HomeUncategorizedದೆಹಲಿ; ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಬಂಧಿಸಿದ ಇಡಿ ಅಧಿಕಾರಿಗಳು

ದೆಹಲಿ; ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಬಂಧಿಸಿದ ಇಡಿ ಅಧಿಕಾರಿಗಳು

- Advertisement -
- Advertisement -

ದೆಹಲಿ ಮದ್ಯ ನೀತಿಯ ಹಗರಣದ ತನಿಖೆಗೆ ಸಂಬಂಧಿಸಿ ದೆಹಲಿಯಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಳಿಗ್ಗೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಅವರ ಬಂಧನ ನಡೆದಿದೆ.

ಬುಧವಾರ ಬೆಳಗ್ಗೆಯಿಂದಲೇ ಸಂಸದ  ಸಂಜಯ್ ಸಿಂಗ್ ಅವರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ ನಡೆದಿದೆ. ಇದು ಪ್ರಕರಣಕ್ಕೆ ಸಂಬಂಧಿಸಿ ನಡೆದ ಮೂರನೇ ಬಂಧನವಾಗಿದೆ.

ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು. ಗುರುವಾರ ಮಧ್ಯಾಹ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ ಮತ್ತು ಸಂಸ್ಥೆಯು ಅವರನ್ನು ಕಸ್ಟಡಿಗೆ ಕೋರುವ ನಿರೀಕ್ಷೆಯಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು.

ಈ ವರ್ಷದ ಫೆಬ್ರವರಿಯಲ್ಲಿ ದೆಹಲಿ ಉಪ ಮುಖ್ಯಮಂತ್ರಿಯಾಗಿದ್ದ ಮತ್ತು ಕೇಜ್ರಿವಾಲ್‌ ಅವರ ಆಪ್ತ ಮನೀಶ್ ಸಿಸೋಡಿಯಾ ಅವರನ್ನು ಮದ್ಯ ನೀತಿ ಹಗರಣದಲ್ಲಿ ಸಿಬಿಐ ಬಂಧಿಸಿತ್ತು.

ಈ ಪ್ರಕರಣದ ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಸಿಂಗ್ ಅವರ ಹೆಸರನ್ನು ಹೇಳಿದ ನಂತರ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ ಹಾಗೂ ಇದೀಗ ಬಂಧನವಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಪ್ರತಿಕ್ರಿಯಿಸಿದ್ದು, ಈವೆರೆಗೆ 1000ಕ್ಕೂ ಅಧಿಕ ದಾಳಿಯನ್ನು ಮಾಡಲಾಗಿದೆ, ಆದರೆ ಒಂದು ಪೈಸೆ ಕೂಡ ಅಕ್ರಮ ಹಣ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ತಮ್ಮ ಪಕ್ಷದ ಮುಖಂಡನ ಪರವಾಗಿ ಹೇಳಿಕೆ ಕೊಟ್ಟ ಕೇಜ್ರಿವಾಲ್, ಆಡಳಿತಾರೂಢ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಸೋತ ತಂಡದ ಕೊನೆಯ ಹತಾಶೆಯ ಪ್ರಯತ್ನ ಎಂದು ಹೇಳಿದ್ದಾರೆ.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಎದುರಾಳಿಗಳನ್ನು ಹಳಿತಪ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರ ಪಕ್ಷವು ಹತಾಶೆಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಕಳೆದ ವರ್ಷದಿಂದ ನಾವು ಮದ್ಯ ಹಗರಣದ ಬಗ್ಗೆ ಕೇಳುತ್ತಿದ್ದೇವೆ. 1000ಕ್ಕೂ ಹೆಚ್ಚು ದಾಳಿಗಳನ್ನು ನಡೆಸಲಾಗಿದೆ ಮತ್ತು ಒಂದು ಪೈಸೆಯೂ ಅವರಿಗೆ ಸಿಕ್ಕಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನು ಓದಿ: ಗೇಮಿಂಗ್ App ಪ್ರಕರಣ: ರಣಬೀರ್ ಕಪೂರ್‌ಗೆ ಇಡಿಯಿಂದ ಸಮನ್ಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...