Homeಮುಖಪುಟದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

- Advertisement -
- Advertisement -

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ (ಅ.16) ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಲೆಹ್ರಾ ದೋ ತಿರಂಗಾ’ (ತ್ರಿವರ್ಣ ಧ್ವಜ ಹಾರಿಸಿ) ರ‍್ಯಾಲಿಗೂ ಮುನ್ನ ಅಭಿಜೀತ್ ದೀಪ್ಕೆ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಂಧಿಸಿದ್ದರು.

ಶನಿವಾರ (ಅ.17) ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಅವರ ಮುಂದೆ ದೀಪ್ಕೆಯನ್ನು ಹಾಜರುಪಡಿಸಲಾಗುವುದು ಎಂದು ಅವರ ಕಾನೂನು ಸಲಹೆಗಾರರನ್ನು ಉಲ್ಲೇಖಿಸಿ ವರದಿಗಳು ತಿಳಿಸಿತ್ತು.

ದೀಪ್ಕೆಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಬೇಕೇ ಅಥವಾ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೇ ಎಂಬುದನ್ನು ಎಸ್‌ಇಎಂ ನಿರ್ಧರಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಜಾರಿಗೊಳಿಸಿ, ಮುಂಜಾಗ್ರತಾ ಕ್ರಮವಾಗಿ ದೆಹಲಿಯಲ್ಲಿರುವ ಮನೆಯಿಂದ ಪೊಲೀಸರು ದೀಪ್ಕೆಯನ್ನು ವಶಕ್ಕೆ ಪಡೆದಿದ್ದಾರೆ. ವಕೀಲರನ್ನು ಸಂಪರ್ಕಿಸಲು ತಕ್ಷಣಕ್ಕೆ ಅವಕಾಶ ನೀಡದೆ, ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಸಿಜೆಪಿ ಪ್ರತಿನಿಧಿಗಳು ಶುಕ್ರವಾರ ಆರೋಪಿಸಿದ್ದರು.

ಶನಿವಾರ ಅಧಿಕಾರಿಗಳು ತಿಳಿಸಿದಂತೆ, ಶುಕ್ರವಾರ ನಡೆದ ಪ್ರತಿಭಟನೆಗಳ ವೇಳೆ ಕನ್ನಾಟ್ ಪ್ಲೇಸ್ ಮತ್ತು ನವದೆಹಲಿಯ ಇತರ ಭಾಗಗಳಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು newindianexpress.com ವರದಿ ಮಾಡಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಜನರು ಗುಂಪುಗೂಡದಂತೆ ಪದೇಪದೇ ಮನವಿ ಮಾಡಿಕೊಂಡಿದ್ದರೂ, ಕನ್ನಾಟ್ ಪ್ಲೇಸ್ ಸುತ್ತಲೂ ಜನಸಂದಣಿ ಸೇರಿತ್ತು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 163ರ ಅಡಿಯಲ್ಲಿ ಜಾರಿಗೊಳಿಸಲಾದ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಪದೇಪದೇ ಇಂತಹ ಉಲ್ಲಂಘನೆಗಳಲ್ಲಿ ತೊಡಗುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....