Homeಮುಖಪುಟಸಂವಿಧಾನ ರಕ್ಷಣೆಗೆ ಎಎಪಿಯಿಂದ ಸಾಮಾಜಿಕ ಜಾಲತಾಣ ಅಭಿಯಾನ

ಸಂವಿಧಾನ ರಕ್ಷಣೆಗೆ ಎಎಪಿಯಿಂದ ಸಾಮಾಜಿಕ ಜಾಲತಾಣ ಅಭಿಯಾನ

- Advertisement -
- Advertisement -

ಆಮ್ ಆದ್ಮಿ ಪಕ್ಷ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದು, ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನರಲ್ಲಿ ಬೆಂಬಲಿಸುವಂತೆ ಕೋರಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸಚಿವೆ ಮತ್ತು ಎಎಪಿ ಹಿರಿಯ ನಾಯಕಿ ಅತಿಶಿ ಅವರು ಸಾಮಾಜಿಕ ಮಾಧ್ಯಮದಲ್ಲಿ ‘ಡಿಪಿ (ಡಿಸ್ಪ್ಲೇ ಪಿಕ್ಚರ್) ಅಭಿಯಾನವನ್ನು ಪ್ರಾರಂಭಿಸಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿಯನ್ನು ಮಾಡಿದ್ದಾರೆ.

ಎಲ್ಲಾ ಎಎಪಿ ನಾಯಕರು ಮತ್ತು ಕಾರ್ಯಕರ್ತರು ಎಕ್ಸ್, ಫೇಸ್‌ಬುಕ್, ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸುತ್ತಾರೆ ಮತ್ತು ಹೊಸ ಪ್ರೊಫೈಲ್ ಚಿತ್ರದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಂಬಿ ಹಿಂದೆ ಇರುವುದನ್ನು ತೋರಿಸುತ್ತದೆ. ಅದರಲ್ಲಿ  ‘ಮೋದಿ ಕಾ ಸಬ್ಸೆ ಬಡಾ ಡರ್‌ ಕೇಜ್ರಿವಾಲ್’ ಎಂದು ಬರೆಯಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕುವ ದೇಶದ ಏಕೈಕ ನಾಯಕ ಕೇಜ್ರಿವಾಲ್ ಆದ್ದರಿಂದ ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿದೆ ಎಂದು ಅತಿಶಿ ಹೇಳಿದ್ದಾರೆ.

ಅಬಕಾರಿ ಹಗರಣದ ಎರಡು ವರ್ಷಗಳ ಸುದೀರ್ಘ ತನಿಖೆಯ ಹೊರತಾಗಿಯೂ ಜಾರಿ ನಿರ್ದೇಶನಾಲಯಕ್ಕೆ ‘ಒಂದು ಪೈಸೆ’ ಸಾಕ್ಷ್ಯವನ್ನು ಕೂಡ ನೀಡಲು ಸಾಧ್ಯವಾಗಲಿಲ್ಲ. ಬಿಜೆಪಿ ಮತ್ತು ಮೋದಿ ಕೇಜ್ರಿವಾಲ್ ಅವರನ್ನು ಹತ್ತಿಕ್ಕಲು ಬಯಸುತ್ತಿದ್ದಾರೆ. ಎಎಪಿ ದೇಶದಲ್ಲಿ ‘ಸರ್ವಾಧಿಕಾರ’ದ ವಿರುದ್ಧ ಯುದ್ಧ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದು ಕೇಜ್ರಿವಾಲ್ ಅವರ ಹೋರಾಟವಲ್ಲ ಎಂದು ಹೇಳುವ ಮೂಲಕ ಪಕ್ಷದ ಸಾಮಾಜಿಕ ಮಾಧ್ಯಮ ಡಿಪಿ ಅಭಿಯಾನಕ್ಕೆ ಜನರು ಸೇರಬೇಕೆಂದು ಅವರು ಒತ್ತಾಯಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಕಳೆದ ವಾರ ಗುರುವಾರದಂದು ಅವರ ಸರ್ಕಾರದ ಈಗ ರದ್ದುಪಡಿಸಿದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧಿಸಿತ್ತು. ಅವರು ಮಾರ್ಚ್ 28 ರವರೆಗೆ ಏಜೆನ್ಸಿಯ ಕಸ್ಟಡಿಯಲ್ಲಿದ್ದಾರೆ.

ಇದನ್ನು ಓದಿ: ಡಾರ್ಜಿಲಿಂಗ್: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಬಿಜೆಪಿ ಶಾಸಕ ಸ್ಪರ್ಧೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...