Homeಕರ್ನಾಟಕಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

- Advertisement -
- Advertisement -

ಬೈಂದೂರಿನ ಉದ್ಯಮಿಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್​ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಲಾಗಿದೆ.

ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಹೀಗಾಗಿ ಅವರು ನಿರೀಕ್ಷಣಾ ಜಾಮೀನು ಪ್ರಯತ್ನಿಸಿದರು. ಆದರೆ ನ್ಯಾಯಾಲಯವು ಅವರ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಕಳೆದ ವಾರ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದರು. ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಲಶ್ರೀ ಸ್ವಾಮೀಜಿ ಇಂದು (ಮಂಗಳವಾರ) ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದು, ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. ಅಲ್ಲದೇ ಆ ದೊಡ್ಡ ದೊಡ್ಡವರು ಯಾರ್ಯಾರು ಎನ್ನುವುದನ್ನು ಕಾದುನೋಡಬೇಕಿದೆ.

ಹಾಲಶ್ರೀ ಸ್ವಾಮೀಜಿ ಜೊತೆ ಸೂಲಿಬೆಲೆ ಫೋಟೊ ವೈರಲ್

ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿವೆ.

ಚಕ್ರವರ್ತಿ ಸೂಲಿಬೆಲೆ ಮತ್ತು ಹಾಲಶ್ರೀ ಸ್ವಾಮೀಜಿ ರೈಲಿನಲ್ಲಿ ಪ್ರಯಾಣಿಸುವ ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊಗಳು ಹರಿದಾಡುತ್ತಿವೆ. ಅಲ್ಲದೇ, ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಜೊತೆಗಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ ಅವರ ಫೋಟೊಗಳು ಕೂಡ ಹರಿದಾಡುತ್ತಿದ್ದು, ”ʼಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ”ʼ ಎಂದು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಫೋಟೊ ಹಂಚಿಕೊಂಡಿದ್ದು, ಈ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಇರಬಹುದು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ರಾಹುಲ್ ಗಾಂಧಿಯನ್ನು ಟೀಕಿಸಿರುವ ಉದ್ಧವ್ ಠಾಕ್ರೆಯ ವೈರಲ್ ಭಾಷಣ 2019ರದ್ದು

0
ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ರಾಹುಲ್ ಗಾಂಧಿಯನ್ನು ನಾಲಾಯಕ್ (ನಿಷ್ಪ್ರಯೋಜಕ) ಎಂದು ಕರೆದಿರುವುದಲ್ಲದೆ, ಅವರಿಗೆ ಹೊಡೆಯಬೇಕು ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಠಾಕ್ರೆ ಅವರು"...