Homeಕರ್ನಾಟಕಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

ಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

- Advertisement -
- Advertisement -

ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರ ಪ್ರಬಲ ಜಾತಿಗಳಾದ ಲಿಂಗಾಯತ ಮತ್ತು ಬಿಜೆಪಿಗೆ ಮೀಸಲಾತಿ ನೀಡುವ ಉದ್ದೇಶದಿಂದ ತರಾತುರಿಯಲ್ಲಿ ಶೇ 4ರಷ್ಟು ಮುಸ್ಲಿಂ ಮೀಸಲಾತಿ ರದ್ದು ಮಾಡಿದೆ. ಇದೀಗ ಸುಪ್ರೀಂ ಕೋರ್ಟ್, ‘ಈ ತೀರ್ಮಾನವು ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ’ ಎಂದು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಇತ್ತೀಚೆಗೆ ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿತ್ತು. ಆದರೆ ಬಿಜೆಪಿಯ ಈ ಮುಸ್ಲಿಂ ವಿರೋಧಿ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶೇ. 4ರಷ್ಟು ಮೀಸಲಾತಿ ರದ್ದುಗೊಳಿಸಿರುವ ನಿರ್ಧಾರ ‘ತೀರ ಕಳಪೆ ಹಾಗೂ ದೋಷಪೂರಿತ’ ಎಂದು ಹೇಳಿದೆ.

ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಸರ್ಕಾರ ಏಪ್ರಿಲ್‌ 18ರವರೆಗೆ ಯಾವುದೇ ನೇಮಕಾತಿ ಅಥವಾ ದಾಖಲಾತಿಯನ್ನು ಮಾಡುವಂತಿಲ್ಲ ಎಂದು ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಹಾಗೂ ಬಿ ವಿ ನಾಗರತ್ನ ಅವರನ್ನೊಳಗೊಂಡ ಪೀಠವು, ”ಕರ್ನಾಟಕ ಸರ್ಕಾರದ ಆದೇಶದ ನಿರ್ಧಾರ ಪ್ರಕ್ರಿಯೆ ‘ಕಳಪೆ ಹಾಗೂ ದೋಷಪೂರಿತವಾಗಿದ್ದಂತೆ’ ಕಂಡು ಬರುತ್ತಿದೆ ಎಂದು ಹೇಳಿ, ಅದಕ್ಕೆ ತಡಯಾಜ್ಞೆ ನೀಡುವ ಇಂಗಿತ ವ್ಯಕ್ತಪಡಿಸಿದೆ.”

ಕರ್ನಾಟಕ ಸರ್ಕಾರದ ಪರ ಹಾಜರಿದ್ದ ನ್ಯಾಯವಾದಿ ತುಷಾರ್‌ ಮೆಹ್ತಾ ನ್ಯಾಯಾಲಯ ಆದೇಶದ ಪಾಲನೆಯ ಭರವಸೆ ನೀಡಿದರು. ಈ ವೇಳೆ ತುಷಾರ್ ಮೆಹ್ತಾ ಅವರು, ಸರ್ಕಾರದ ಪ್ರತಿಕ್ರಿಯೆಗಾಗಿ ಸಮಯಾವಕಾಶವನ್ನು ಕೇಳಿದರು. ”ಮಾರ್ಚ್ 24ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನುಸಾರ ವಯಾವುದೇ ಬಡ್ತಿಗಳು ಅಥವಾ ನೇಮಕಾತಿಗಳನ್ನು ಮಾಡುವುದಿಲ್ಲ” ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ಇನ್ನು ಮುಸ್ಲಿಂ ಸಮುದಾಯದ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ದುಷ್ಯಂತ್ ದವೆ ಹಾಗೂ ಗೋಪಾಲ್ ಶಂಕರನಾರಾಯಣನ್ ಅವರು, ”ಮುಸ್ಲಿಂ ಮೀಸಲಾತಿ ರದ್ದುಗೊಳಿಸುವ ಮೊದಲು ರಾಜ್ಯ ಸರ್ಕಾರ ಯಾವುದೇ ಅಧ್ಯಯನ ನಡೆಸಿಲ್ಲ ಮತ್ತು ಯಾವುದೇ ದತ್ತಾಂಶವನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿಲ್ಲ” ಎನ್ನುವ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಆಗ ನ್ಯಾಯಪೀಠವು, ”ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯ ಆಧಾರದಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರೆ, ಆಯೋಗದ ಅಂತಿಮ ವರದಿ ಬರುವವರೆಗೂ ಸರ್ಕಾರ ಕಾಯಬಹುದಿತ್ತು. ಮುಸ್ಲಿಂ ಮೀಸಲಾತಿ ಸೌಲಭ್ಯ ಹಲವು ವರ್ಷಗಳಿಂದ ಸಿಗುತ್ತಿದೆ. ದಾಖಲೆಗಳ ಪ್ರಕಾರ ಆ ಸಮುದಾಯ ಬಹಳ ಹಿಂದುಳಿದಿದೆ. ಈಗ ದಿಢೀರನೆ ಹೇಗೆ ಬದಲಾಯಿತು?” ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದೆ.

ಒಕ್ಕಲಿಗರು ಮತ್ತು ಲಿಂಗಾಯತ ಸಮುದಾಯದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೊಹಟಗಿ, ”ಅರ್ಜಿಗಳಿಗೆ ತಮ್ಮ ಅಭಿಪ್ರಾಯ ನೀಡಲು ಅವಕಾಶ ಕೊಡುವವರೆಗೂ ಮಧ್ಯಂತರ ಆದೇಶ ನೀಡಬಾರದು” ಎಂದು ಮನವಿ ಮಾಡಿದರು.

ಈ ಹಿಂದೆ ಒಕ್ಕಲಿಗ ಸಮುದಾಯ ಶೇ. 4 ಮತ್ತು ಲಿಂಗಾಯತರು ಶೇ. 5 ಮೀಸಲಾತಿ ಹೊಂದಿದ್ದರು. ರಾಜ್ಯ ಸಚಿವ ಸಂಪುಟದ ನಿರ್ಧಾರದ ನಂತರ, ಒಕ್ಕಲಿಗರು ಶೇ. 6 ರಷ್ಟು ಮತ್ತು ಲಿಂಗಾಯತರು ಶೇ. 7 ರಷ್ಟು ಮೀಸಲಾತಿಯನ್ನು ಪಡೆಯುತ್ತಾರೆ.

ಒಬಿಸಿ ವರ್ಗದಿಂದ ಮುಸ್ಲಿಮರನ್ನು ತೆಗೆದುಹಾಕಿ ಶೇ. 10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವಿಭಾಗದಡಿಯಲ್ಲಿ ಅವರಿಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಮೀಸಲಾತಿ ಮಿತಿ ಸುಪ್ರೀಂಕೋರ್ಟ್ ನಿಗದಿ ಮಾಡಿದ ಶೇ 57ನ್ನು ಮೀರುತ್ತದೆ.

ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧಡೆ ಮುಸ್ಲಿಂ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದವು. ವಿಪಕ್ಷಗಳು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿವೆ.

ಸುಪ್ರೀಂ ಕೋರ್ಟ್‌ನ ಅಭಿಪ್ರಾಯದ ಬಳಿಕ ರಾಜ್ಯ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಮಾಡಿದ್ದು, ”ಬಿಜೆಪಿ ಸರ್ಕಾರವು ತರಾತುರಿಯಲ್ಲಿ 4% ಮುಸ್ಲಿಂ ಮೀಸಲಾತಿ ತೆಗೆದು ಹಾಕಿ ಒಕ್ಕಲಿಗರಿಗೆ 2%, ಲಿಂಗಾಯತರಿಗೆ 2% ಹಂಚಿಕೆ ಮಾಡಿದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ‌ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಬಿಜೆಪಿಯ ತರಾತುರಿಯ ಈ ಚುನಾವಣಾ ಗಿಮಿಕ್ ಅವೈಜ್ಞಾನಿಕವಾಗಿದ್ದು ಇದಕ್ಕೆ ಸುಪ್ರೀಂಕೋರ್ಟ್ ಮಾನ್ಯತೆ ದೊರಕುವುದಿಲ್ಲ” ಎಂದು ಹೇಳಿದೆ.

”ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‌ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ದಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು @BJP4Karnataka
ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ. “ಅನುಷ್ಠಾನ ಅಸಾಧ್ಯ” ಎಂಬುದು ಸುಪ್ರೀಂ ಹೇಳುವ ಮೂಲಕ ಬಿಜೆಪಿಯ ಕಿವಿ ಮೇಲೆ ಹೂವು ಇಡುವ ಪ್ರಯತ್ನವನ್ನು ಬಯಲುಗೊಳಿಸಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

”ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ”ಮೀಸಲಾತಿ ಗಿಮಿಕ್” ಅನುಷ್ಠಾನ ಮಾಡುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜನತೆಗೆ ಈಗ ನಿಮ್ಮ ಉತ್ತರವೇನು, ಸಾಬೂಬುಗಳೇನು? ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರವರ ಜಯಂತಿ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಸುಪ್ರೀಂ ಎತ್ತಿ ಹಿಡಿದಿದೆ. ಹಾಗೂ ಬಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಬೆತ್ತಲುಗೊಳಿಸಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ತರಾಟೆಗೆ ತಗೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...