Homeಮುಖಪುಟ'ಮಾನವೀಯತೆ, ನೈತಿಕತೆಯ ಪತನ': ಪ್ಯಾಲೆಸ್ತೀನ್ ವಿಚಾರದಲ್ಲಿ ಮೋದಿ ಸರ್ಕಾರದ ಮೌನ ಟೀಕಿಸಿದ ಸೋನಿಯಾ ಗಾಂಧಿ

‘ಮಾನವೀಯತೆ, ನೈತಿಕತೆಯ ಪತನ’: ಪ್ಯಾಲೆಸ್ತೀನ್ ವಿಚಾರದಲ್ಲಿ ಮೋದಿ ಸರ್ಕಾರದ ಮೌನ ಟೀಕಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಹಿಸಿರುವ ‘ಮಹಾ ಮೌನ’ವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿದ್ದು, ಇದು ‘ಮಾನವೀಯತೆ ಮತ್ತು ನೈತಿಕತೆಯ ಸಂಪೂರ್ಣ ಪತನ’ ಎಂದಿದ್ದಾರೆ.

ದಿ ಹಿಂದೂ ಪತ್ರಿಕೆಯಲ್ಲಿ ಪ್ರಕಟವಾದ ‘ಭಾರತದ ಮೌನ ಸ್ವರ, ಪ್ಯಾಲೆಸ್ತೀನ್‌ನೊಂದಿಗಿನ ಅಂತರ’ ಎಂಬ ತೀಕ್ಷ್ಣವಾದ ತನ್ನ ಅಭಿಪ್ರಾಯ ಲೇಖನದಲ್ಲಿ, ಸೋನಿಯಾ ಗಾಂಧಿಯವರು “ಭಾರತವು ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ತನ್ನ ಹಳೆಯ ನಾಯಕತ್ವವನ್ನು ಮರಳಿ ಪಡೆಯಬೇಕು. ವೈಯಕ್ತಿಕ ರಾಜತಾಂತ್ರಿಕತೆಯನ್ನು ಮೀರಿ, ನ್ಯಾಯ, ಮಾನವ ಹಕ್ಕುಗಳು ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ತನ್ನ ಬದ್ಧತೆಯನ್ನು ಮರಳಿ ದೃಢಪಡಿಸಬೇಕೆಂದು ಒತ್ತಾಯಿಸಿದ್ದಾರೆ.

“ಪ್ರಸ್ತುತ ಸರ್ಕಾರದ ಪ್ರತಿಕ್ರಿಯೆಯು ಭಾರತದ ಸಾಂವಿಧಾನಿಕ ಮೌಲ್ಯಗಳು ಅಥವಾ ಕಾರ್ಯತಂತ್ರದ ಹಿತಾಸಕ್ತಿಗಳಿಗಿಂತ ಪ್ರಧಾನಿ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವಿನ ವೈಯಕ್ತಿಕ ಸ್ನೇಹದಿಂದ ಹೆಚ್ಚಾಗಿ ಪ್ರೇರಿತವಾಗಿದೆ. ಈ ರೀತಿಯ ರಾಜತಾಂತ್ರಿಕತೆಯು ಸಮರ್ಥನೀಯವಲ್ಲ ಮತ್ತು ವಿದೇಶಾಂಗ ನೀತಿಯನ್ನು ಯಾರೋ ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವನ್ನಾಗಿ ಗುರುತಿಸಿದ ಫ್ರಾನ್ಸ್ , ಇಂಗ್ಲೆಂಡ್, ಕೆನಡಾ, ಪೋರ್ಚುಗಲ್ ಆಸ್ಟ್ರೇಲಿಯಾ ಬಗ್ಗೆ ಉಲ್ಲೇಖಿಸಿದ ಸೋನಿಯಾ ಗಾಂಧಿ, ದೀರ್ಘಕಾಲದಿಂದ ಬಳಲುತ್ತಿರುವ ಪ್ಯಾಲೆಸ್ತೀನ್ ಜನರ ನ್ಯಾಯ ಸಮ್ಮತ ಆಕಾಂಕ್ಷೆಗಳನ್ನು ಈಡೇರಿಸುವ ಮೊದಲ ಹೆಜ್ಜೆ ಇದು ಎಂದು ಹೇಳಿದ್ದಾರೆ. ಇಂದಿನವರೆಗೆ, ವಿಶ್ವಸಂಸ್ಥೆಯ 193 ಸದಸ್ಯ ರಾಷ್ಟ್ರಗಳಲ್ಲಿ 150ಕ್ಕೂ ಹೆಚ್ಚು ದೇಶಗಳು ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ನೀಡಿವೆ ಎಂದಿದ್ದಾರೆ.

ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್‌ಗೆ (ಪಿಎಲ್ಒ) ವರ್ಷಗಳ ಬೆಂಬಲದ ನಂತರ, 1988ರ ನವೆಂಬರ್ 18ರಂದು ಭಾರತ ಅಧಿಕೃತವಾಗಿ ಪ್ಯಾಲೆಸ್ತೀನ್‌ ಅನ್ನು ರಾಷ್ಟ್ರವನ್ನಾಗಿ ಗುರುತಿಸಿತ್ತು. ಈ ವಿಚಾರದಲ್ಲಿ ಭಾರತ ನಾಯಕತ್ವವನ್ನು ಮೆರೆದಿತ್ತು ಎಂದು ಸೋನಿಯಾ ಗಾಂಧಿ ನೆನಪಿಸಿದ್ದಾರೆ.

ಸ್ವಾತಂತ್ರ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾದಲ್ಲಿನ ವರ್ಣಭೇದ ನೀತಿಯ ವಿರುದ್ಧ ಭಾರತ ಧ್ವನಿ ಗೂಡಿಸಿತ್ತು, 1954 ರಿಂದ 1962ರ ನಡುವೆ ನಡೆದ ಅಲ್ಜೀರಿಯಾ ಸ್ವಾತಂತ್ರ್ಯ ಹೋರಾಟಕ್ಕೆ ಭಾರತವು ಬಲವಾಗಿ ಬೆಂಬಲ ನೀಡಿತ್ತು. ಆಧುನಿಕ ಬಾಂಗ್ಲಾದೇಶದ ರಚನೆಯ ವೇಳೆ 1971ರಲ್ಲಿ ಪೂರ್ವ ಪಾಕಿಸ್ತಾನದಲ್ಲಿನ ಹತ್ಯಾಕಾಂಡ ತಡೆಯುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿತ್ತು ಎಂದು ಸೋನಿಯಾ ಗಾಂಧಿ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಇಸ್ರೇಲ್–ಪ್ಯಾಲೆಸ್ತೀನ್‌ ನಿರ್ಣಾಯಕ ಮತ್ತು ಸೂಕ್ಷ್ಮ ವಿಷಯದ ಬಗ್ಗೆಯೂ ಕೂಡ ಭಾರತವು ಬಹಳ ಹಿಂದಿನಿಂದಲೂ ತತ್ವಬದ್ಧ ನಿಲುವನ್ನು ಕಾಯ್ದುಕೊಂಡಿದೆ. ಶಾಂತಿ ಮತ್ತು ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಸೂಕ್ಷ್ಮವಾದ ನಿಲುವು ತೆಗೆದುಕೊಂಡಿದೆ. ಪ್ಯಾಲೆಸ್ತೀನ್ ವಿಚಾರದಲ್ಲಿ ಭಾರತವು ನಾಯಕತ್ವ ತೋರಬೇಕು. ಇದು ಈಗ ನ್ಯಾಯ, ಗುರುತು, ಗೌರವ ಮತ್ತು ಮಾನವ ಹಕ್ಕುಗಳ ಹೋರಾಟವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಕ್ಟೋಬರ್ 2023ರಲ್ಲಿ ಹಮಾಸ್-ಇಸ್ರೇಲ್ ಸಂಘರ್ಷ ಭುಗಿಲೆದ್ದ ನಂತರ ಗಾಝಾ ಬಿಕ್ಕಟ್ಟಿನ ಬಗ್ಗೆ ಮೋದಿ ಸರ್ಕಾರದ ನಿಲುವನ್ನು ಸೋನಿಯಾ ಗಾಂಧಿಯವರು ಸಾರ್ವಜನಿಕವಾಗಿ ಟೀಕಿಸುತ್ತಿರುವುದು ಇದು ಮೂರನೇ ಬಾರಿಯಾಗಿದೆ.

ಇಸ್ರೇಲ್ ಆಕ್ರಮಣದಲ್ಲಿ 17,000 ಮಕ್ಕಳು ಸೇರಿದಂತೆ 55,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಇದು ‘ಜನಾಂಗೀಯ ಹತ್ಯೆಗಿಂತ ಕಡಿಮೆಯಿಲ್ಲ’ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸೋನಮ್ ವಾಂಗ್‌ಚುಕ್ ಸಂಸ್ಥೆಯ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ: ಲಡಾಖ್ ರಾಜ್ಯತ್ವ ಹೋರಾಟದ ನಡುವೆ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...