Homeಮುಖಪುಟಸ್ಲಂ ತೆರವು ಕಾರ್ಯಾಚರಣೆ; 'ಘರ್ ಬಚಾವೋ, ಬಿಜೆಪಿ ಹಟಾವೋ' ಅಭಿಯಾನ ಆರಂಭಿಸಿದ ಎಎಪಿ

ಸ್ಲಂ ತೆರವು ಕಾರ್ಯಾಚರಣೆ; ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನ ಆರಂಭಿಸಿದ ಎಎಪಿ

- Advertisement -
- Advertisement -

ರಾಷ್ಟ್ರ ರಾಜಧಾನಿಯ ಸ್ಲಂ ಕ್ಲಸ್ಟರ್‌ಗಳಿಗೆ ಭೇಟಿ ನೀಡಿದ ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್, ‘ಕೊಳೆಗೇರಿ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ’ ಎಂದು ಭಾನುವಾರ ಆರೋಪಿಸಿದ್ದಾರೆ.

ದೆಹಲಿಯ ಕೊಳೆಗೇರಿ ನಿವಾಸಿಗಳನ್ನು ನಿರಾಶ್ರಿತರನ್ನಾಗಿ ಮಾಡುವ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಎಎಪಿಯ ‘ಘರ್ ಬಚಾವೋ, ಬಿಜೆಪಿ ಹಟಾವೋ’ ಅಭಿಯಾನವನ್ನು ಪ್ರಾರಂಭಿಸಿದೆ.
ಅತಿಶಿ ಅವರು ಬಿ ಆರ್ ಕ್ಯಾಂಪ್ ಕೊಳೆಗೇರಿಗೆ ಭೇಟಿ ನೀಡಿದಾಗ ಅವರ ಸಂಪುಟ ಸಹೋದ್ಯೋಗಿ ಭಾರದ್ವಾಜ್ ಅವರು ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್ ಬಳಿಯ ಕೊಳೆಗೇರಿ ನಿವಾಸಿಗಳನ್ನು ಭೇಟಿ ಮಾಡಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೆಹಲಿಯ ಕೊಳಚೆ ಪ್ರದೇಶಗಳನ್ನು ನೆಲಸಮ ಮಾಡಲು ಮತ್ತು ಅದರ ನಿವಾಸಿಗಳನ್ನು ಅವರ ಮನೆಗಳಿಂದ 40 ರಿಂದ 50 ಕಿಮೀ ದೂರಕ್ಕೆ ಸ್ಥಳಾಂತರಿಸಲು ಪಿತೂರಿ ನಡೆಸುತ್ತಿದೆ. ಎಎಪಿ ಮತ್ತು (ದೆಹಲಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ (ಸ್ಲಂ ನಿವಾಸಿಗಳು) ನಿಂತಿದ್ದಾರೆ’ ಎಂದು ಅತಿಶಿ ಹೇಳಿದರು.

ಬಿಆರ್‌ ಕ್ಯಾಂಪ್‌ನ ಜನರಿಗೆ ಈಗಿರುವ ಮನೆಗಳಲ್ಲೇ ಫ್ಲಾಟ್‌ಗಳು ಸಿಗುವುದಿಲ್ಲವೋ ಅಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಡಿಡಿಎ ಮುಟ್ಟಲು ಬಿಡುವುದಿಲ್ಲ ಎಂದು ಸಚಿವರು ಹೇಳಿದರು.

‘ನಾವು ಬುಲ್ಡೋಜರ್‌ಗಳ ಮುಂದೆ ನಿಲ್ಲಬೇಕೇ ಅಥವಾ ನ್ಯಾಯಾಲಯದಿಂದ ಆದೇಶವನ್ನು ಪಡೆಯಬೇಕೇ, ಆಮ್ ಆದ್ಮಿ ಪಕ್ಷವು ಬಿಆರ್ ಕ್ಯಾಂಪ್‌ನ ಸ್ಲಂಗಳಲ್ಲಿ ವಾಸಿಸುವ ಜನರನ್ನು ನಿರಾಶ್ರಿತರಾಗಲು ಬಿಡುವುದಿಲ್ಲ. ಸ್ಲಂ ನಿವಾಸಿಗಳ ಬಗ್ಗೆ ಬಿಜೆಪಿ ನಾಚಿಕೆಪಡುತ್ತದೆ, ಅದಕ್ಕಾಗಿಯೇ ಅವರು ಬುಲ್ಡೋಜರ್ ಬಳಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದರು.

ಬಿಜೆಪಿ ನೇತೃತ್ವದ ಡಿಡಿಎ, ಸ್ಲಂ ನಿವಾಸಿಗಳನ್ನು ನರೇಲಾ ಮತ್ತು ಕಾಕ್ರೋಲಾದಲ್ಲಿ 50 ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಒತ್ತಾಯಿಸುತ್ತಿದೆ. ಅವರ ಉದ್ಯೋಗಗಳು ಮತ್ತು ಅವರ ಮಕ್ಕಳ ಶಾಲೆಗಳಿಂದ ಅವರನ್ನು ಮೈಲುಗಳಷ್ಟು ದೂರ ತಳ್ಳುತ್ತಿದೆ ಎಂದು ಅವರು ಹೇಳಿದರು.

ಇದೇ ರೀತಿಯ ಮಾತನಾಡಿದ ಭಾರದ್ವಾಜ್, ಇಲ್ಲಿನ ನಿವಾಸಿಗಳು ಚಾಲಕರು, ಸೇವಕರು, ಅಡುಗೆ ಸೇರಿದಂತೆ ಇತ್ಯಾದಿ ಕೆಲಸಗಳನ್ನು ಮಾಡುತ್ತಾ ದೆಹಲಿಯ ಜೆಜೆ ಕ್ಲಸ್ಟರ್‌ಗಳಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಜನರನ್ನು (ಸ್ಲಂ ನಿವಾಸಿಗಳನ್ನು) ಅವರ ಮನೆಗಳಿಂದ ಹೊರಹಾಕಲು ಅವರ ವಿರುದ್ಧ ಪಿತೂರಿ ನಡೆಸುತ್ತಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಅವರಿಗೆ ಸರಿಯಾದ ಮನೆಗಳನ್ನು ನೀಡದೆ, ಪಟ್ಟಿ ಮಾಡಲಾದ ಕ್ಲಸ್ಟರ್ ಅನ್ನು ಕೆಡವಲು ಸಾಧ್ಯವಿಲ್ಲ. ಬಿಜೆಪಿ ಮಾಡುತ್ತಿರುವುದು ಕಾನೂನುಬಾಹಿರ ಮತ್ತು ಅಮಾನವೀಯ’ ಎಂದು ಆರೋಪಿಸಿದರು.

ಕಾನೂನಿನ ಪ್ರಕಾರ ಕೊಳೆಗೇರಿ ನಿವಾಸಿಗಳಿಗೆ ಇನ್-ಸಿಟು ಹೌಸ್ ಒದಗಿಸುವವರೆಗೆ ದೆಹಲಿಯಲ್ಲಿ ಯಾವುದೇ ಜೆಜೆ ಕ್ಲಸ್ಟರ್ ಅನ್ನು ಕೆಡವಲು ಆದೇಶ ನೀಡದಂತೆ ಭಾರದ್ವಾಜ್ ಅವರು ನ್ಯಾಯಾಂಗವನ್ನು ಒತ್ತಾಯಿಸಿದರು. ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಸಚಿವರು, ಸಫ್ದರ್‌ಜಂಗ್ ಫ್ಲೈಯಿಂಗ್ ಕ್ಲಬ್‌ನ ಸ್ಲಂ ಕ್ಲಸ್ಟರ್‌ ಜನಗಳಿಗೆ ನೋಟಿಸ್ ನೀಡಿರುವ ರೈಲ್ವೇ, ಜನರು ತಾವಾಗಿಯೇ ಸ್ಥಳಾಂತರಿಸಬೇಕು ಎಂದು ಹೇಳಿದೆ. ಆದರೆಮ ಅವರ ಪುನರ್ವಸತಿ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ’ ಎಂದರು.

‘ಸುಂದರ್ ನರ್ಸರಿ, ತುಘಲಕಾಬಾದ್, ಮೆಹ್ರೌಲಿ, ವಸಂತ್ ವಿಹಾರ್ ಮತ್ತು ಪ್ರಿಯಾಂಕಾ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಏಜೆನ್ಸಿಗಳು ಅಸಂಖ್ಯಾತ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ’ ಎಂದು ಭಾರದ್ವಾಜ್ ಹೇಳಿದರು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಆಡಳಿತದಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಎಎಸ್ಐ, ರೈಲ್ವೇ, ಡಿಡಿಎ, ಭೂ ಮತ್ತು ಅಭಿವೃದ್ಧಿ ಸಂಸ್ಥೆಗಳು ತಮ್ಮ ಸ್ವಾಮ್ಯದ ಜಮೀನುಗಳಲ್ಲಿರುವ ಜೆಜೆ ಕ್ಲಸ್ಟರ್‌ಗಳನ್ನು ಕೆಡವಲು ‘ಸಂಚು’ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಪಿಸಿದರು.

‘ಈ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಇಲ್ಲಿ ವಾಸಿಸುತ್ತಿದ್ದಾರೆ, ಆ ಮಕ್ಕಳು ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿತ್ತಾರೆ. ಆ ಮಹಿಳೆಯರು ಹತ್ತಿರದ ಮನೆಗಳಲ್ಲಿ ಕೆಲಸ ಮಾಡುತ್ತಾರೆ, ಪುರುಷರು ಹತ್ತಿರದ ಮಾರುಕಟ್ಟೆಗಳಲ್ಲಿ ಕೆಲಸ ಮಾಡುತ್ತಾರೆ. ಈ ಜನರು ಈಗ ಎಲ್ಲಿಗೆ ಹೋಗುತ್ತಾರೆ’ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ; ಐದು ವರ್ಷಗಳಲ್ಲಿ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...