Homeಮುಖಪುಟಲೋಕಸಭೆ ಚುನಾವಣೆ: ಪಂಜಾಬ್‌ನಲ್ಲಿ ಸ್ವತಂತ್ರ ಸ್ಪರ್ಧೆ ಘೋಷಿಸಿದ ಆಮ್ ಆದ್ಮಿ ಪಕ್ಷ

ಲೋಕಸಭೆ ಚುನಾವಣೆ: ಪಂಜಾಬ್‌ನಲ್ಲಿ ಸ್ವತಂತ್ರ ಸ್ಪರ್ಧೆ ಘೋಷಿಸಿದ ಆಮ್ ಆದ್ಮಿ ಪಕ್ಷ

- Advertisement -
- Advertisement -

ಆಮ್ ಆದ್ಮಿ ಪಕ್ಷ (ಎಎಪಿ) ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಮತ್ತು ಇಂಡಿಯಾ ಮೈತ್ರಿಕೂಟದಿಂದ ಹೊರಗುಳಿಯಲಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು (ಫೆ. 10) ಘೋಷಿಸಿದ್ದಾರೆ.

ಪಂಜಾಬ್‌ನಲ್ಲಿ ಇಂಡಿಯಾ ಒಕ್ಕೂಟದಿಂದ ಹೊರಗುಳಿಯುವುದಾಗಿ ಕೇಜ್ರಿವಾಲ್‌ ಘೋಷಿಸಿದ್ದಾರೆ. ಆದರೆ, ದೆಹಲಿಯ ಬಗ್ಗೆ ಅವರು ಏನೂ ಹೇಳಿಲ್ಲ. ಲೋಕಸಭಾ ಚುನಾವಣೆಗೆ ಪಂಜಾಬ್‌ನಿಂದ ಸ್ಪರ್ಧಿಸಲಿರುವ ಎಎಪಿ ಅಭ್ಯರ್ಥಿಗಳನ್ನು ಮುಂದಿನ 10-15 ದಿನಗಳಲ್ಲಿ ಪ್ರಕಟಿಸುವುದಾಗಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

“ಎರಡು ವರ್ಷಗಳ ಹಿಂದೆ ನೀವು ನಮ್ಮನ್ನು ವಿಧಾನಸಭೆಗೆ ಆರಿಸಿ ಪಂಜಾಬ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದೀರಿ. ಅಂತಹ ಮತ್ತೊಂದು ಆಶೀರ್ವಾದ ಕೇಳಲು ನಿಮ್ಮ ಮುಂದೆ ಕೈಮುಗಿದು ನಿಂತಿದ್ದೇನೆ. ಎರಡು ತಿಂಗಳಲ್ಲಿ ಲೋಕಸಭಾ ಚುನಾವಣೆಗಳು ನಡೆಯಲಿವೆ. ಪಂಜಾಬ್‌ನ 13 ಸ್ಥಾನಗಳು ಮತ್ತು ಚಂಡೀಗಢದಲ್ಲಿ ಎಎಪಿ ಸ್ಪರ್ಧಿಸಲಿದೆ. ಎಲ್ಲಾ 14 ಸ್ಥಾನಗಳಿಗೆ ಮುಂದಿನ ಕೆಲ ದಿನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಿದ್ದೇವೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್‌ ಅವರ ಈ ಘೋಷಣೆಯಿಂದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಕೂಡ ಸ್ವತಂತ್ರ ಸ್ಪರ್ಧೆಯ ಘೋಷಣೆ ಮಾಡಿದ್ದಾರೆ. ಬಿಹಾರದಲ್ಲಿ ಜೆಡಿಯು ಪಕ್ಷ ಮೈತ್ರಿಕೂಟದಿಂದಲೇ ಹೊರ ಹೋಗಿದೆ.

ಇದನ್ನೂ ಓದಿ : Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...