Homeಮುಖಪುಟಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

ಭಾರತೀಯ ಕಾನೂನುಗಳಿಗೆ ಬದ್ಧರಾಗಿದ್ದೇವೆ: ಸಂಸದೀಯ ಸಮಿತಿ ಮುಂದೆ ಟ್ವಿಟರ್ ಸ್ಪಷ್ಟನೆ

- Advertisement -
- Advertisement -

ಶಶಿ ತರೂರ್ ನೇತೃತ್ವದ ಸಂಸದೀಯ ಸಮಿತಿಯ ಮುಂದೆ ಹಾಜರಾದ ಟ್ವಿಟರ್ ಇಂಡಿಯಾದ ಪಬ್ಲಿಕ್ ಪಾಲಿಸಿ ಮ್ಯಾನೇಜರ್ ಶಗುಫ್ತ ಕಮ್ರಾನ್ ಮತ್ತು ಕಾನೂನು ಪ್ರತಿನಿಧಿ ಆಯುಶಿ ಕಪೂರ್ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆ ವೇಳೆ ಸಂಸದೀಯ ಸಮಿತಿಯು ಟ್ವಿಟ್ಟರ್‌ಗೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕಂಪನಿಯು ದೇಶದ ಕಾನೂನನ್ನು ಪಾಲಿಸಲು ಸಿದ್ಧವಿದೆಯೇ ಎಂದು ಸಂಸದೀಯ ಸಮಿತಿಯು ಕೇಳಿದಾಗ ಟ್ವಿಟರ್ ಪ್ರತಿನಿಧಿಗಳು “ಟ್ವಿಟರ್ ತನ್ನದೇ ಆದ ನೀತಿ ನಿಯಮಗಳಿವೆ. ಆದರೆ ಭಾರತೀಯ ಕಾನೂನುಗಳು ಸರ್ವೋಚ್ಛವಾಗಿದ್ದು, ಅವುಗಳಿಗೆ ಬದ್ಧರಾಗಿರುತ್ತೇವೆ” ಎಂದು ಉತ್ತರಿಸಿದೆ.

ನಾವು ಪಾರ್ಲಿಮೆಂಟಿನ ಸ್ಟ್ಯಾಂಡಿಂಗ್ ಕಮಿಟಿಯ ವಿಚಾರಣೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇವೆ. ದೇಶದ ಜನರ ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗೆ ಟ್ವಿಟರ್ ಸದಾ ಬದ್ಧವಾಗಿದೆ. ಪಾರದರ್ಶಕತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಜನರ ಖಾಸಗಿತನದೊಂದಿಗೆ ಟ್ವಿಟ್ಟರ್ ಎಂದೂ ರಾಜಿಯಾಗುವುದಿಲ್ಲ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಜನರ ಸುರಕ್ಷತೆ, ಅಪರಾಧ ತಡೆ, ದೇಶದ ಭದ್ರತೆಗೆ ಸಂಬಂಧಿಸಿದ ಹಾಗೆ ನಾವು ಭಾರತ ಸರ್ಕಾರದೊಂದಿಗಿನ ನಮ್ಮ ಆದ್ಯತೆ ಮತ್ತು ಬದ್ಧತೆಯನ್ನು ಮುಂದುವರೆಸುತ್ತೇವೆ ಎಂದು ಟ್ವಿಟ್ಟರ್ ಪ್ರತಿನಿಧಿಗಳು ತಿಳಿಸಿದ್ದಾರೆ.

ಸಂಸದೀಯ ಸಮಿತಿಯ ವಿಚಾರಣೆಯು ಕೇಂದ್ರ ಸರ್ಕಾರ ಮತ್ತು ಟ್ವಿಟ್ಟರ್ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಡೆದಿದೆ. ಟ್ವಿಟ್ಟರ್ ಸಾರ್ವಜನಿಕರ ಸುರಕ್ಷತೆಗೆ ಬದ್ಧವಾಗಿಲ್ಲ ಎಂಬ ಕಾರಣದಿಂದ ಟ್ವಿಟರ್‌ಗೆ ಐಟಿ ಕಾಯ್ದೆಯಡಿ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ನೀಡಿದ್ದ ಕಾನೂನಾತ್ಮಕ ರಕ್ಷಣೆಯನ್ನು ಕೇಂದ್ರ ಸರ್ಕಾರ ಬುಧವಾರ ಜೂನ್ 16 ರಂದು ಹಿಂಪಡೆದಿದೆ. ಈಗ ಪ್ರತಿಯೊಂದು ಟ್ವೀಟ್, ಪೋಸ್ಟ್ ಗಳಿಗೆ ಟ್ವಿಟರ್ ನೇರ ಹೊಣೆಯಾಗಿರುತ್ತದೆ. ಟ್ವೀಟ್ ಮಾಡಿದ ವ್ಯಕ್ತಿಗಳ ಜೊತೆಗೆ ಟ್ವಿಟರ್ ಮೇಲೆ ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಮೇ ತಿಂಗಳಿನಲ್ಲಿ ‘ಕಾಂಗ್ರೆಸ್‌ ಟೂಲ್‌ಕಿಟ್’ ಎಂಬ ಟ್ವೀಟ್ ಮಾಡಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಆ ನಂತರ ಟ್ವಿಟರ್‌ ಆ ಪೋಸ್ಟ್‌ಗಳಿಗೆ ಮ್ಯಾನುಪಲೇಟೆಡ್ ಮೀಡಿಯಾ ಎಂಬ ಟ್ಯಾಗ್‌ ಹಾಕಿತ್ತು. ಮ್ಯಾನುಪಲೇಟೆಡ್ ಮೀಡಿಯಾ ಟ್ಯಾಗ್‌ ಡಿಲೀಟ್ ಮಾಡುವಂತೆ ಟ್ವಿಟರ್‌ಗೆ ಕೆಂದ್ರ ಸರ್ಕಾರ ಆದೇಶಿಸಿತ್ತು. ಆದರೆ ಟ್ವಿಟ್ಟರ್ ಆ ಟ್ಯಾಗ್‌ಗಳನ್ನು ಡಿಲೀಟ್ ಮಾಡಿರಲಿಲ್ಲ. ಅಲ್ಲಿಂದ ಆರಂಭವಾದ ವೈಮನಸ್ಸು ಮುಂದುವರಿದಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...