% ಕಮಿಷನ್‌ ಸರ್ಕಾರ ಗುಜರಾತ್‌ ನಲ್ಲಿ ಇದೆ ಯಾರೂ ಹೇಳಿಲ್ಲ, ಆದರೆ ರಾಜ್ಯದ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರೋಕೆ ಸಾಧ್ಯನಾ?” ಎಂದು ಪ್ರಶ್ನಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...