Homeಮುಖಪುಟಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

- Advertisement -
- Advertisement -

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. “ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಚಳವಳಿಯನ್ನು ನಿಧಾನಗೊಳಿಸುವುದಿಲ್ಲ” ಎಂದು ಅವರಿ ಪ್ರತಿಜ್ಞೆ ಯುಜನತೆಗೆ ಭರವಸೆ ನೀಡಿದ್ದಾರೆ.

ತಮಗೆ ಟೈಫಾಯ್ಡ್‌ ಆಗಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡಿರು ಅಭಿಜೀತ್, ಕಳೆದ “ಕೆಲವು ದಿನಗಳಿಂದ ನಾನು ಅಸ್ವಸ್ಥನಾಗಿದ್ದೇನೆ, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವೆ” ಎಂದು ಹೇಳಿದ್ದಾರೆ.

ನನ್ನ ಅನಾರೋಗ್ಯದ ಹೊರತಾಗಿಯೂ, ದೇಶಾದ್ಯಂತ ಪ್ರತಿಭಟನೆಗಳನ್ನು ಜೀವಂತವಾಗಿಟ್ಟಿದ್ದಕ್ಕಾಗಿ ಅವರು ಸಿಜೆಪಿ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿದರು. “ಚಳುವಳಿ ತನ್ನ ಉದ್ದೇಶವನ್ನು ಸಾಧಿಸುತ್ತದೆ” ಎಂದು ಹೇಳಿದರು.

“ನಿಮಗೆ ತಿಳಿದಿರುವಂತೆ, ಕಳೆದ ಕೆಲವು ದಿನಗಳಿಂದ ನಾನು ಅಸ್ವಸ್ಥನಾಗಿದ್ದೇನೆ. ವೈದ್ಯಕೀಯ ವರದಿಗಳು ಹೊರಬಂದಿವೆ, ನನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ. ಚಿಕಿತ್ಸೆ ಪಡೆಯುತ್ತಿದ್ದೇನೆ, ಇಂಟ್ರಾವೆನಸ್ ಔಷಧಿಗಳನ್ನು ಪಡೆಯುತ್ತಿದ್ದೇನೆ” ಎಂದು ದೀಪ್ಕೆ ಹೇಳಿದರು.

“ಚಿಕಿತ್ಸೆ ನಡೆಯುತ್ತಿದೆ, ಪ್ರತಿದಿನ ನಾನು ಗ್ಲೂಕೋಸ್‌ ಪಡೆಯುತಿದ್ದೇನೆ. ಆದರೆ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಎಲ್ಲಾ ಜಿರಳೆಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಚಳುವಳಿಯನ್ನು ವಿಸ್ತರಿಸಿದ್ದಕ್ಕಾಗಿ ಬೆಂಬಲಿಗರನ್ನು ಅಭಿನಂದಿಸಿದ ಅವರು, ನಿರಂತರ ಶಾಂತಿಯುತ ಪ್ರತಿಭಟನೆಗಳು ತಮ್ಮ ಪ್ರಮುಖ ಬೇಡಿಕೆಯಾದ ಕೇಂದ್ರ ಸಚಿವ ಪ್ರಧಾನ್ ಅವರ ರಾಜೀನಾಮೆಯನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ದೀಪ್ಕೆ ಹೇಳಿದರು.

“ಈ ಚಳುವಳಿಯನ್ನು ಇಷ್ಟು ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು. ನಾವು ಹೀಗೆಯೇ ಪ್ರತಿಭಟನೆ ಮುಂದುವರಿಸಿದರೆ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯುತ್ತೇವೆ ಎಂದು ನನಗೆ ಖಚಿತವಾಗಿದೆ” ಎಂದು ಅವರು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಪ್ರಾರಂಭಿಸಲಾದ ಸಿಜೆಪಿ ನೇತೃತ್ವದ ಆಂದೋಲನವು ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ, ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಲ್ಲಿ ಸುಧಾರಣೆಗಳು ಮತ್ತು ಪ್ರಧಾನ್ ಅವರ ರಾಜೀನಾಮೆಯನ್ನು ಒತ್ತಾಯಿಸುತ್ತಿದೆ.

ಜೂನ್ 28 ರಂದು ಆಂದೋಲನದಲ್ಲಿ ಸೇರಿಕೊಂಡು 26 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಸೇರಿದಂತೆ ಹಲವಾರು ಸಾರ್ವಜನಿಕ ವ್ಯಕ್ತಿಗಳಿಂದ ಪ್ರತಿಭಟನೆಗೆ ಬೆಂಬಲ ದೊರೆಯಿತು.

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣಗಳನ್ನು ದಾಖಲಿಸಲಾಗುವುದಿಲ್ಲ, ಸಂಸತ್ತು ಪರೀಕ್ಷಾ ಸುಧಾರಣೆಗಳು ಮತ್ತು ಹೊಣೆಗಾರಿಕೆಯನ್ನು ಚರ್ಚಿಸಲಿದೆ. ನೀಟ್ ಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರವನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರವು ಲಿಖಿತ ಭರವಸೆ ನೀಡಿದ ನಂತರ ವಾಂಗ್‌ಚುಕ್ ಈ ವಾರದ ಆರಂಭದಲ್ಲಿ ತಮ್ಮ ಉಪವಾಸವನ್ನು ಕೊನೆಗೊಳಿಸಿದರು.

ವಾಂಗ್‌ಚುಕ್ ಉಪವಾಸ ಅಂತ್ಯಗೊಳಿಸಿದ್ದರೂ, ಪ್ರಧಾನ್ ತಮ್ಮ ಸ್ಥಾನದಿಂದ ಕೆಳಗಿಳಿಯುವವರೆಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಸಿಜೆಪಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...