Homeಮುಖಪುಟದೆಹಲಿ: ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆ: ಎಎಪಿ ಕಾರ್ಯಕರ್ತರ ಬಂಧನ

ದೆಹಲಿ: ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆ: ಎಎಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ದೆಹಲಿಯಲ್ಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ನೂರಾರು ಎಎಪಿ ಕಾರ್ಯಕರ್ತರು ಪಕ್ಷದ ಪ್ರಧಾನ ಕಚೇರಿಯಿಂದ ಬಿಜೆಪಿ ಪ್ರಧಾನ ಕಚೇರಿಗೆ ಮೆರವಣಿಗೆ ನಡೆಸಿದ್ದಾರೆ. ಎಎಪಿ ಕಾರ್ಯಕರ್ತರು ಸಂಸದರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುವ ಫಲಕಗಳನ್ನು ಹಿಡಿದುಕೊಂಡಿದ್ದರು. ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮತ್ತು ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಕೂಡ ಬಿಡುಗಡೆ ಮಾಡುವಂತೆ ಪಕ್ಷದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರವು ವಿರೋಧ ಪಕ್ಷಗಳನ್ನು ತೊಲಗಿಸಲು ಕುತಂತ್ರ ನಡೆಸುತ್ತಿದೆ. ಬಿಜೆಪಿಯನ್ನು ಪ್ರಶ್ನಿಸುವವರನ್ನು ಜೈಲಿಗೆ ಹಾಕಲಾಗುತ್ತದೆ. ಪ್ರಾಮಾಣಿಕರು ಜೈಲು ಪಾಲಾದರೆ ಭ್ರಷ್ಟರು ಜೈಲಿನ ಹೊರಗೆ ಉಳಿದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ವೇಳೆ ದೆಹಲಿ ಸಚಿವ ಗೋಪಾಲ್‌ ರೈ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳವನ್ನು  ದುರುಪಯೋಗಪಡಿಸಿಕೊಳ್ಳುತ್ತಿದೆ. ಮೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತುವವರು ಇ.ಡಿ ಮತ್ತು ಸಿಬಿಐ ದಾಳಿಗಳನ್ನು ಎದುರಿಸುತ್ತಾರೆ. ಪ್ರಾಮಾಣಿಕತೆ ಹೊಂದಿರುವವರನ್ನು ಜೈಲಿಗೆ ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಕೇಂದ್ರ ಕಚೇರಿ ಬಳಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ ಎಎಪಿ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಅ.4 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಿಂಗ್ ಅವರ ನಿವಾಸದಲ್ಲಿ  ಶೋಧ ನಡೆಸಿದ ನಂತರ ಮದ್ಯದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿದ್ದರು. ಸಿಂಗ್ ಅವರಿಗೆ ಅ.27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮನೀಶ್‌ ಸಿಸೋಡಿಯಾ ಅವರನ್ನು ಕೂಡ ಬಂಧಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...