Homeಚಳವಳಿರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

"ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ" ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಕಳೆದ 18 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನಾಳೆಯಿಂದ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ನಾಯಕರು ಸಾಥ್ ನೀಡಲಿದ್ದಾರೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಸೋಮವಾರ (ಡಿ.14) ರೈತರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ರೈತರ ಪ್ರತಿಭಟನೆಯನ್ನು ಬೆಂಬಲಿಸಿ ನಾಳೆ ಒಂದು ದಿನದ ಉಪವಾಸವನ್ನು ನಡೆಸುತ್ತೇನೆ. ಎಎಪಿ ಸ್ವಯಂಸೇವಕರಿಗೆ ಉಪವಾಸ ಸತ್ಯಾಗ್ರಹದಲ್ಲಿ ಸೇರಿಕೊಳ್ಳಲು ನಾನು ಮನವಿ ಮಾಡುತ್ತೇನೆ. ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಹಂಕಾರ ಬಿಟ್ಟು ತಕ್ಷಣವೇ ಸ್ವೀಕರಿಸಬೇಕು. ಮತ್ತು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಖಾತರಿಪಡಿಸುವ ಮಸೂದೆಯನ್ನು ಜಾರಿಗೆ ತರಬೇಕು’ ಎಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಡಿ.14 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿರುವ ದೆಹಲಿಯ ಹೋರಾಟನಿರತ ರೈತರು

ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅವರಿಗೆ ಬೆಂಬಲ ನೀಡುತ್ತಿರುವ ಗಾಯಕರು, ಕ್ರೀಡಾಪಟುಗಳು, ಮಾಜಿ ಸೈನಿಕರನ್ನು ರಾಷ್ಟ್ರದ್ರೋಹಿಗಳು ಎನ್ನುವವರ ವಿರುದ್ಧ ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶ ಸೇವೆ ಮಾಡಿದ ಮಾಜಿ ಸೈನಿಕರು, ವೈದ್ಯರು, ದೇಶಕ್ಕಾಗಿ ಪ್ರಶಸ್ತಿಗಳನ್ನು ತಂದ ಆಟಗಾರರು, ಗಾಯಕರು ಅವರು ದೇಶ ವಿರೋಧಿಗಳೇ..? ನಾನು ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ, ಈ ದೇಶದ ರೈತರನ್ನು ರಾಷ್ಟ್ರ ವಿರೋಧಿ ಎಂದು ಕರೆಯುವ ಧೈರ್ಯ ಮಾಡಬೇಡಿ” ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ-ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮೂಲಭೂತ ವ್ಯವಸ್ಥೆಗಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದರು. ಪ್ರತಿಭಟನಾ ಸ್ಥಳಕ್ಕೂ ಭೇಟಿ ನೀಡಿದ್ದರು. ನಂತರ ಭಾರತ್ ಬಂದ್‌ಗೆ ಬೆಂಬಲಿಸಲು ಹೊರಟ್ಟಿದ್ದ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿತ್ತು.

ಆಪ್‌ ಪಕ್ಷವು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ, “ಸಿಂಘು ಗಡಿಯಲ್ಲಿ ಹೋರಾಟ ನಿರತ ರೈತರನ್ನು ಭೇಟಿ ಮಾಡಿದ ನಂತರ ಮಾನ್ಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರನ್ನು ದೆಹಲಿ ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಯಾರೂ ಅವರ ಮನೆ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ” ಎಂದು ಟ್ವೀಟ್ ಮಾಡಿ ಆರೋಪಿಸಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಆಪ್ ಆರೋಪಗಳನ್ನು ನಿರಾಕರಿಸಿತ್ತು.


ಇದನ್ನೂ ಓದಿ: ಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...