Homeಕರ್ನಾಟಕಎನ್‌ಇಪಿ, ಪರಿಷ್ಕೃತ ಪಠ್ಯ ರದ್ದಾಗಲಿ: ನೂತನ ಸರ್ಕಾರಕ್ಕೆ ದಸಂಸ ಆಗ್ರಹ

ಎನ್‌ಇಪಿ, ಪರಿಷ್ಕೃತ ಪಠ್ಯ ರದ್ದಾಗಲಿ: ನೂತನ ಸರ್ಕಾರಕ್ಕೆ ದಸಂಸ ಆಗ್ರಹ

- Advertisement -
- Advertisement -

ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್‌ ಸರ್ಕಾರ ಅವೈಜ್ಞಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ) ರದ್ದುಗೊಳಿಸಬೇಕು, ಕೋಮುವಾದಿಕರಣಗೊಂಡ ಪಠ್ಯಪುಸ್ತಕಗಳನ್ನು ರದ್ದುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ.

ಈ ಕುರಿತಂತೆ ಪತ್ರ ಬರೆದಿರುವ ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್‌, “ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಜನರು ನಿರೀಕ್ಷೆಗೂ ಮೀರಿ ಬೆಂಬಲಿಸಿದ್ದಾರೆ. ಆದ್ದರಿಂದ, ತನ್ನ ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್‌ ತಾನು ನೀಡಿರುವ ಪ್ರಮುಖ ಭರವಸೆಗಳನ್ನು (ಕಾಂಗ್ರೆಸ್‌ ಗ್ಯಾರಂಟಿಗಳು) ಜಾರಿಗೆ ತರಬೇಕು. ದಲಿತ ಹಾಗೂ ದಮನಿತ ಸಮುದಾಯದ ಮಕ್ಕಳಿಗೆ ಮಾರಕವಾಗಿರುವ ಅವೈಜ್ಞಾನಿಕ ಎನ್‌ಇಪಿ (ಹೊಸ ಶಿಕ್ಷಣ ನೀತಿ) ರದ್ದು ಮಾಡಬೇಕು. ದ್ವೇಷ ತುಂಬಿದ ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟು, ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯವನ್ನೇ ಮುಂದುವರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಹೈಸ್ಕೂಲ್‌ ಮಕ್ಕಳಿಗೆ ಈ ವರ್ಷದಿಂದ ಬೈಸಿಕಲ್ ವಿತರಣೆ ಜತೆಗೆ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೂ ಬಿಡುಗಡೆ ಮಾಡಬೇಕು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯಲ್ಲಿನ 7(ಡಿ) ಕಲಂ ತೆಗೆದು, ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಬಿಜೆಪಿ ತನ್ನ ದ್ವೇಷ ರಾಜಕಾರಣದಿಂದ ರದ್ದು ಮಾಡಿದ್ದ ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿ, ಪರಿಶಿಷ್ಟ ಸಮುದಾಯದ ಎಲ್ಲ ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಬೇಕು. ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆದ್ಯತೆ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಅವಧಿಯ ದುರಾಡಳಿತವನ್ನು ಮೆಲುಕು ಹಾಕಿರುವ ಅವರು, “ಕೇಂದ್ರದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಹಾಗೂ ಅನೈತಿಕ ಆಪರೇಷನ್‌ ಕಮಲದ ಮೂಲಕ ಕಳೆದ ಮೂರೂವರೆ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಜನಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಒಂದು ಕಡೆಯಾದರೆ, ಅವರ ಹಿಂದಿ ಹೇರಿಕೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಹ ಹಲವಾರು ನಿರ್ಧಾರಗಳು ಕನ್ನಡಿಗರನ್ನು ಇನ್ನಿಲ್ಲದಂತೆ ಹೈರಾಣಾಗಿಸಿದೆ. ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನಡೆಗಳಿಗೆ ಮಂಡಿಯೂರುತ್ತಾ, ಬಿಜೆಪಿ ಹೈಕಮಾಂಡ್ ತಾಳಕ್ಕೆ ತಕ್ಕಂತೆ ಕುಣಿದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕನ್ನಡಿಗರ ಹಿತ ಕಾಯುವಲ್ಲಿ ವಿಫಲರಾದರು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಗ್ಯಾಸ್ ಸೇರಿದಂತೆ ಹಲವು ದಿನಬಳಕೆ ವಸ್ತುಗಳು ರಾಜ್ಯದ ಬಡಜನರ ಕೈ ಸಡುತ್ತಿದ್ದರೆ, ಮತ್ತೊಂದು ಕಡೆ ಆಜಾನ್, ಹಲಾಲ್, ಬುರ್ಕಾ ಹಾಗೂ ಮುಸ್ಲಿಂ ಸಮುದಾಯದ ವ್ಯಾಪಾರಕ್ಕೆ ಜಾತ್ರೆ-ದೇವಾಲಯಗಳಲ್ಲಿ ಹೇರಿದ್ದ ನಿಷೇಧವನ್ನು ಸಮರ್ಥಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಹೇಳಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನವನ್ನು ಕಳೆದಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

“ಬಿಜೆಪಿಯ ಇಂಥ ಹಲವು ಅತಿರೇಕದ ವರ್ತನೆಗಳಿಗೆ ಹಾಗೂ ಸಂವಿಧಾನ ವಿರೋಧಿ ನಿಲುವುಗಳಿಗೆ ಕನ್ನಡಿಗರು ತಕ್ಕ ಪಾಠ ಕಲಿಸಿದ್ದಾರೆ. 2023ರ ಮೇ13ರಂದು ಹೊರಬಿದ್ದ ಕರ್ನಾಟ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಬಹುಮತ ಪಡೆದಿದ್ದು, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಮಣ್ಣುಮುಕ್ಕಿದೆ” ಎಂದು ತಿಳಿಸಿದ್ದಾರೆ.

“ಕರ್ನಾಟಕದ ಪ್ರಜ್ಞಾವಂತ ಮತದಾರರು ಸಂವಿಧಾನ ವಿರೋಧಿಗಳನ್ನು ತಿರಸ್ಕರಿಸಿ, ಸಾಮಾಜಿಕ ನ್ಯಾಯ ಕಲ್ಪಿಸಿ, ರಾಜ್ಯದಲ್ಲಿ ಶಾಂತಿ ಕಾಪಾಡುತ್ತಾರೆ ಎಂಬ ಭರವಸೆ ಮೇಲೆ ಕಾಂಗ್ರೆಸ್‌ ಕೈ ಹಿಡಿದು ಇಡೀ ದೇಶಕ್ಕೆ ಒಂದು ಬಲವಾದ ಸಂದೇಶ ರವಾನಿಸಿದ್ದಾರೆ. ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿ ಕೂಡ ರಾಜ್ಯದಾದ್ಯಂತ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ, ಮತ ಚಲಾಯಿಸಲು ಪ್ರೋತ್ಸಾಹಿಸುವಂತೆ ಕರೆ ನೀಡಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿ, ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ ಎಲ್ಲ ದಲಿತ ಚಳವಳಿಯ ಒಡನಾಡಿಗಳಿಗೆ ಹಾಗೂ ಕಾರ್ಯಕರ್ತರಿಗೆ ಭೀಮ ನಮಗಳು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...