Homeಮುಖಪುಟಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

ಎಎಪಿಗೆ ರಾಜೀನಾಮೆ ನೀಡಿದ್ದ ಎಲ್ಲಾ 8 ಶಾಸಕರು ಬಿಜೆಪಿಗೆ ಸೇರ್ಪಡೆ!

- Advertisement -
- Advertisement -

ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ ರಾಜೀನಾಮೆ ನೀಡಿದ್ದ ದೆಹಲಿಯ ಎಂಟು ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಫೆಬ್ರವರಿ 5 ರಂದು ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಸೇರಿದ್ದು ಆಡಳಿತರೂಢ ಎಎಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಎಎಪಿಗೆ ರಾಜೀನಾಮೆ

ತ್ರಿಲೋಕಪುರಿಯ ನಿರ್ಗಮಿತ ಶಾಸಕ ರೋಹಿತ್ ಕುಮಾರ್ ಮೆಹ್ರೌಲಿಯಾ, ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ, ಕಸ್ತೂರ್ಬಾ ನಗರ ಶಾಸಕ ಮದನ್ ಲಾಲ್, ಮೆಹ್ರೌಲಿ ಶಾಸಕ ನರೇಶ್ ಯಾದವ್, ಬಿಜ್ವಾಸನ್ ಶಾಸಕ ಭೂಪಿಂದರ್ ಸಿಂಗ್ ಜೂನ್, ಪಾಲಂ ಶಾಸಕ ಭಾವನಾ ಗೌರ್, ಆದರ್ಶ ನಗರ ಶಾಸಕ ಪವನ್ ಶರ್ಮಾ ಮತ್ತು ಮದೀಪುರ ಶಾಸಕ ಗಿರೀಶ್ ಸೋನಿ ಶನಿವಾರ ಬಿಜೆಪಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ದೆಹಲಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡ ಅವರ ಸಮ್ಮುಖದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರಿದ್ದಾರೆ. ಮೆಹ್ರೌಲಿ ಶಾಸಕ ನರೇಶ್ ಯಾದವ್ ಹೊರತುಪಡಿಸಿ, ರಾಜೀನಾಮೆ ನೀಡಿದ ಯಾವುದೇ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿರಲಿಲ್ಲ. ಎಎಪಿಗೆ ರಾಜೀನಾಮೆ

ಶಾಸಕರು “ಆಪ್ಡಾ [ವಿಪತ್ತು]” ದಿಂದ ತಮ್ಮನ್ನು ಮುಕ್ತಗೊಳಿಸಿಕೊಂಡಿದ್ದರಿಂದ ಇದು ಐತಿಹಾಸಿಕ ದಿನವಾಗಿದೆ. ಚುನಾವಣೆಯ ನಂತರ ದೆಹಲಿಯೂ ಅದರಿಂದ ಮುಕ್ತವಾಗುತ್ತದೆ ಎಂದು ಅವರು ಆಶಿಸಿದ್ದಾರೆ ಎಂದು ಪಾಂಡ ಇದೇ ವೇಳೆ ಹೇಳಿದ್ದಾರೆ.

ಮೆಹ್ರೌಲಿ ಶಾಸಕ ನರೇಶ್ ಯಾದವ್ ಅವರು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಬರೆದ ರಾಜೀನಾಮೆ ಪತ್ರದಲ್ಲಿ,  “ಪಕ್ಷದಲ್ಲಿ ಭ್ರಷ್ಟಾಚಾರ ನುಸುಳಿದೆ” ಎಂದು ಆರೋಪಿಸಿದ್ದಾರೆ. “ದಲಿತ ಮತ್ತು ವಾಲ್ಮೀಕಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಪಡೆಯಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರದ ವಿರುದ್ಧದ ಚಳವಳಿಯ ಸಮಯದಲ್ಲಿ ತಾನು ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದೇನೆ” ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷವು ಈ ಸಮುದಾಯಗಳನ್ನು ಉನ್ನತೀಕರಿಸುವುದಾಗಿ ಭರವಸೆ ನೀಡಿತ್ತು ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಗುತ್ತಿಗೆ ಆಧಾರಿತ ಕಾರ್ಮಿಕರನ್ನು ರದ್ದುಗೊಳಿಸುವುದು ಮತ್ತು ತಾತ್ಕಾಲಿಕ ಕಾರ್ಮಿಕರನ್ನು ಶಾಶ್ವತವಾಗಿ ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳನ್ನು ಪರಿಹರಿಸುವಲ್ಲಿ ಪಕ್ಷವೂ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಜನಕಪುರಿ ಕ್ಷೇತ್ರವನ್ನು ಪ್ರತಿನಿಧಿಸುವ ರಾಜೇಶ್ ರಿಷಿ ತಮ್ಮ ರಾಜೀನಾಮೆ ಪತ್ರದಲ್ಲಿ, ಎಎಪಿ ತನ್ನ ಮೂಲ ಮೌಲ್ಯಗಳಿಂದ ದೂರ ಸರಿದಿದೆ ಎಂದು ಹೇಳಿಕೊಂಡಿದ್ದಾರೆ. “ಪಕ್ಷವು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿ ಮಾರ್ಪಟ್ಟಿದೆ. ಅದು ಸ್ಥಾಪಿಸಲಾದ ಭ್ರಷ್ಟಾಚಾರ-ಮುಕ್ತ ಮತ್ತು ಪಾರದರ್ಶಕ ಸರ್ಕಾರದ ತತ್ವಗಳಿಗೆ ದ್ರೋಹ ಬಗೆದಿದೆ” ಎಂದು ಅವರು ಟೀಕಿಸಿದ್ದಾರೆ.

ಶಾಸಕರಾದ ಲಾಲ್ ಮತ್ತು ಗೌರ್ ತಮ್ಮ ಪತ್ರಗಳಲ್ಲಿ ಕೇಜ್ರಿವಾಲ್ ಮತ್ತು ಪಕ್ಷದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಎಲ್ಲಾ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಸಲ್ಲಿಸಿದ್ದು, ಅವರು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2020 ರಲ್ಲಿ ನಡೆದ ಕಳೆದ ರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದೆ.

ಇದನ್ನೂಓದಿ:  Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ.

Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...