Homeಮುಖಪುಟಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಅನೇಕರು ಇದನ್ನು ’ಸಾಂಸ್ಥಿಕ ಕೊಲೆ’ ಎಂದು ಕರೆದಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ಟೋಬರ್ 1 ರಂದು ಹಿಂದುಳಿದ ವರ್ಗದ ಡಾ.ಭಾಗವತ್ ದೇವಾಂಗನ್ ಎಂಬ 28 ​​ವರ್ಷ ವಯಸ್ಸಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು “ಮೇಲ್ಜಾತಿ” (ಸವರ್ಣ)ಯ ಸೀನಿಯರ್‌ ವಿದ್ಯಾರ್ಥಿಗಳು ಕೆಲವು ತಿಂಗಳುಗಳಿಂದ ಮಾನಸಿಕವಾಗಿ ಹಿಂಸಿಸುತ್ತಿದ್ದರು ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಭಾಗವತ್ ದೇವಾಂಗನ್ ಜಂಜಗೀರ್ ಚಂಪಾದ ಸಣ್ಣ ಪಟ್ಟಣವಾದ ರಹೌದ್ ನಿವಾಸಿಯಾಗಿದ್ದು, ಅವರ ತಂದೆ ತಮ್ಮ ಊರಿನಲ್ಲಿ ಪಾತ್ರೆಗಳನ್ನು ಮಾರಾಟ ಮಾಡಿ ಜೀವನ ದೂಡುತ್ತಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭಾಗವತ್ ಆರನೆ ತರಗತಿಯ ತನಕ ಸ್ಥಳೀಯ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ನಂತರ ನವೋದಯ ವಿದ್ಯಾಲಯದಲ್ಲಿ 12 ನೇ ತನಕ ಅಧ್ಯಯನ ಮಾಡಿ ಪುಣೆಯ ಬೈರಂಜಿ ಜೀಜೀಭಾಯ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ವೈದ್ಯಕೀಯ ವಿದ್ಯಾರ್ಥಿಯಾಗಿ ಭಾಗವತ್ | ಬಿಬಿಸಿ ಹಿಂದಿ

ಐದು ಸೀನಿಯರ್‌ ವಿದ್ಯಾರ್ಥಿಗಳು ನಿರಂತರ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಜುಲೈ 1 ರಂದು ಕಾಲೇಜಿಗೆ ಸೇರಿದ ಹದಿನೈದು ದಿನಗಳ ನಂತರ, ಭಾಗವತ್ ತಮ್ಮ ಜಾತಿ ಮತ್ತು ಆರ್ಥಿಕ ಹಿನ್ನೆಲೆಯ ಕಾರಣಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

“ನಮ್ಮ ಸೀನಿಯರ್ಸ್‌‌‌ ನಮ್ಮ ಜಾತಿ ಮತ್ತು ಬಡತನವನ್ನು ಉಲ್ಲೇಖಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಭಾಗವತ್ ನನಗೆ ಪ್ರತಿಭಾರಿಯೂ ಹೇಳುತ್ತಿದ್ದ, ಆಡಳಿತ ಮಂಡಳಿಗೆ ಇದು ತಿಳಿದಿತ್ತು. ಆದರೆ ಮಧ್ಯಪ್ರವೇಶಿಸಿಲ್ಲ” ಎಂದು ಮೃತ ಭಾಗವತ್ ಸಹೋದರ ಪ್ರಹ್ಲಾದ್ ಹೇಳಿದ್ದಾರೆ.

“ಸರಿಯಾದ ಅಧ್ಯಯನವಿಲ್ಲದೆ ಮೀಸಲಾತಿ ಆಧಾರದಲ್ಲಿ ಪ್ರವೇಶ ಪಡೆದ್ದಾಗಿ, ತನ್ನನ್ನು ಪದೇ ಪದೇ ’ಅರ್ಹನಲ್ಲದವ’ ಎಂದು ಸೀನಿಯರ್‌ಗಳು ಕರೆಯುತ್ತಾರೆ” ಎಂದು ಹೇಳಿದ್ದಾಗಿ ಪ್ರಹ್ಲಾದ್ ಹೇಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಕಿರುಕುಳದಿಂದಾಗಿ ಭಾಗವತ್ ಜುಲೈ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು, ಇದಕ್ಕಾಗಿ ಒಂದು ತಿಂಗಳ ಕಾಲ ಅವರನ್ನು ಮನೆಗೆ ಕಳುಹಿಸಲಾಯಿತ್ತು. ಇದಾಗಿ ಅವರ HOD ಕೋರಿಕೆಯ ಮೇರೆಗೆ ಅವರು ಮರಳಿದ್ದರು ಎನ್ನಲಾಗಿದ್ದು, ಆದರೂ ಕಿರುಕುಳ ನಿಲ್ಲಲಿಲ್ಲ. ವಿಕಾಸ್ ದ್ವಿವೇದಿ, ಸಲ್ಮಾನ್ ಖಾನ್, ಅಮನ್ ಗೌತಮ್, ಶುಭಮ್ ಶಿಂಧೆ ಮತ್ತು ಅಭಿಷೇಕ್ ಗ್ಯಾಮೆ ಮುಂತಾದವರ ವಿರುದ್ಧ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕುಟುಂಬವು ದೂರು ದಾಖಲಿಸಿದೆ.

ವೈದ್ಯಕೀಯ ಕಾಲೇಜು ಹಾಸ್ಟೆಲ್‌ನ ವಾರ್ಡನ್ ಮತ್ತು ಕಾಲೇಜಿನ ಆಂಟಿ ರ‍್ಯಾಗಿಂಗ್ ಸಮಿತಿಯ ಸದಸ್ಯರಾದ ಡಾ.ಅರವಿಂದ್ ಶರ್ಮಾ ಹಾಸ್ಟೆಲ್ ಒಳಗೆ ರ‍್ಯಾಗಿಂಗ್ ಅಥವಾ ಯಾವುದೇ ರೀತಿಯ ಕಿರುಕುಳ ನಡೆದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7 ರಿಂದ, ಕುಟುಂಬ ಮತ್ತು ಸಮುದಾಯದ ಸದಸ್ಯರು ಪೊಲೀಸ್ ನಿಷ್ಕ್ರಿಯತೆಗಾಗಿ ಕ್ಯಾಂಡಲ್ ಮಾರ್ಚ್ ಮಾಡಿದ್ದು, ಒಂದು ವಾರದಿಂದ ತನಿಖೆ ನಡೆಸುತ್ತಿದ್ದರೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ವಿಷಯವನ್ನು ಮುಂದೂಡಲು ಪ್ರಯತ್ನಿಸುತ್ತಿದೆ ಎಂದು ಅವರ ಸಮುದಾಯ ಆರೋಪಿಸುತ್ತಿದೆ. ಭಾಗವತ್ ಅವರ ಬಾಲ್ಯ ಸ್ನೇಹಿತ ದಿಲೀಪ್ ದೇವಾಂಗನ್ “ಜಸ್ಟಿಸ್ ಫಾರ್ ಭಾಗವತ್ ದೇವಾಂಗನ್” ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿಗೆ 1000 ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಡ ಆರೋಗ್ಯ ಸಚಿವ ಟಿ.ಎಸ್.ಸಿಂಗ್‌ದೇವ್ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ ಪತ್ರವೊಂದನ್ನು ಬರೆದಿದ್ದು, ಕಠಿಣವಾದ ರಾಗಿಂಗ್ ವಿರೋಧಿ ನಿಯಮಗಳ ಹೊರತಾಗಿಯೂ, ರ‍್ಯಾಗಿಂಗ್‌ನಿಂದಾಗಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಾಂಸ್ಥಿಕ ಕೊಲೆ

ತಳಸಮುದಾಯದ ವಿದ್ಯಾರ್ಥಿಗಳನ್ನು ಆತ್ಮಹತ್ಯೆಗೆ ತಳ್ಳುವ ವ್ಯವಸ್ಥಿತ ವಿಧಾನದ ಒಂದು ಭಾಗವಾಗಿ ಸೀನಿಯರ್‌ ವಿದ್ಯಾರ್ಥಿಗಳಿಂದ ದೈಹಿಕ ಮತ್ತು ಮಾನಸಿಕವಾಗಿ ನಡೆಯುವ ಜಾತಿವಾದಿ ಕಿರುಕುಳ ಹಾಗೂ ಆಡಳಿತ ಮಂಡಳಿಯ ಉದ್ದೇಶಪೂರ್ವಕ ನಿರ್ಲಕ್ಷ್ಯಕ್ಕಾಗಿ ಈ ಆತ್ಮಹತ್ಯೆಯನ್ನು ಅನೇಕ ಜನರು “ಸಾಂಸ್ಥಿಕ ಕೊಲೆ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಭಾರತದ ಪ್ರತಿಯೊಂದು ವಿಶ್ವವಿದ್ಯಾನಿಲಯದಲ್ಲೂ ಜಾತಿವಾದಿ ಹಿಂಸಾಚಾರವನ್ನು ಸಾಂಸ್ಥೀಕರಣಗೊಳಿಸಲಾಗಿದ್ದರೂ, ಇದು ಪಿಜಿ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಮಾನಸಿಕ ಆರೋಗ್ಯಕ್ಕೋಸ್ಕರ ಕೆಲಸ ಮಾಡುತ್ತಿರುವ ’ದಿ ಬ್ಲೂ ಡಾನ್’ ಈ ವಿಷಯದ ಬಗ್ಗೆ ಬರೆದಿದೆ,

2010 ರಲ್ಲಿ ಏಮ್ಸ್‌ನ ದಲಿತ ವೈದ್ಯಕೀಯ ವಿದ್ಯಾರ್ಥಿ ಡಾ.ಬಾಲಮುಕುಂದ್ ಭಾರತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಡಳಿತ ಮಂಡಳಿಯು ಅವರು ಖಿನ್ನತೆಗೊಳಗಾಗಿದ್ದರು ಎಂದು ಹೇಳಿಕೊಂಡಿದೆ. ಹಾಗಾಗಿ ಅವರ ಮಾನಸಿಕ ಆರೋಗ್ಯವು ಜಾತಿ ಆಧಾರಿತ ಹಿಂಸೆಯಿಂದ ಹೀಗಾಗಿದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿತು.

ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲೂ ಸರ್ಕಾರ ಸೇರಿದಂತೆ ಆಡಳಿತ ಮಂಡಳಿ ಇದನ್ನೇ ಹೇಳಿದ್ದವು. 2019 ರಲ್ಲಿ ಡಾ. ಪಾಯಲ್ ತಡ್ವಿ ಆತ್ಮಹತ್ಯೆ ಮಾಡಿಕೊಂಡಾಗ, ಆಕೆಯ ಪೋಷಕರು ದೌರ್ಜನ್ಯಕ್ಕೀಡು ಮಾಡಿದ ಮೇಲ್ಜಾತಿಯವರ ವಿರುದ್ಧ ದೂರು ನೀಡಿದರೂ ಮುಂಬೈನ ನಾಯರ್ ಕಾಲೇಜು ಕೂಡ ಇದನ್ನೇ ಹೇಳಿತ್ತು.

Members of Vanchit Bahujan Aghadi protest against Nair Hospital’s management. They sought immediate arrest of culprits responsible for death of Payal Tadvi at Nair Hospital Gate in Mumbai Central. (Photo: Debasish Dey)

ಡಾ. ಪಾಯಲ್ ತಡ್ವಿ ಪ್ರಕರಣದಲ್ಲಿ, ಪ್ರತಿಭಟನಾಕಾರರು ಮತ್ತು ಅವರ ಕುಟುಂಬವು ಪೊಲೀಸರು ಮತ್ತು ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿತ್ತಾದರೂ, ಪ್ರಕರಣವನ್ನು ಮುಂದೆ ತೆಗೆದುಕೊಳ್ಳಲಾಗಿಲ್ಲ. ಅಕ್ಟೋಬರ್ 8 ರಂದು ಆರೋಪಿಗಳಿಗೆ ಜಾಮೀನು ನೀಡಲಾಯಿತು. ಸವರ್ಣರಿಂದ ಹಿಂದುಳಿದ ವರ್ಗಗಳ ಮೇಲೆ ಹಿಂಸಾಚಾರ ನಡೆದಾಗೆಲ್ಲ ಪೊಲೀಸರು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿ ಸವರ್ಣರನ್ನು ರಕ್ಷಿಸಲು ಪ್ರಯತ್ನಿಸುತ್ತದೆ. ಹತ್ರಾಸ್ ಘಟನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...