Homeಚಳವಳಿಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಕೇಂದ್ರದ “ಷರತ್ತುಬದ್ಧ” ಸಂವಾದ ಪ್ರಸ್ತಾಪವನ್ನು ಪ್ರತಿಭಟನಾ ನಿರತ ರೈತ ಸಂಘಟನೆಗಳು ತಿರಸ್ಕರಿಸಿವೆ.

- Advertisement -
- Advertisement -

’ದೆಹಲಿ ಚಲೋ’ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ರೈತರಿಗೆ ಆಹಾರ, ನೀರು, ವಿದ್ಯುತ್ ವ್ಯವಸ್ಥೆ ಮಾಡಿದೆ.

“ದೆಹಲಿಯಲ್ಲಿ ರೈತರು ಎಲ್ಲೆಲ್ಲಿ ಪ್ರತಿಭಟನೆ ಮಾಡಲು ಬಯಸುತ್ತಾರೋ ಅವರಿಗೆ ಅನುಮತಿ ನೀಡಬೇಕು. ದೆಹಲಿ ಸಿಎಂ ನಿರ್ದೇಶನದಂತೆ, ಎಎಪಿ ಸರ್ಕಾರ ಪ್ರತಿಭಟನಾಕಾರ ರೈತರಿಗೆ ಬೆಂಬಲ ನೀಡಲಿದೆ. ನಾವು ಅವರಿಗೆ ಶೆಡ್‌ಗಳು, ನೀರು, ವಿದ್ಯುತ್ ಇತ್ಯಾದಿಗಳನ್ನು ವ್ಯವಸ್ಥೆ ಮಾಡುತ್ತೇವೆ. ನಾವು ರೈತರ ಪರವಾಗಿ ನಿಲ್ಲುತ್ತೇವೆ” ಎಂದು ಪಕ್ಷದ ರಾಷ್ಟ್ರೀಯ ವಕ್ತಾರ ರಾಘವ್ ಚಾಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ 32 ರೈತ ಸಂಘಟನೆಗಳು ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ರಾಜಧಾನಿಯ ಎಲ್ಲಾ ಪ್ರವೇಶ ದ್ವಾರಗಳನ್ನು ನಿರ್ಬಂಧಿಸಿ, ಬಂದ್ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಎಲ್ಲಾ ಪ್ರವೇಶ ದ್ವಾರಗಳನ್ನು ನಿರ್ಬಂಧಿಸಿ ಪ್ರತಿಭಟನೆ ಮಾಡುವ ಎಚ್ಚರಿಕೆ ಹಿನ್ನೆಲೆ, ಇಂದು ಪ್ರತಿಭಟನೆ ತೀವ್ರಗೊಳ್ಳುವ ಲಕ್ಷಣಗಳಿವೆ. ಕೇಂದ್ರದ “ಷರತ್ತುಬದ್ಧ” ಸಂವಾದ ಪ್ರಸ್ತಾಪವನ್ನು ಪ್ರತಿಭಟನಾ ನಿರತ ರೈತ ಸಂಘಟನೆಗಳು ತಿರಸ್ಕರಿಸಿವೆ. ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಭಟನೆ ರಾಜಕೀಯ ಎಂದು ನಾನು ಎಂದಿಗೂ ಆರೋಪಿಸಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿನ್ನೆಯ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಕೃಷಿ ಸುಧಾರಣೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುತ್ತವೆ ಮತ್ತು ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡುತ್ತವೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...