Homeಮುಖಪುಟಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

- Advertisement -
- Advertisement -

ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ತಿರುವಲ್ಲೂರು ಪೊಲೀಸರು ಸೋಮವಾರ, 16 ವರ್ಷದ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ ಅವರನ್ನು ಬಂಧಿಸಿದ್ದಾರೆ.

ತನಿಖೆಯನ್ನು ತಡೆದಿದ್ದಕ್ಕಾಗಿ ನ್ಯಾಯಾಲಯವು ಕೆ.ವಿ. ಕುಪ್ಪಂ ಶಾಸಕ ಮತ್ತು ಪುಥಿಯಾ ಭಾರತಮ್ ‘ಪೂವೈ’ ಅಧ್ಯಕ್ಷ ಜಗನ್ ಮೂರ್ತಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಕಿಡಿಕಾರಿದೆ.

ಬಾಲಕನ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಅವರ ಹಿರಿಯ ಮಗ ಧನುಷ್ (23) ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿಜಯ ಶ್ರೀ (21) ಎಂಬ ಯುವತಿಯನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ದಂಪತಿ ತಲೆಮರೆಸಿಕೊಂಡಿದ್ದಾಗ, ಹುಡುಗಿಯ ಕುಟುಂಬವು ಧನುಷ್ ಅವರ ಕಿರಿಯ ಸಹೋದರ ಇಂದ್ರಚಂದ್ (16) ಅವರನ್ನು ಮೇ 10 ರಂದು ತಿರುವಲಂಗಾಡು ಬಳಿಯ ಅವರ ಮನೆಯಿಂದ ಅಪಹರಿಸಿದೆ ಎಂದು ಆರೋಪಿಸಲಾಗಿದೆ. ನಂತರ ಬಾಲಕನನ್ನು ಗಾಯಗೊಂಡ ಸ್ಥಿತಿಯಲ್ಲಿ ಹೋಟೆಲೊಂದರ ಬಳಿ ಬಿಟ್ಟು ಹೋಗಿರುವುದಾಗಿ ವರದಿಯಾಗಿದೆ.

ಲೈವ್‌ಲಾ ಪ್ರಕಾರ, ದಂಪತಿಯನ್ನು ಪತ್ತೆ ಹಚ್ಚಲು ವಿಫಲವಾದ ನಂತರ ಯುವತಿಯ ಕುಟುಂಬ ಸಹಾಯಕ್ಕಾಗಿ ಶಾಸಕರನ್ನು ಸಂಪರ್ಕಿಸಿದೆ. ಶಾಸಕರು ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ನಂತರ ಪೊಲೀಸರು ಅವರನ್ನು ಪ್ರಶ್ನಿಸದಂತೆ ತಡೆದಿದ್ಧಾರೆ. ಪಕ್ಷದ ಬೆಂಬಲಿಗರು ಅವರ ಮನೆಯನ್ನು ಸುತ್ತುವರೆದಿದ್ದರು.

ಈ ನಡುವೆ, ಎಡಿಜಿಪಿ ಜಯರಾಮ್ ಅವರ ಅಧಿಕೃತ ವಾಹನವನ್ನು ಬಳಸಿಕೊಂಡು ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ಬಂಧಿತ ಇಬ್ಬರು ಶಂಕಿತರು ಒಪ್ಪಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರ ಜೊತೆ ಮಾಜಿ ಪೊಲೀಸ್ ಅಧಿಕಾರಿ ಮಹೇಶ್ವರಿ ಮತ್ತು ವಕೀಲ ಶರತ್ ಇದ್ದರು ಎನ್ನಲಾಗಿದೆ.

ಶಾಸಕ ಜಗನ್ ಮೂರ್ತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್, ಎಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪೊಲೀಸರನ್ನು ಟೀಕಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ದಾಮೋದರನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪೊಲೀಸರು ಮೊದಲು ಶಾಸಕರನ್ನು ಪ್ರಶ್ನಿಸಲು ಉದ್ದೇಶಿಸಿದ್ದರಿಂದ ಎಡಿಜಿಪಿ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ. ನಂತರ ನ್ಯಾಯಾಧೀಶರು ಶಾಸಕರು ಮತ್ತು ಎಡಿಜಿಪಿ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರಾಪಡಿಸುವಂತೆ ನಿರ್ದೇಶಿಸಿದ್ಧಾರೆ.

ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ವೇಲ್ಮುರುಗನ್ ಅವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ : “ನೀವು ಸಾಮಾನ್ಯ ವ್ಯಕ್ತಿಯಲ್ಲ. ನೀವು ನಾಗರಿಕರಿಗೆ ಮಾದರಿಯಾಗಿರಬೇಕು. ಬದಲಾಗಿ, ನೀವು ಮೂರನೇ ದರ್ಜೆಯ ವ್ಯಕ್ತಿಯಂತೆ ವರ್ತಿಸುತ್ತಿದ್ದೀರಿ. ಜನರು ನಿಮಗೆ ಮತ ಹಾಕಲು ಬಿಸಿಲಿನಲ್ಲಿ, ಕೆಲವೊಮ್ಮೆ ಊಟ ಮಾಡದೆ ಬಂದಿರಬಹುದು. ನೀವು ಅವರಿಗೆ ಹೀಗೆ ಸೇವೆ ಮಾಡುತ್ತೀರಾ?” ಎಂದು ಕಿಡಿಕಾರಿದ್ದಾರೆ.

“ಕಾಂಗರೂ ನ್ಯಾಯಾಲಯಗಳ” ಬಳಕೆಯನ್ನು ಟೀಕಿಸಿದ ನ್ಯಾಯಾಲಯ, ಶಾಸಕರು ಕಾನೂನಿಗೆ ಸಹಕರಿಸುವ ಬದಲು ರಾಜಕೀಯ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದೆ. “ಇಂತಹ ನಡವಳಿಕೆ  ಮುಂದುವರಿದರೆ, ಪ್ರಕರಣದಲ್ಲಿ ಸಹಕರಿಸಿರುವ ಪ್ರತಿಯೊಬ್ಬ ಬೆಂಬಲಿಗರ ವಿರುದ್ಧವೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಬಲವಾದ ಟೀಕೆಗಳ ನಂತರ, ನ್ಯಾಯಾಲಯವು ಶಾಸಕರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದೇಶಿಸಿದೆ. ನ್ಯಾಯಾಧೀಶರು ಪೊಲೀಸರಿಗೆ ಎಡಿಜಿಪಿ ಜಯರಾಮ್ ಅವರನ್ನು ‘ಕಾನೂನಿನ ಪ್ರಕಾರ’ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಅಧಿಕಾರಿ ಸೂಕ್ತ ವೇದಿಕೆಯ ಮುಂದೆ ಜಾಮೀನು ಪಡೆಯಲು ಸ್ವತಂತ್ರರು ಎಂದು ಹೇಳಿದ್ದಾರೆ.

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...