Homeಮುಖಪುಟ3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್‌ ತೆಲಂಗಾಣದಲ್ಲಿ ಮಾತ್ರ ಬಹುಮತ ಪಡೆಯುವ ಮೂಲಕ  ಕಳಪೆ ಫಲಿತಾಂಶವನ್ನು ಪಡೆದುಕೊಂಡಿದೆ. ಈ ಬಗ್ಗೆ ಕಾಂಗ್ರೆಸ್‌ ವಿರುದ್ಧ ಪ್ರತಿಪಕ್ಷಗಳು ಟೀಕಿಸುತ್ತಿದೆ. ಅದರಲ್ಲು INDIA ಮೈತ್ರಿ ಪಕ್ಷಗಳು ಕೂಡ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ನಾಯಕರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ್ದಾರೆ ಜೊತೆಗೆ ಎಎಪಿ ಪಕ್ಷವನ್ನು ಉತ್ತರ ಭಾರತದ ಅತಿದೊಡ್ಡ ವಿರೋಧ ಪಕ್ಷ ಎಂದು ಕರೆದಿದ್ದಾರೆ.

ಎಎಪಿಯ ಜಾಸ್ಮಿನ್ ಶಾ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ನ್ನು ಮಾಡಿದ್ದು,  ಆಮ್ ಆದ್ಮಿ ಪಕ್ಷವು ಉತ್ತರ ಭಾರತದ  2 ರಾಜ್ಯಗಳಾದ ಪಂಜಾಬ್‌ ಮತ್ತು ದೆಹಲಿಯಲ್ಲಿ ಸರ್ಕಾರಗಳನ್ನು ಹೊಂದಿದೆ. ಆದ್ದರಿಂದ ಉತ್ತರ ಭಾರತದ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.

ಆದರೆ ಈ ಪ್ರತಿಪಾದನೆಯನ್ನು ಮಾಡುವಾಗ ಈ ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯ ಸ್ವಂತ ಸಾಧನೆ ಇನ್ನಷ್ಟು ಕಳಪೆಯಾಗಿದೆ ಎಂಬುವುದನ್ನು ಅವರು ಉಲ್ಲೇಖಿಸಿಲ್ಲ. ಎಎಪಿ ಪಕ್ಷವು  ಮೂರು ರಾಜ್ಯಗಳಲ್ಲಿ ಒಂದೂ ಸ್ಥಾನವನ್ನು ಕೂಡ ಗೆದುಕೊಂಡಿಲ್ಲ ಮತ್ತು ನೋಟಾ  ಆಯ್ಕೆಗಿಂತ ಕಡಿಮೆ ಮತಗಳನ್ನು ಪಡೆದಿದೆ.

ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ನಾವು ಬಿಜೆಪಿಯನ್ನು ಅಭಿನಂದಿಸುತ್ತೇವೆ. ಅದು ತನ್ನ ಭರವಸೆಯನ್ನು ಈಡೇರಿಸುತ್ತದೆ ಮತ್ತು ಮುಖ್ಯಮಂತ್ರಿ ಲಾಡ್ಲಿ ಬೆಹ್ನಾ ಆವಾಸ್ ಯೋಜನೆಯಡಿಯಲ್ಲಿ ಮನೆಗಳನ್ನು ನೀಡುತ್ತದೆ ಎಂದು ನಾವು ಪ್ರಾಮಾಣಿಕವಾಗಿ ಭಾವಿಸುತ್ತೇವೆ. ಬಿಜೆಪಿ ಭರವಸೆಯಂತೆ 450 ರೂ.ಗೆ ಎಲ್‌ಪಿಜಿ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ. ಇಡೀ ರಾಷ್ಟ್ರಕ್ಕೆ ಅಗ್ಗದ ಎಲ್‌ಪಿಜಿ ಒದಗಿಸಬೇಕು ಮತ್ತು ಮೂರು ರಾಜ್ಯಗಳಿಗೆ ಸೀಮಿತವಾಗಿರದೆ ಎಲ್ಲಾ ರಾಜ್ಯಗಳಿಗೂ ಅದೇ ದರದಲ್ಲಿ ಎಲ್‌ಪಿಜಿ  ಸಿಲಿಂಡರ್‌ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಪಕ್ಷಗಳ ಮೈತ್ರಿ ಉಳಿದುಕೊಂಡು ಮುಂದುವರಿದರೆ ಕಾಂಗ್ರೆಸ್ 2024 ರಲ್ಲಿ ಸೀಟ್‌ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಎಪಿ ಹೇಳಿದೆ. ಆದರೆ ಮೂರು ರಾಜ್ಯಗಳಲ್ಲಿ ಎಎಪಿ ಪಡೆದಿರುವ ಅತ್ಯಂತ ಕಡಿಮೆ ಮತಗಳ ಪಾಲನ್ನು ಉಲ್ಲೇಖಿಸಿಲ್ಲ, ತಮ್ಮ ಕಳಪೆ ಪ್ರದರ್ಶನವನ್ನು ಅವಲೋಕನ ನಡೆಸಿಲ್ಲ. ಪಕ್ಷವು ರಚನೆಯ ಹಂತದಲ್ಲಿ ನಮ್ಮ ಸಂದೇಶ ಎಲ್ಲರಿಗೂ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳಲು ಈ ರಾಜ್ಯಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ಮಾತ್ರ ಹೇಳಿಕೊಂಡಿದೆ.

ಇದನ್ನು ಓದಿ: ಯುದ್ಧ ಪುನರಾರಂಭ: ಇಸ್ರೇಲ್‌ನಲ್ಲಿ ಭುಗಿಲೆದ್ಧ ಆಂತರಿಕ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...