Homeಮುಖಪುಟಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷವು (ಎಎಪಿ) ಇಂದು ಜಂತರ್ ಮಂತರ್‌ನಲ್ಲಿ ‘ಉಪವಾಸ ದಿವಸ’ ಪ್ರತಿಭಟನೆ ನಡೆಸುತ್ತಿದೆ.

ಸಾಮೂಹಿಕವಾಗಿ ಒಗ್ಗಟ್ಟಿನ ಪ್ರದರ್ಶನದ ಹಿನ್ನೆಲೆಯಲ್ಲಿ ಎಎಪಿ ಸಾಮೂಹಿಕ ಉಪವಾಸಕ್ಕೆ ಕರೆ ನೀಡಿದೆ. ಪ್ರತಿಭಟನೆಯು ದೆಹಲಿಯ ಜಂತರ್ ಮಂತರ್ ಮತ್ತು ಪಂಜಾಬ್‌ನಲ್ಲಿ ಸಭೆಯನ್ನು ಒಳಗೊಂಡಿದೆ, ಪಂಜಾಬ್‌ನಲ್ಲಿ ಆಪ್ ಶಾಸಕರು, ಸಚಿವರು, ಸಂಸದರು, ಕೌನ್ಸಿಲರ್‌ಗಳು ಒಗ್ಗೂಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಸಿಎಂ ಭಗವಂತ್ ಮಾನ್ ಜೊತೆ ಉಪವಾಸ ಕುಳಿತುಕೊಳ್ಳಲಿದ್ದಾರೆ.

ದೇಶದ ಪ್ರಜಾಪ್ರಭುತ್ವದ ರಕ್ಷಣೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ಹೋರಾಡಲು ಬಯಸವವರು ಇಂದು ತಮ್ಮ ತಮ್ಮ ಮನೆಗಳಲ್ಲಿ, ಗ್ರಾಮಗಳಲ್ಲಿ, ಜಿಲ್ಲಾ ಕೇಂದ್ರ, ರಾಜ್ಯ ರಾಜಧಾನಿಗಳಲ್ಲಿ ಸಾಮೂಹಿಕ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆಯಲಿರುವ ಸಾಮೂಹಿಕ ಉಪವಾಸದಲ್ಲಿ ದೆಹಲಿಯ ಸಚಿವರು, ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪೊಲೀಸರು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರೀ ಬ್ಯಾರಿಕೇಡ್‌ಗಳ ಅಳವಡಿಕೆಯಿಂದ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ರೈ ಘೋಷಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ದೆಹಲಿ ಮುಖ್ಯಮಂತ್ರಿಯನ್ನು ಇಡಿ ಬಂಧಿಸಿತ್ತು, ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಕೇಜ್ರಿವಾಲ್‌ ಬಂಧನವನ್ನು ಖಂಡಿಸಿ ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಕೂಟದ ಮೆಗಾ ರ್ಯಾಲಿ ನಡೆದಿತ್ತು. ರ್ಯಾಲಿಯಲ್ಲಿ ಸೋನಿಯಾ ಗಾಂಧಿ, ಸುನಿತಾ ಕೇಜ್ರಿವಾಲ್‌ ಮತ್ತು ಬಂಧಿತ ಜಾರ್ಖಾಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಅವರು ಭಾಗವಹಿಸಿದ್ದರು.

ಇದನ್ನು ಓದಿ: ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಬಹಿರಂಗ ಚರ್ಚೆ ಆಹ್ವಾನದ ಬಗ್ಗೆ ಕೇಳಿದ್ದಕ್ಕೆ ಉಡಾಫೆಯಿಂದ ಉತ್ತರಿಸಿದ ನಿರ್ಮಲಾ ಸೀತಾರಾಮನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...