Homeಮುಖಪುಟಚುನಾವಣೆ ಗೆಲ್ಲಲು AAP ಕೋಮು ತಂತ್ರವನ್ನು ಬಳಸಿದೆ: ಬಿಜೆಪಿ ಆರೋಪ

ಚುನಾವಣೆ ಗೆಲ್ಲಲು AAP ಕೋಮು ತಂತ್ರವನ್ನು ಬಳಸಿದೆ: ಬಿಜೆಪಿ ಆರೋಪ

- Advertisement -
- Advertisement -

ದೆಹಲಿಯ ಎಎಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ನಾವು ಮನೆ ಮನೆಗೆ ಹೋಗುತ್ತಿದ್ದೇವೆ. ಅವರು ಆಡಳಿತದ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಿದ್ದಾರೆ ಮತ್ತು ಚುನಾವಣೆಯನ್ನು ಗೆಲ್ಲಲು ಕೋಮು ತಂತ್ರಗಳನ್ನು ಬಳಸಿದ್ದಾರೆ ಎಂದು ದೆಹಲಿ ಬಿಜೆಪಿಯ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಭಾನುವಾರ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜಧಾನಿಯ ಆಡಳಿತಾತ್ಮಕ ವ್ಯವಹಾರಗಳ ಬಗ್ಗೆ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಮಸೂದೆಯ ಪ್ರಸ್ತಾಪವನ್ನು ಆಮ್ ಆದ್ಮಿ ಪಕ್ಷ ಟೀಕಿಸಿದೆ. ಬಿಜೆಪಿಯ ದೆಹಲಿ ಘಟಕವು ಮನೆ ಮನೆಗೆ ತೆರಳಿ ಚುನಾಯಿತ ಸರ್ಕಾರದ ಬದಲು ಲೆಪ್ಟಿನೆಂಟ್ ಗವರ್ನರ್‌ ಆಡಳಿತದ ದೆಹಲಿಯ ಕಲ್ಪನೆಯನ್ನು ಅನುಮೋದಿಸುತ್ತಿದೆ ಎಂದು ಆರೋಪಿಸಿದೆ.

“ಬಿಜೆಪಿ ಸ್ವಯಂಸೇವಕರನ್ನು ಮನೆಮನೆಗಳಿಗೆ ಕಳುಹಿಸಿ, ಚುನಾಯಿತ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್‌ ದೆಹಲಿಯನ್ನು ಆಳುವುದು ಉತ್ತಮ ಎಂದು ಜನರಿಗೆ ಹೇಳುತ್ತಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಪುರಸಭೆಯ ಮಟ್ಟದಲ್ಲಿಯೂ ಅವರು ವಿಫಲರಾಗುತ್ತಿದ್ದಾರೆ” ಎಂದು ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ಅಭ್ಯರ್ಥಿ ವಿರುದ್ಧ ಜಯ ಸಾಧಿಸಿದ ಪಿ.ವಿ ನರಸಿಂಹ ರಾವ್ ಪುತ್ರಿ

“ದೆಹಲಿಯಲ್ಲಿ ಚುನಾಯಿತ ಸರ್ಕಾರದ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುವ ಕಲ್ಪನೆಯನ್ನು ಅವರು ಅನುಮೋದಿಸಲು ಇದು ಒಂದೇ ಕಾರಣವಾಗಿದೆ. ಈ ವಿಷಯದ ಬಗ್ಗೆ ಚರ್ಚೆ ನಡೆಸಲು ನಾನು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರಿಗೆ ಸವಾಲು ಹಾಕುತ್ತೇನೆ” ಎಂದು ಭಾರದ್ವಾಜ್ ಹೇಳಿದ್ದಾರೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಸೂದೆಯನ್ನು “ಅಸಂವಿಧಾನಿಕ” ಮತ್ತು “ಪ್ರಜಾಪ್ರಭುತ್ವ ವಿರೋಧಿ” ಎಂದು ಕರೆದಿದ್ದರು.

ಈ ಬಗ್ಗೆ ಪ್ರತಿಕ್ರಿಯಸಿರುವ ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್, “ಲೆಫ್ಟಿನೆಂಟ್ ಗವರ್ನರ್‌ ಆಡಳಿತದ ದೆಹಲಿಯ ಕಲ್ಪನೆಯನ್ನು ನಾವು ಎಂದಿಗೂ ಅನುಮೋದಿಸಿಲ್ಲ. ದೆಹಲಿಯ ಎಎಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ ನಾವು ಮನೆ ಮನೆಗೆ ಹೋಗುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಅವರು ಆಡಳಿತದ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಿದ್ದಾರೆ ಮತ್ತು ಚುನಾವಣೆಯನ್ನು ಗೆಲ್ಲಲು ಕೋಮು ತಂತ್ರಗಳನ್ನು ಬಳಸಿದ್ದಾರೆ. ನಮ್ಮ ಘಟಕದ ಅಧ್ಯಕ್ಷರಿಗೆ ಸವಾಲು ಹಾಕುವ ಬದಲು, ಆಡಳಿತದ ಮುಂಚೂಣಿಯಲ್ಲಿ ಎಎಪಿ ಹೇಗೆ ಕಾರ್ಯನಿರ್ವಹಿಸಿದೆ ಎಂಬುದರ ಕುರಿತು ಚರ್ಚೆಗೆ ಭಾರದ್ವಾಜ್ ಸಿದ್ಧರಾಗಬೇಕು” ಎಂದು ಕಪೂರ್‌ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಭಾಷಣದಲ್ಲಿ ಮೋದಿ, ಶಾ ಮತ್ತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...