HomeಮುಖಪುಟINDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಕೇಜ್ರಿವಾಲ್: ಎಎಪಿ ವಕ್ತಾರೆ ಪ್ರಿಯಾಂಕ ಕಕ್ಕರ್

INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಕೇಜ್ರಿವಾಲ್: ಎಎಪಿ ವಕ್ತಾರೆ ಪ್ರಿಯಾಂಕ ಕಕ್ಕರ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿಯಾಗಿ ಅರವೀಂದ್ ಕೇಜ್ರಿವಾಲ್ ಅವರು ನಿರಂತರವಾಗಿ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ ಮತ್ತು ಹಣದುಬ್ಬರವು ಕಡಿಮೆ ಇರುವ ಮಾದರಿಯನ್ನು ನೀಡಿದ್ದಾರೆ ಹಾಗಾಗಿ ‘INDIA’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಅವರ ಹೆಸರು ಪರಿಗಣಿಸುವುದು ಸೂಕ್ತ ಎಂದು ಎಎಪಿ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕ ಕಕ್ಕರ್ ಹೇಳಿದ್ದಾರೆ.

ಮುಂಬೈನಲ್ಲಿ ಗುರುವಾರದಿಂದ ಆರಂಭವಾಗಲಿರುವ ‘INDIA’ ಮೈತ್ರಿಕೂಟದ ಮೂರನೇ ಸಭೆಗೂ ಮುನ್ನ ಪಿಟಿಐ ಸುದ್ದಿಸಂಸ್ಥೆ INDIAದ ನಾಯಕ ಯಾರು ಎಂದು ಕೇಳಿದಾಗ, ”ಕೇಜ್ರಿವಾಲ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಪುಸ್ತಾಪಿಸಲಾಗಿದೆ. ಅವರು ನಿರಂತರವಾಗಿ ಜನರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ” ಎಂದು ಪ್ರಿಯಾಂಕ ಕಕ್ಕರ್ ಪ್ರತಿಕ್ರಿಯಿಸಿದ್ದಾರೆ.

”ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಸಾರ್ವಜನಿಕರಿಗೆ ಖರ್ಚು ಮಾಡಿದ ಮಾದರಿ ಮತ್ತು ಈ ಎಲ್ಲಾ ಕಲ್ಯಾಣ ಯೋಜನೆಗಳ ಹೊರತಾಗಿಯೂ ಅವರು ಲಾಭದಾಯಕ ಬಜೆಟ್ ಮಂಡಿಸಿದ್ದಾರೆ. ಆದರೆ ಈ ನಿರ್ಧಾರ (ಭಾರತದ ನಾಯಕನನ್ನು ಆಯ್ಕೆ ಮಾಡುವುದು) ನನ್ನದಲ್ಲ ಎಂದು ಅವರು ಹೇಳಿದರು.

”ಕೇಜ್ರಿವಾಲ್ ಅವರು ನೀಡಿರುವ ಮಾದರಿ ಆಡಳಿತದಿಂದಾಗಿ ದೆಹಲಿಯಲ್ಲಿ ಹಣದುಬ್ಬರ ಕಡಿಮೆಯಾಗಿದೆ. ಅವರು ಜನರಿಗೆ ಲಾಭವಾಗುವಂತಹ ಮಾದರಿಗಳನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ನನ್ನ ಆಸೆ. ಆದರೆ ಅದು ನನ್ನ ಕೈಯಲ್ಲಿ ಇಲ್ಲ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಡುಗೆಯ ಬೆಲೆಯನ್ನು 200 ರೂ. ಕಡಿತಗೊಳಿಸುವ ನಿರ್ಧಾರದ ಬಗ್ಗೆ ಕಕ್ಕರ್ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳ ‘INDIA’ ಮೈತ್ರಿಕೂಟದ ಮೂರನೇ ಸಭೆಯ ನಂತರ ಇಂಧನ ಬೆಲೆಗಳು ಸಹ ಕಡಿಮೆಯಾಗುತ್ತವೆ ಎಂದು ಹೇಳಿದರು.

”ಪಾಟ್ನಾ ಮತ್ತು ಬೆಂಗಳೂರು ಸಭೆಗಳ ನಂತರ ( ‘INDIA’ ಮೈತ್ರಿಕೂಟ) ಎಲ್‌ಪಿಜಿ ದರವನ್ನು 200ರೂ. ಕಡಿಮೆ ಮಾಡಲಾಗಿದೆ. ಮುಂಬೈ ಸಭೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುತ್ತವೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಪ್ರಿಯಾಂಕ ಕಕ್ಕರ್ ಅವರು ಕೇಜಿವಾಲ್‌ ಹೆಸರು ಪ್ರಸ್ತಾಪಿಸಿದ ಕೆಲವೇ ಗಂಟೆಗಳಲ್ಲಿ ದೆಹಲಿ ಸಂಪುಟ ಸಚಿವೆ ಅತಿಶಿ ಸಿಂಗ್ ಅವರು, ಕೇಜ್ರಿವಾಲ್ ಅವರು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಅವರು ಪ್ರಧಾನಿ ಅಭ್ಯರ್ಥಿ ಸ್ಥಾನದ ಸ್ಪರ್ಧೆಯಲ್ಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವನ್ನು ಎದುರಿಸಲು ಮತ್ತು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ವಿರೋಧ ಪಕ್ಷದ ನಾಯಕರು ಜಂಟಿ ಪ್ರಚಾರ ತಂತ್ರವನ್ನು ರೂಪಿಸುತ್ತಾರೆ. ಕಾರ್ಯಕ್ರಮವನ್ನು ರೂಪಿಸಲು, ದೇಶಾದ್ಯಂತ ಆಂದೋಲನಗಳನ್ನು ನಡೆಸಲು ಮತ್ತು ಸೀಟು ಹಂಚಿಕೆಗಾಗಿ ಜಂಟಿ ಯೋಜನೆಗಳನ್ನು ರೂಪಿಸಲು ನಾಯಕರು ಕೆಲವು ಫಲಕಗಳನ್ನು ಘೋಷಿಸುವ ಸಾಧ್ಯತೆಯಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...