Homeಮುಖಪುಟಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಆಪ್‌ನಿಂದ ’ಬೈಕ್ ತಳ್ಳು’ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಆಪ್‌ನಿಂದ ’ಬೈಕ್ ತಳ್ಳು’ ಪ್ರತಿಭಟನೆ

ಪ್ರಗತಿ ಸಾಧಿಸಿ ಮುಂದಕ್ಕೆ ಹೋಗುತ್ತಿದ್ದ ದೇಶವನ್ನು  ಮೋದಿ- ಅಂಬಾನಿ, ಮೋದಿ-ಅದಾನಿ ಜೋಡಿ ಹಿಂದಕ್ಕೆ ತಳ್ಳುತ್ತಿದೆ ಎಂದು ಆಮ್‌ಆದ್ಮಿ ಆರೋಪಿಸಿದೆ

- Advertisement -
- Advertisement -

ರಾಜ್ಯ ಸರ್ಕಾರವೂ ಜನರ ನೆರವಿಗೆ ನಿಲ್ಲದೆ ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಈ ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಇಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ “ಬೈಕ್ ತಳ್ಳು” ಎಂಬ ವಿನೂತನ ಪ್ರತಿಭಟನೆ ನಡೆಸಿದರು.

ಪಕ್ಷದ ಬೆಂಗಳೂರು ನಗರ ಅಧ್ಯಕ್ಷ, ಮೋಹನ್ ದಾಸರಿ ಮಾತನಾಡಿ, ’ಮನೆಮುರುಕ ಕೇಂದ್ರದ ಬಿಜೆಪಿ ಹಾಗೂ ರಾಜ್ಯ ಸರ್ಕಾರದ ನಿರ್ಧಾರಗಳಿಂದ ಯಾರ ಮನೆಯೂ ಉದ್ದಾರವಾಗಿಲ್ಲ, ಎಲ್ಲಾ ಹಂತದಲ್ಲೂ ಜನ ಸಾಮಾನ್ಯರ ಕತ್ತು ಹಿಸುಕಿ ಕೊಲ್ಲಲಾಗುತ್ತಿದೆ. ಭಾರತದ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಬೆಲೆ ಹೆಚ್ಚಳ ಮಾಡಿ ಜನರನ್ನು ದೋಚಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೆಹಲಿ V/s ಉತ್ತರ ಪ್ರದೇಶ: ಸರ್ಕಾರಿ ಶಾಲೆಗಳ ವಾಸ್ತವತೆ ಬಿಚ್ಚಿಡಲು ಆಪ್ ಅಭಿಯಾನ

’ಕಳೆದ ವರ್ಷ ಇದೇ ಹೊತ್ತಿನಲ್ಲಿ ಕಚ್ಚಾತೈಲದ ಬೆಲೆ 62 ಡಾಲರ್ ಇತ್ತು, ಈಗ 40 ಡಾಲರ್‌ಗೆ ಇಳಿದಿದೆ ಆದರೂ ಪೆಟ್ರೋಲ್ ಬೆಲೆ ಮಾತ್ರ 86 ರೂಪಾಯಿಗಿಂತ ಹೆಚ್ಚಿದೆ. ಪ್ರಗತಿ ಸಾಧಿಸಿ ಮುಂದಕ್ಕೆ ಹೋಗುತ್ತಿದ್ದ ದೇಶವನ್ನು  ಮೋದಿ- ಅಂಬಾನಿ-ಅದಾನಿ ಜೋಡಿ ಹಿಂದಕ್ಕೆ ತಳ್ಳುತ್ತಿದೆ’ ಎಂದು ಮೋಹನ್ ದಾಸರಿ ಕಿಡಿಕಾರಿದರು.

’ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪೆಟ್ರೋಲ್‌ ಅನ್ನು 40 ರೂಪಾಯಿಗೆ ನೀಡಬಹುದು ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಅಲ್ಲದೇ ಕಚ್ಚಾ ತೈಲವನ್ನು ಸಂಸ್ಕರಿಸಲು ಕೇವಲ 30 ರೂಪಾಯಿ ಖರ್ಚಾಗುತ್ತದೆ ಎಂದಿದ್ದಾರೆ. ಆದರೂ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವ ಸರ್ಕಾರಕ್ಕೂ ಕಳ್ಳನಿಗೂ ಏನು ವ್ಯತ್ಯಾ”

 

 

 

ಎಂದು ಕಟುವಾಗಿ ಪ್ರಶ್ನಿಸಿದರು.

 

ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ ಪ್ರತಿಭಟನಾಕಾರರು, ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕಣ್ಣು, ಕಿವಿ ಏನೂ ಕೇಳಿಸದ ಕಾರಣ ನಮ್ಮ ಪ್ರತಿಭಟನೆ ಅವರಿಗೆ ಕೇಳಿಸುವುದಿಲ್ಲ. ಹಾಗಾಗಿ ನಾವು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯದ ಪಾಲಿನ ತೆರಿಗೆಯನ್ನಾದರೂ ಕಡಿಮೆ ಮಾಡಿ ಎಂದು ಆಗ್ರಹಿಸುತ್ತಿದ್ದೇವೆ ಎಂದರು.


ಇದನ್ನು ಓದಿ: ದೆಹಲಿ V/s ಉತ್ತರ ಪ್ರದೇಶ: ಮಾದರಿ ಶಾಲೆ ಚರ್ಚೆಗೆ ಬಾರದ ಉತ್ತರ ಪ್ರದೇಶ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...