Homeಕರ್ನಾಟಕಗ್ಯಾರಂಟಿ ಯೋಜನೆಗೆ SCSP/TSP ಹಣ ಬಳಕೆ ವಿರುದ್ಧ ಪ್ರತಿಭಟನೆಗೆ ಆಪ್ ಸಜ್ಜು

ಗ್ಯಾರಂಟಿ ಯೋಜನೆಗೆ SCSP/TSP ಹಣ ಬಳಕೆ ವಿರುದ್ಧ ಪ್ರತಿಭಟನೆಗೆ ಆಪ್ ಸಜ್ಜು

- Advertisement -
- Advertisement -

ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಿರುವ SCSP/TSP ಹಣ ಬಳಕೆ ಮಾಡಿಕೊಳ್ಳುವುದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ಎಸ್.ಸಿ /ಎಸ್.ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ. ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP/TSP ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ದಲಿತ ವರ್ಗಕ್ಕೆ ಮಾಡಿದ ಮಹಾ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ರೀತಿಯ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ದಲಿತ ವರ್ಗ ಇಂದು ಮಹಾ ಮೋಸಕ್ಕೆ ಒಳಗಾಗುತ್ತಿರುವುದು ದುರಂತ. 14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ SCSP/TSP ಯೋಜನಗೆ 4079 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಇಟ್ಟಿದ್ದೆವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳುತ್ತಾ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯಾಯವಾಗುವುದನ್ನು ನಾವು ಸಹಿಸುವುದಿಲ್ಲ ಎಂದರು.

ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ “ಹೇಳುವುದು ಒಂದು, ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ. ಇದೇ ತಿಂಗಳ ಆಗಸ್ಟ್ 5 ಶನಿವಾರದಂದು ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ” ಎಂದು ತಿಳಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಕುಟುಂಬದ ಮೂವರ ಹತ್ಯೆ ಪ್ರಕರಣ: ಪೊಲೀಸರ ವರ್ಗಾವಣೆ

0
ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಸಂದೀಪನ್ ಘಾಟ್ ಪ್ರದೇಶದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಲಿತ ಕುಟುಂಬದ ಮೂವರು ಸದಸ್ಯರ ಹತ್ಯೆ ನಡೆದಿದ್ದು, ಇದೀಗ ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮತ್ತು ಹೊರಠಾಣೆ ಪ್ರಭಾರ ಅಧಿಕಾರಿಯನ್ನು ವರ್ಗಾಯಿಸಲಾಗಿದೆ. ಸಾಂದೀಪನ್...