Homeಮುಖಪುಟಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

- Advertisement -
- Advertisement -

ಹೊಸದಿಲ್ಲಿ: ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ​​ಸೋಮವಾರ ಬಾಕಿ ವೇತನ ಬಿಡುಗಡೆಗಾಗಿ ಒತ್ತಾಯಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಇಮಾಮ್‌ಗಳ ಗುಂಪು ಜಮಾಯಿಸಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿತು.

ಮಾಧ್ಯಮಗಳೊಂದಿಗೆ ಮಾತನಾಡಿದ ಮೌಲಾನಾ ಮಹ್ಫೂಜ್ ರೆಹಮಾನ್, “ನಾವು ಗುರುವಾರ ಬಂದಿದ್ದೇವು ಮತ್ತು ಶನಿವಾರದಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಬಹುದೆಂದು ಭರವಸೆ ನೀಡಲಾಗಿತ್ತು. ಆದರೆ ಆ ಭೇಟಿ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದು ಈಗ ನಮ್ಮ ಮೂರನೇ ಪ್ರಯತ್ನ. ಇಂದು ಅವರನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡದಿದ್ದರೆ, ನಾವು ಧರಣಿ ನಡೆಸುತ್ತೇವೆ ಮತ್ತು ಕಳೆದ 17 ತಿಂಗಳಿನಿಂದ ಬಾಕಿಯಿರುವ ನಮ್ಮ ಸಂಬಳ ಬಿಡುಗಡೆಯಾಗುವವರೆಗೆ ಬಿಡುವುದಿಲ್ಲ ಎಂದಿದ್ದಾರೆ.

ಇಮಾಮ್‌ಗಳು ತಮ್ಮ ಎರಡು ಪ್ರಮುಖ ಸಮಸ್ಯೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಅದರಲ್ಲಿ ವಕ್ಫ್ ಬೋರ್ಡ್‌ನಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಯನ್ನು ಭರ್ತಿ ಮಾಡುವುದು ಒಂದು ಬೇಡಿಕೆಯಾಗಿದೆ. ನಮ್ಮ ಬೇಡಿಕೆ ಕುರಿತು ಕೇಜ್ರಿವಾಲ್ ಅಥವಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾವು ರಾಜಕೀಯಕ್ಕಾಗಿ ಈ ಬೇಡಿಕೆಯನ್ನು ಇಡುತ್ತಿಲ್ಲ, ನಮಗೆ ನಿಜವಾದ ಕಾಳಜಿ ಇದೆ. ಸಿಇಒ ಇಲ್ಲದೆ ಇರುವ ಕಾರಣ ಹಣ ಬಿಡುಗಡೆಯಾದರೂ ನಮಗೆ ಸಂಬಳ ಸಿಗುವುದಿಲ್ಲ. ಸಿಇಒ ಅವರನ್ನು ತಕ್ಷಣವೇ ನೇಮಕಾತಿ ಮಾಡಬೇಕೆಂದು ಮೌಲಾನಾ ಮಹಫೂಜ್ ರೆಹಮಾನ್ ಹೇಳಿದ್ದಾರೆ.

ಮತ್ತೊಬ್ಬ ಮೌಲಾನಾ ಗಯ್ಯೂರ್ ಹಸನ್ ಮಾತನಾಡಿ, ಕಳೆದ 17 ತಿಂಗಳಿಂದ ನಮಗೆ ವೇತನ ನೀಡಿಲ್ಲ. ಹಲವು ಬಾರಿ ಭೇಟಿ ನೀಡಿ ಮನವಿ ಮಾಡಿದರೂ ಯಾವುದೇ ಪರಿಹಾರ ಸಿಕ್ಕಿಲ್ಲ. ನಾವು ಈಗ ಪ್ರತಿಭಟನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

1988ರಿಂದ ದೆಹಲಿ ವಕ್ಫ್ ಬೋರ್ಡ್ ಅಡಿಯಲ್ಲಿ ಇಮಾಮ್ ಆಗಿ ಸೇವೆ ಸಲ್ಲಿಸಿದ ಮುಫ್ತಿ ನರಜುಲ್ ಹಕ್ ಕಾಸ್ಮಿ ಮಾತನಾಡಿ, “ನಮ್ಮ ಬೇಡಿಕೆಗಳನ್ನು ಈಗ ಪರಿಹರಿಸದಿದ್ದರೆ, ಚುನಾವಣಾ ಅಧಿಸೂಚನೆ ಹೊರಡಿಸಿದ ನಂತರ ಪರಿಹಾರಕ್ಕೆ ಅವಕಾಶವಿಲ್ಲ. ಬಿಡುಗಡೆಯಾದ ಹಣವಿದ್ದರೂ ಕಾರ್ಯನಿರ್ವಹಣಾ ಸಿಇಒ ಇಲ್ಲದೆ ವೇತನ ನೀಡಲು ಸಾಧ್ಯವಿಲ್ಲ. ಸಿಇಒ ನೇಮಕ ಕಡ್ಡಾಯವಾಗಿದೆ ಎಂದಿದ್ದಾರೆ.

ತಮ್ಮ ಸಂಬಳ ತೀರಾ ಕಡಿಮೆ, ಕೇವಲ 18,000 ರೂ. ಮತ್ತು ಅದು ಕೂಡ 17 ತಿಂಗಳಿಂದ ಪಾವತಿಸಿಲ್ಲ ಹಲವಾರು ಇಮಾಮ್‌ಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು, ಇಮಾಮ್ ಗಳ ತಂಡವು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಿತ್ತು. ಆದರೆ ಅವರಿಂದ ಯಾವುದೇ ನಿರ್ದಿಷ್ಟ ಪರಿಹಾರಗಳನ್ನು ನೀಡಲಾಗಿಲ್ಲ ಎಂದು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಿದ್ಧ ಎಂದು ಇಮಾಮ್‌ಗಳು ಸ್ಪಷ್ಟಪಡಿಸಿದ್ದಾರೆ.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...