Homeಮುಖಪುಟಆಮ್‌ ಆದ್ಮಿ ಪಕ್ಷದಿಂದ 'ಎಎಪಿ ಕಾ ರಾಮ್‌ರಾಜ್ಯ' ವೆಬ್‌ಸೈಟ್‌ ಬಿಡುಗಡೆ

ಆಮ್‌ ಆದ್ಮಿ ಪಕ್ಷದಿಂದ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆ

- Advertisement -
- Advertisement -

ಆಮ್‌ ಆದ್ಮಿ ಪಕ್ಷವು ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ನ್ನು ಪ್ರಾರಂಭಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಭಗವಾನ್ ರಾಮನ ಆದರ್ಶಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಎಎಪಿ ಹೇಳಿಕೊಂಡಿದೆ.

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ವೆಬ್‌ಸೈಟ್ ಬಿಡುಗಡೆಯಾಗಿದೆ, ದೆಹಲಿಯಲ್ಲಿ ಮೊದಲ ಹಂತದ ಮತದಾನವು ಶುಕ್ರವಾರ ನಡೆಯಲಿದೆ ಮತ್ತು ದೇಶದ ಹಲವಾರು ಭಾಗಗಳಲ್ಲಿ ರಾಮ ನವಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಇದರ ಮಧ್ಯೆ ‘ಎಎಪಿ ಕಾ ರಾಮ್‌ರಾಜ್ಯ’ ವೆಬ್‌ಸೈಟ್‌ ಬಿಡುಗಡೆಯಾಗಿದೆ.

ಈ ಕುರಿತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ವೆಬ್‌ಸೈಟ್ ಎಎಪಿಯ ‘ರಾಮ ರಾಜ್ಯ’ ಪರಿಕಲ್ಪನೆ ಮತ್ತು ಪಕ್ಷದ ಸರ್ಕಾರ ಮಾಡಿದ ಕೆಲಸಗಳನ್ನು ಬಿಂಬಿಸುತ್ತದೆ ಎಂದು ಹೇಳಿದರು. ‘ರಾಮರಾಜ್ಯ’ ಸಾಕ್ಷಾತ್ಕಾರಕ್ಕಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಕಳೆದ 10 ವರ್ಷಗಳಲ್ಲಿ ಉತ್ತಮವಾದ ಶಾಲೆಗಳು, ಮೊಹಲ್ಲಾ ಚಿಕಿತ್ಸಾಲಯಗಳು, ಉಚಿತ ನೀರು ಮತ್ತು ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಮನವಮಿಯಂದು ಕೇಜ್ರಿವಾಲ್ ತಮ್ಮ ಜನರ ನಡುವೆ ಇಲ್ಲದಿರುವುದು ಇದೇ ಮೊದಲು ಎಂದು ಸಿಂಗ್ ಹೇಳಿದರು ಮತ್ತು ದೆಹಲಿ ಮುಖ್ಯಮಂತ್ರಿಯನ್ನು ‘ಆಧಾರರಹಿತ’ ಪ್ರಕರಣದಲ್ಲಿ ‘ಸುಳ್ಳು’ ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು.

ಎಎಪಿ ಮುಖಂಡರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನು ಓದಿ: ಮೋದಿ ‘ಭ್ರಷ್ಟಾಚಾರದ ಚಾಂಪಿಯನ್’, ಬಿಜೆಪಿ 150ರ ಗಡಿ ದಾಟುವುದಿಲ್ಲ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...