Homeಮುಖಪುಟಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಸಂಜಯ್ ಸಿಂಗ್

ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಸಂಜಯ್ ಸಿಂಗ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಇದೀಗ ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಂಗ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿದೆ. ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಕಳೆದ ವಾರ ತನಿಖಾ ಸಂಸ್ಥೆ ಸಿಂಗ್ ಅವರನ್ನು ಬಂಧಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ಮಂಗಳವಾರ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಅಕ್ಟೋಬರ್ 13 ರವರೆಗೆ ಇಡಿ (ಜಾರಿ ನಿರ್ದೇಶನಾಲಯ) ಕಸ್ಟಡಿಯನ್ನು ವಿಸ್ತರಿಸಿತ್ತು.

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಅಕ್ಟೋಬರ್ 4ರಂದು ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಸಿಂಗ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿ ಇಡಿ ಕಸ್ಟಡಿ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸುವಂತೆ ಕೋರಿತ್ತು.

ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಂಜಯ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತನ್ನ ಇಡಿ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ. ಈ ನೀತಿಯ ಲಾಭವನ್ನು ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ಸ್ವೀಕರಿಸಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂತರ ಈ ಪ್ರಕರಣದಲ್ಲಿ ಸಿಂಗ್ ಅವರನ್ನು ಬಂಧಿಸಲಾಗಿದೆ.

ರೆಸ್ಟೋರೆಂಟ್ ಮಾಲೀಕ ದಿನೇಶ್ ಅರೋರಾ ಸಿಂಗ್ ಮತ್ತು ಸಿಸೋಡಿಯಾ ಇಬ್ಬರಿಗೂ ಆಪ್ತರಾಗಿದ್ದರು ಎಂದು ಇಡಿ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಜುಲೈನಲ್ಲಿ, ಅರೋರಾ ಅವರನ್ನು ಇಡಿ ಬಂಧಿಸಿತು, ಅವರು ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದರು.

2020ರಲ್ಲಿ ಎಎಪಿ ಸಂಸದರು ಅರೋರಾ ಅವರಿಗೆ ಕಡೆ ಮಾಡಿ, ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ ಮತ್ತು ಎಎಪಿಗೆ ಹಣದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಸಂಜಯ್ ಸಿಂಗ್ ಬಂಧನ: ಬಿಜೆಪಿ ಕಚೇರಿ ಹೊರಗೆ ಎಎಪಿ ಪ್ರತಿಭಟನೆ; ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...