Homeಮುಖಪುಟಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ಗೋವಾ ಜಿಲ್ಲಾ ಪಂಚಾಯಿತಿಯಲ್ಲಿ ಖಾತೆ ತೆರೆದ ಆಪ್: ಇದು ಕೇವಲ ಆರಂಭವಷ್ಟೇ ಎಂದ ಕೇಜ್ರಿವಾಲ್

ದಕ್ಷಿಣ ಗೋವಾದ ಬೆನೌಲಿಮ್ ಸ್ಥಾನವನ್ನು ಆಪ್‌ನ ಹ್ಯಾನ್ಜೆಲ್ ಫರ್ನಾಂಡಿಸ್ ಗೆಲ್ಲುವ ಮೂಲಕ ರಾಜ್ಯದಲ್ಲಿ ಆಪ್ ಖಾತೆ ತೆರೆಯಲು ನೆರವಾಗಿದ್ದಾರೆ. 

- Advertisement -
- Advertisement -

ಗೋವಾದ ಜಿಲ್ಲಾ ಪಂಚಾಯಿತಿಯ 49 ಸ್ಥಾನಗಳ ಚುನಾವಣಾ ಫಲಿತಾಂಶ ನಿನ್ನೆ ಹೊರಬಿದ್ದಿದ್ದು ಆಮ್ ಆದ್ಮಿ ಪಕ್ಷ ಖಾತೆ ತೆರಯುವಲ್ಲಿ ಯಶಸ್ವಿಯಾಗಿದೆ. ಇದು ಮುಂದಿನ ವರ್ಷ ನಡೆಯಲಿರುವ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸಿನ ಹಸಿರು ನಿಶಾನೆ ಎಂದು ಆಪ್ ಘೋಷಿಸಿದೆ.

ಗೋವಾ ಜಿಲ್ಲಾ ಪಂಚಾಯಿತಿಯ 49 ಸ್ಥಾನಗಳಲ್ಲಿ ಬಿಜೆಪಿಯು 32 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷವು 3 ಸ್ಥಾನಗಳಲ್ಲಿ ಗೆದ್ದರೆ ಎನ್‌ಸಿಪಿ, ಆಪ್ ತಲಾ ಒಂದು ಸ್ಥಾನ ಪಡೆದಿವೆ. 7 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ದಕ್ಷಿಣ ಗೋವಾದ ಬೆನೌಲಿಮ್ ಸ್ಥಾನವನ್ನು ಆಪ್‌ನ ಹ್ಯಾನ್ಜೆಲ್ ಫರ್ನಾಂಡಿಸ್ ಗೆಲ್ಲುವ ಮೂಲಕ ರಾಜ್ಯದಲ್ಲಿ ಆಪ್ ಖಾತೆ ತೆರೆಯಲು ನೆರವಾಗಿದ್ದಾರೆ.

“ಗೋವಾದಲ್ಲಿ ಬೆನೌಲಿಮ್ ಜಿಲ್ಲಾ ಪಂಚಾಯತ್ ಸ್ಥಾನವನ್ನು ಗೆದ್ದ ಎಎಪಿಯ ಹ್ಯಾನ್ಜೆಲ್ ಫರ್ನಾಂಡಿಸ್ ಅವರಿಗೆ ಅಭಿನಂದನೆಗಳು. ಇತರ ಅನೇಕ ಎಎಪಿ ಅಭ್ಯರ್ಥಿಗಳು ಕಳೆದ ಬಾರಿಗಿಂತ ಹೆಚ್ಚಿನ ಮತಗಳನ್ನು ಪಡೆದಿದ್ದಾರೆ. ಇದು ಕೇವಲ ಪ್ರಾರಂಭ. ಎಎಪಿ ಗೋವಾನ್ನರ ನಂಬಿಕೆ ಮತ್ತು ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲಿದೆ ಎಂದು ನನಗೆ ಖಾತ್ರಿಯಿದೆ ”ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

“ಆಪ್ ನಾಯಕತ್ವ ಮತ್ತು ಸ್ವಯಂಸೇವಕರು ಹೆಚ್ಚು ಶ್ರಮವಹಿಸಿ ಮತದಾರರ ನಿರೀಕ್ಷೆಗಳನ್ನು ಈಡೇರಿಸಲು ಮತ್ತು ಅವರ ಹೃದಯವನ್ನು ಗೆಲ್ಲಲು ಪ್ರಯತ್ನಿಸಿದ್ದಾರೆ. ಗೋವಾದಲ್ಲಿ ಎಎಪಿಗೆ ತಮ್ಮ ಮೊದಲ ಜಯವನ್ನು ನೀಡಿದಕ್ಕಾಗಿ ಬೆನೌಲಿಮ್ ಜನರಿಗೆ, ಧನ್ಯವಾದಗಳು. ಎಎಪಿ ಗೋವಾ ಮತ್ತು ಗೋವಾನ್ನರಿಗಾಗಿ ಕೆಲಸ ಮಾಡುತ್ತದೆ ”ಎಂದು ಎಎಪಿಯ ಗೋವಾ ಸಂಚಾಲಕ ರಾಹುಲ್ ಮಾಂಬ್ರೆ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಾಯ್ಕಾಟ್ ಜಿಯೋ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...