Homeಕರ್ನಾಟಕಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ

- Advertisement -
- Advertisement -

ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಭಾಷಣ ಮಾಡುತ್ತಿದ್ದಾಗ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಅವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಮಂಗಳವಾರ ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಸರ್ಕಾರದ ನೀತಿ ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗುತ್ತಿತ್ತು. ಈ ವೇಳೆ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.

”ಅರಣ್ಯ ಸಚಿವರಿಗೆ ಪಶ್ಚಿಮಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿರಂಗನ್ ಪರಿಸರ ತಜ್ಞ ಅಲ್ಲ” ಎಂದು ಖಂಡ್ರೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಹರಿಹಾಯ್ದರು.

”ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

‘ಮೂಲ ನಿವಾಸಿಗಳಿಲ್ಲದಿದ್ದರೆ ಸಹ್ಯಾದ್ರಿಯ ಅರಣ್ಯ ಶ್ರೇಣಿ ಉಳಿಯುತ್ತಿರಲಿಲ್ಲ. ದೆಹಲಿಯಲ್ಲಿ ಕುಳಿತು ಉಪಗ್ರಹ ಚಿತ್ರಗಳನ್ನು ಅವಲೋಕಿಸಿ ಅವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಹಲವು ಕಾಯ್ದೆಗಳಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿಯಾದರೆ ಸಮಸ್ಯೆ ಬಿಗಡಾಯಿಸಲಿದೆ” ಎಂದು ಅವರು ಹೇಳಿದರು.

”ಆರಗ ಜ್ಞಾನೇಂದ್ರ ಅವರ ಈ ಹೇಳಿಕೆ ಪಕ್ಕಾ ವರ್ಣ ತಾರತಮ್ಯದ ಅಡಿಯಲ್ಲಿ ಬರುವಂತದ್ದು. ಅದರಲ್ಲೂ ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆಯವರನ್ನು ಅಗತ್ಯವಲ್ಲದ ವಿಚಾರಕ್ಕೆ ಎಳೆದು ತಂದದ್ದು ಜ್ಞಾನೇಂದ್ರ ಅವರದು ದುರುದ್ದೇಶಪೂರ್ವಕ” ಎಂದು ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡುವುದಿಲ್ಲ: ದುನಿಯಾ ವಿಜಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...