Homeಮುಖಪುಟಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

- Advertisement -
- Advertisement -

ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿಲ್ಲದೆ ಎಲ್ಲಾ ಮಹಿಳೆಯರು ಸಹ ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿ ಡಿ.ವೈ ಚಂದ್ರಚುಡ್, ಜಸ್ಟಿಸ್ ಜೆ.ಬಿ ಪರ್ದಿವಾಲ ಮತ್ತು ಜಸ್ಟಿಸ್ ಎ.ಎಸ್ ಬೋಪಣ್ಣನವರು ಇದ್ದ ಪೀಠವು “ವೈದ್ಯಕೀಯ ಗರ್ಭಪಾತ (ತಿದ್ದುಪಡಿ) ಕಾಯ್ದೆ-2021ರ ಅಡಿಯಲ್ಲಿ ಅತ್ಯಾಚಾರದ ವ್ಯಾಖ್ಯಾನವು ವೈವಾಹಿಕ ಅತ್ಯಾಚಾರವನ್ನು ಸಹ ಒಳಗೊಂಡಿರಬೇಕು ಎಂದು ತಿಳಿಸಿದೆ.

ಮಹಿಳೆಯ ವೈವಾಹಿಕ ಸ್ಥಿತಿಗತಿಯ ಆಧಾರದಲ್ಲಿ ಗರ್ಭಪಾತವನ್ನು ನಿರ್ಧರಿಸಬಾರದು. ಅವಿವಾಹಿತ ಮಹಿಳೆಯರು ಸಹ 24 ವಾರಗಳಲ್ಲಿ ಅನಗತ್ಯ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಅರ್ಹರಾಗಿರುತ್ತಾರೆ. ಒಂಟಿ ಅಥವಾ ಅವಿವಾಹಿತ ಮಹಿಳೆಯರಿಂದ ಅನಗತ್ಯ ಗರ್ಭಪಾತದ ಹಕ್ಕನ್ನು ಕಸಿದುಕೊಳ್ಳುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂದು ತಾರತಮ್ಯ ಮಾಡುವುದು ಅಸಾಂವಿಧಾನಿಕ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಗರ್ಭಪಾತ ತಿದ್ದುಪಡಿ ಕಾಯ್ದೆಯಡಿಯಲ್ಲಿ ವಿವಾಹಿತ ಮತ್ತು ಅವಿವಾಹಿತ ಮಹಿಳೆಯರ ನಡುವಿನ ವ್ಯತ್ಯಾಸವು ಕೃತಕವಾದುದು ಮತ್ತು ಅದು ಸಾಂವಿಧಾನಿಕವಾಗಿ ಸಮರ್ಥನೀಯವಲ್ಲ. ಏಕೆಂದರೆ ವಿವಾಹಿತ ಮಹಿಳೆಯರು ಮಾತ್ರ ಲೈಂಗಿಕವಾಗಿ ಸಕ್ರಿಯರಾಗಿದ್ದಾರೆ ಎಂಬುದು ಸಾಂಪ್ರದಾಯಿಕ ಪರಿಕಲ್ಪನೆಯನ್ನು ಬಲಪಡಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

25ರ ಹರೆಯದ ಅವಿವಾಹಿತ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ತಾನು ಅವಿವಾಹಿತಳಾಗಿದ್ದು, ಒಪ್ಪಿತ ಸಂಬಂಧದ ಕಾರಣಕ್ಕೆ ಗರ್ಭ ಧರಿಸಿದ್ದೇನೆ. ಆದರೆ ಕಾಯ್ದೆಯಡಿ ಗರ್ಭಪಾತಕ್ಕೆ ಅರ್ಹತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ; ಭಾರತ್‌ ಜೋಡೋ – ಹೃದಯ ಬೆಸೆಯುವ ಯಾತ್ರೆ: ಜಿ.ಪಿ.ಬಸವರಾಜು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...