Homeಕರ್ನಾಟಕಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ...

ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರಿಂದ ಪತ್ರ

- Advertisement -
- Advertisement -

ಕಳೆದ ವರ್ಷ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಭಾರಿ ವಿವಾದಕ್ಕೆ ಕಾರಣವಾಗಿತ್ತು.  ಇದೀಗ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು ಮತ್ತು ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಿ, ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆಯು ಒತ್ತಾಯಿಸಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ ಅವರು, ”ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು (ಎನ್‌ಇಪಿ) ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ‘ರಾಜ್ಯ ಶಿಕ್ಷಣ ನೀತಿ’ ರೂಪಿಸಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

”ಈ ಮೊದಲು ಆಡಳಿತ ನಡೆಸಿದ್ದ ಬಿಜೆಪಿ ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕಾಗಿ ಬಳಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಆಗುವವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಪರಿಷ್ಕೃತ ಪಠ್ಯವನ್ನು ಕೈಬಿಟ್ಟು, 2017-18ರಲ್ಲಿ ಜಾರಿಯಲ್ಲಿದ್ದ ಪಠ್ಯಕ್ರಮ, ಪಠ್ಯವಸ್ತು ಮತ್ತು ಪಠ್ಯಪುಸ್ತಕಗಳನ್ನು ಮುಂದುವರೆಸಬೇಕು, ಮತ್ತು ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ತ ಮತ್ತು ಸಮಿತಿ ಸದಸ್ಯರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

”ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಅಸಂವಿಧಾನಿಕವಾಗಿದ್ದು, ವಿಧಾನಸಭೆಯಲ್ಲಿ ನಡೆಯುವ ಮೊದಲ ಅಧಿವೇಶನದಲ್ಲೇ ಇದನ್ನು ತಿರಸ್ಕರಿಸಬೇಕು. ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ತರಲು ಹೊಸ ಶಿಕ್ಷಣ ನೀತಿ ರೂಪಿಸಬೇಕು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ಈಗಾಗಲೇ ಕನ್ನಡ ಮತ್ತು ಇತಿಹಾಸ ಪುಸ್ತಕಗಳು ಮುದ್ರಣಗೊಂಡಿದ್ದು ಅವುಗಳನ್ನು ಸ್ಥಗಿತಗೊಳಿಸಬೇಕು. ಸರಿಯಾದ ಆದೇಶ ಕೂಡ ಇಲ್ಲದೆ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಪಠ್ಯಪರಿಷ್ಕರಣೆ ಹೆಸರಿನಲ್ಲಿ ರಾಜ್ಯದ ಖಜಾನೆಗೆ ಕೋಟ್ಯಂತರ ನಷ್ಟ ಉಂಟು ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಆ ಹಣವನ್ನು ವಸೂಲು ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ರಾಜ್ಯದಲ್ಲಿ 15 ಸಾವಿರ ಶಿಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು, ಜೂನ್ 15ರ ಒಳಗಾಗಿ ಅತಿಥಿ ಶಿಕ್ಷರನ್ನು ನೇಮಿಸಬೇಕು. ವಿದ್ಯಾರ್ಥಿಗಳ ಪಠ್ಯಪುಸ್ತಕ, ಶೂ, ಸಮವಸ್ತ್ರ ಬಸ್ ಪಾಸ್‌ಗಳನ್ನು ಸರಿಯಾದ ಸಮಯಕ್ಕೆ ಸಿಗುವಂತೆ ಕ್ರಮ ತೆಗೆದುಕೊಳ್ಳಬೇಕು ಮತ್ತು ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಶೇ.20 ರಷ್ಟು ಮೀಸಲಿಡಬೇಕು” ಎಂದು ಮನವಿ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...