ಅಪಹರಣ ಪ್ರಕರಣದಲ್ಲಿ ಅಮಾನತುಗೊಂಡಿರುವ ಜೆಡಿಎಸ್ ನಾಯಕಿ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆಯ ಅಪಹರಣ
ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೇಳಿಕೊಂಡಿದ್ದ ರಾಜ್ಯ ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
2024ರ ಆಗಸ್ಟ್ 2ರಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಅಪರಾಧಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರ ಪೋಷಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಅಪರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರ ತಂದೆ ಹೆಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆ ಯಾಗಿದ್ದರು.
ಆದರೆ ತಾಯಿ ಭವಾನಿ ಅವರು ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಇದೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮತ್ತೊಬ್ಬ ಆರೋಪಿ ಸತೀಶ್ ಬಾಬು ಅವರು ಕೂಡಾ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಅಪಹರಣ
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕಣದಲ್ಲಿ ದೂರು ಸಲ್ಲಿಸಿದ್ದ ಮಹಿಳೆಯನ್ನು ಹೆಚ್.ಡಿ. ರೇವಣ್ಣ, ಅವರ ಸಂಬಂಧಿ ಸತೀಶ್ ಬಾಬು ಮತ್ತು ಭವಾನಿ ರೇವಣ್ಣ ಅವರು ಅಪಹರಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯ ಮಗ ಮಂಡ್ಯದ ಕೆ.ಆರ್. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾದ ನಂತರ ಪೊಲೀಸರು ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಹುಡುಕಾಡಿದ್ದರು. ಅಂತಿಮವಾಗಿ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು.
ಇದನ್ನೂ ಓದಿ: ‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!
‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!


