HomeUncategorizedಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ವಿರುದ್ಧ ಆಪ್ ಪ್ರತಿಭಟನೆ

- Advertisement -
- Advertisement -

ನವದೆಹಲಿ: ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ (ಎಎಪಿ)ವು  ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆ ನಡೆಸಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಅಮಿತ್ ಶಾ ಅವರ ಹೇಳಿಕೆ  ಡಾ.ಬಿ.ಆರ್.ಅಂಬೇಡ್ಕರ್ ಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದಾರೆ.

ಅಂಬೇಡ್ಕರ್, ಅಂಬೇಡ್ಕರ್ ಎಂದು ಪಠಿಸುವುದು ನಮಗೆ ಏನೂ ಸಹಾಯ ಮಾಡುವುದಿಲ್ಲ; ದೇವರನ್ನು ಸ್ತುತಿಸುವುದೇ ಉತ್ತಮ. ಇದರಿಂದ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂದು ಅಮಿತ್ ಶಾ ಅವರು ಡಾ. ಅಂಬೇಡ್ಕರ್ ಅವರ ಕುರಿತು ಲೇವಡಿ ಮಾಡಿದ್ದರು. ಈ ದೇಶದ ಬಡವರು, ತುಳಿತಕ್ಕೊಳಗಾದವರಿಗೆ, ಅಂಚಿನಲ್ಲಿರುವವರಿಗೆ ಮತ್ತು ಹಿಂದುಳಿದವರಿಗ ಡಾ. ಅಂಬೇಡ್ಕರ್ ದೇವರಿಗಿಂತ ಕಡಿಮೆಯಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಜನ ಸಾವಿನ ನಂತರ ಸ್ವರ್ಗವನ್ನು ತಲುಪುತ್ತಾರೆಯೇ ಎಂದು ನಾವು ಹೇಳಲು ಸಾಧ್ಯವಿಲ್ಲ, ಆದರೆ ಭೂಮಿಯ ಮೇಲೆ, ಲಕ್ಷಾಂತರ ಹಿಂದುಳಿದ ಜನರು ತಮ್ಮ ಘನತೆ ಮತ್ತು ಹಕ್ಕುಗಳಿಗೆ ಸಂವಿಧಾನವನ್ನು ನೀಡಿದ ಡಾ. ಅಂಬೇಡ್ಕರ್ ಅವರಿಗೆ ಋಣಿಯಾಗಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯು ಲಕ್ಷಾಂತರ ಭಾರತೀಯ ಜನರ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಅಮಿತ್ ಶಾ ಅವರನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡ ರೀತಿ ನೋಡಿದರೆ ಇದು ಸ್ವಯಂಪ್ರೇರಿತ ಹೇಳಿಕೆಯಲ್ಲ ಎಂದು ತೋರುತ್ತದೆ. ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸಲು ಬಿಜೆಪಿ ನಡೆಸಿದ ವ್ಯವಸ್ಥಿತ ತಂತ್ರವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ನಾವು ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ಈಗ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಅದು ಡಾ. ಅಂಬೇಡ್ಕರ್ ಅವರು ನಮಗೆ ನೀಡಿದ ಸಂವಿಧಾನದ ವಿರುದ್ಧವಾಗಿದ್ದಾರೆ.  ಡಾ. ಅಂಬೇಡ್ಕರ್ ಜೊತೆ ನಿಲ್ಲುತ್ತಾರೆಯೇ ಅಥವಾ ಬಿಜೆಪಿಯೊಂದಿಗೆ ನಿಲ್ಲುತ್ತಾರೆಯೇ? ಎಂಬುದನ್ನು ಬಿಜೆಪಿ ಬೆಂಬಲಿಗರು ಈಗ ಆಯ್ಕೆ ಮಾಡಬೇಕು. ಅವರು ಎರಡನ್ನೂ ಬೆಂಬಲಿಸಲು ಸಾಧ್ಯವಿಲ್ಲ. ಬಿಜೆಪಿಯ ನಾಯಕತ್ವವು ಡಾ. ಅಂಬೇಡ್ಕರ್ ಬಗ್ಗೆ ತಮ್ಮ ತಿರಸ್ಕಾರವನ್ನು ತೋರಿಸಿದೆ ಮತ್ತು ನಾವು ಗೃಹ ಸಚಿವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಯಾವುದೇ ಕ್ರಮವು ಅಮಿತ್ ಶಾ ಮಾಡಿದ ಹಾನಿಯನ್ನು  ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಿಲ್ಲ. ಆದರೆ ಶಾರ ಇಂತಹ ಅಗೌರವವನ್ನು ನಾವ ಸಹಿಸುವುದಿಲ್ಲ ಎಂಬ ಸಂದೇಶವನ್ನು ಕಳುಹಿಸುವುದು ಅತ್ಯಗತ್ಯ ಎಂದು ಅವರು ಹೇಳಿದರು.

ಬಿಜೆಪಿಯ ಉನ್ನತ ನಾಯಕತ್ವವು ಡಾ. ಅಂಬೇಡ್ಕರ್ ಅವರನ್ನು ಹೇಗೆ ಅವಮಾನಿಸಿದೆ ಎಂಬುದನ್ನು ನಾವು ಪ್ರತಿ ಮನೆಗೂ ಕೊಂಡೊಯ್ಯುತ್ತೇವೆ. ದೆಹಲಿ ಮತ್ತು ದೇಶದಾದ್ಯಂತ, ಬಿಜೆಪಿಯು ನಮ್ಮ ಸಂವಿಧಾನ ಶಿಲ್ಪಿಯನ್ನು ಹೇಗೆ ಅಗೌರವಗೊಳಿಸುತ್ತಿದೆ ಎಂಬುದರ ಬಗ್ಗೆ ಜನತೆ ತಿಳಿದುಕೊಳ್ಳಬೇಕಿದೆ ಎಂದು ಎಎಪಿಯ ಮಾಜಿ ಮುಖ್ಯಮಂತ್ರಿ ಪ್ರತಿಪಾದಿಸಿದರು.

ಏತನ್ಮಧ್ಯೆ, ಹಿರಿಯ ಆಪ್ ನಾಯಕ ಮನೀಶ್ ಸಿಸೋಡಿಯಾ ಮಾತನಾಡಿ, “ಡಾ. ಅಂಬೇಡ್ಕರ್ ಅವರ ಬಗ್ಗೆ ಹೆಚ್ಚುತ್ತಿರುವ ಗೌರವದಿಂದ ಗೃಹ ಸಚಿವ ಅಮಿತ್ ಶಾ ಸಿಟ್ಟಿಗೆದ್ದಿದ್ದಾರೆ. ಇಂದು ಇಡೀ ರಾಷ್ಟ್ರವು ‘ಅಂಬೇಡ್ಕರ್, ಅಂಬೇಡ್ಕರ್’ ಎಂದು ಜಪಿಸುತ್ತಿದೆ ಎಂದು ಅವರು ಹೇಳಿದರು.

ಸಂಸದ ಸಂಜಯ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಡಾ. ಸಂದೀಪ್ ಪಾಠಕ್, ಮುಖ್ಯಮಂತ್ರಿ ಅತಿಶಿ ಮತ್ತು ಕ್ಯಾಬಿನೆಟ್ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ : ಮಂಡ್ಯದಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...