Homeಮುಖಪುಟಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯಾನ್

ಕ್ರಿಶ್ಚಿಯನ್ನರ ಬಗ್ಗೆ ಮೋದಿಗೆ ಕಠಿಣ ಪ್ರಶ್ನೆಗಳನ್ನು ಕೇಳಬೇಕು: ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್

- Advertisement -
- Advertisement -

ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ-2010 (ಎಫ್‌ಸಿಆರ್‌ಎ) ಯನ್ನು ‘ಆಯುಧ’ವನ್ನಾಗಿ ಮಾಡುತ್ತಿರುವ ಬಗ್ಗೆ, ಮಣಿಪುರದ ಜನರು ನಿರ್ಲಕ್ಷಕ್ಕೆ ಒಳಗಾಗುತ್ತಿರುವುದು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ನರೇಂದ್ರ ಮೋದಿ ಸರ್ಕಾರಕ್ಕೆ ‘ಕಠಿಣ ಪ್ರಶ್ನೆಗಳನ್ನು’ ಕೇಳಬೇಕು ಎಂದು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಶುಕ್ರವಾರ ಹೇಳಿದ್ದಾರೆ.  ಕ್ರಿಶ್ಚಿಯನ್ನರ ಬಗ್ಗೆ

ದೆಹಲಿಯಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ ಕೆಲವು ದಿನಗಳ ನಂತರ ಅವರು ಈ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಶುಕ್ರವಾರದ ಬ್ಲಾಗ್ ಪೋಸ್ಟ್‌ನಲ್ಲಿ, ಓ’ಬ್ರಿಯಾನ್ ಅವರು ಕ್ರಿಶ್ಚಿಯನ್ ಸಮುದಾಯವು ಕೇಂದ್ರ ಸರ್ಕಾರದ ಜೊತೆಗೆ ತಮ್ಮ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ನರ ಬಗ್ಗೆ

“ಇವು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕೇಳಬೇಕಾದ ಕಠಿಣ ಪ್ರಶ್ನೆಗಳಾಗಿವೆ. ಅನೇಕ ಕ್ರಿಸ್‌ಮಸ್‌ಗಳು ಕಳೆದಿವೆ, ಈಗ ಉತ್ತರಗಳನ್ನು ಕೇಳಬೇಕಾಗಿದೆ” ಎಂದು ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರೂ ಆಗಿರುವ ಓ`ಬ್ರಿಯಾನ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಕ್ರಿಸ್‌ಮಸ್ ದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಮಾಡಲು ಏಕೆ ಪ್ರಯತ್ನಿಸಿದ್ದೀರಿ? ನೀವು ನಿರ್ದಿಷ್ಟವಾಗಿ ಕ್ರಿಶ್ಚಿಯನ್ ಸಮುದಾಯದಿಂದ ನಡೆಸಲ್ಪಡುವ ಸಂಸ್ಥೆಗಳನ್ನು ಗುರಿಯಾಗಿಸಲು ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ (ಎಫ್‌ಸಿಆರ್‌ಎ) ಅನ್ನು ಏಕೆ ಅಸ್ತ್ರಗೊಳಿಸುತ್ತಿದ್ದೀರಿ?,” ಎಂದು ಅವರು ಕೇಳಿದ್ದಾರೆ.

“ನೀವು ಮಣಿಪುರದ ಜನರನ್ನು ಏಕೆ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದೀರಿ? ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ , ಮಧ್ಯಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಉತ್ತರಾಖಂಡ, ರಾಜಸ್ಥಾನಗಳಲ್ಲಿ ಸಂವಿಧಾನದ 14, 15 ಮತ್ತು 25 ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಮತಾಂತರ ವಿರೋಧಿ ಕಾನೂನುಗಳನ್ನು ನೀವು ಏಕೆ ಪ್ರೋತ್ಸಾಹಿಸುತ್ತಿದ್ದೀರಿ?” ಎಂದು ಅವರು ಕೇಳಿದ್ದಾರೆ.

ಸರ್ಕಾರವು ವಕ್ಫ್ ಮಸೂದೆಯನ್ನು ಮುಂದಕ್ಕೆ ತರುತ್ತಿದ್ದು, ವಿಶೇಷವಾಗಿ ಕೇರಳದಲ್ಲಿ ‘ಅಲ್ಪಸಂಖ್ಯಾತ ವರ್ಸಸ್ ಅಲ್ಪಸಂಖ್ಯಾತ ಎಂದು ಆಟವಾಡುತ್ತಿದೆ ಎಂದು ಅವರು ಕೇಳಿದ್ದಾರೆ. “ದ್ವೇಷ ಭಾಷಣಗಳು ಮತ್ತು ಕಟ್ಟಾ ಕೋಮು ದೂಷಣೆಗಳನ್ನು ಖಂಡಿಸುವ ಒಂದು ಪದವನ್ನು ನೀವು ಏಕೆ ಹೇಳುವುದಿಲ್ಲ?” ಅವರು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರು ನಡೆಸುವ ಸಂಸ್ಥೆಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಅವರು ಆರೋಪಿಸಿದ್ದು, ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರದ ಘಟನೆಗಳು ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.  “ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು 2014 ರಿಂದ ಎರಡು ಬಾರಿ ವಿಶ್ವಸಂಸ್ಥೆಯ ಮಾನ್ಯತೆಯನ್ನು ಏಕೆ ಕಳೆದುಕೊಂಡಿತು? ನಿಮಗೆ ಫಾದರ್ ಸ್ಟಾನ್ ಸ್ವಾಮಿ ನೆನಪಿದೆಯೇ? ಸಿಪ್ಪರ್? ಸ್ಟ್ರಾ? ಸಾವು?” ಅವರು ಕೇಳಿದ್ದಾರೆ.

84 ವರ್ಷದ ಬುಡಕಟ್ಟು ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಆಗಿದ್ದ ಸ್ಟಾನ್ ಸ್ವಾಮಿ ಅವರು ಜೈಲಿನಲ್ಲೆ ಕೊರೊನಾ ಸೋಂಕಿಗೆ ಒಳಗಾಗಿ ಹೃದಯ ಸ್ತಂಭನದಿಂದ ಜುಲೈ 2021 ರಲ್ಲಿ ನಿಧನರಾಗಿದ್ದರು. ಅವರನ್ನು ಅಕ್ಟೋಬರ್ 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು ಮತ್ತು ಅವರು ಎಂಟು ತಿಂಗಳುಗಳನ್ನು ಮುಂಬೈ ಜೈಲಿನಲ್ಲಿ ಕಳೆದಿದ್ದರು. ಈ ವೇಳೆ ಅವರಿಗೆ ವೈದ್ಯಕೀಯ ಕಾರಣಕ್ಕೂ ಕೂಡಾ ಹಲವು ಬಾರಿ ಜಾಮೀನು ನಿರಾಕರಿಸಲಾಗಿತ್ತು. ಕೈಕಾಲು ನಡುಗುವ ರೋಗವಾದ ಪಾರ್ಕಿಸನ್ ಕಾರಣಕ್ಕೆ ಅವರಿಗೆ ಕೈಯ್ಯಲ್ಲಿ ಆಹಾರ ಸೇವಿಸಲು ಕಷ್ಟವಾಗಿತ್ತು. ಹಾಗಾಗಿ ಅವರಿಗೆ ಆಹಾರ ಸೇವಿಸಲು ಸ್ಟ್ರಾ ನೀಡಲು ಕೂಡಾ ಅನುಮತಿಯನ್ನು ನಿರಾಕರಿಸಲಾಗಿತ್ತು.

“ಸಂವಿಧಾನವನ್ನು ರಕ್ಷಿಸದವರನ್ನು ಎತ್ತಿತೋರಿಸುವ ಬಗ್ಗೆ ಕ್ರಿಶ್ಚಿಯನ್ ನಾಯಕತ್ವವು ನಿಲುವು ತೆಗೆದುಕೊಳ್ಳಬೇಕು” ಎಂದು ಡೆರೆಕ್ ಒ`ಬ್ರಿಯಾನ್ ಹೇಳಿದ್ದಾರೆ. ಕ್ರಿಸ್‌ಮಸ್‌ಗೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಸಿಬಿಸಿಐ ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಮೋದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ದೆಹಲಿ ವಿವಿ ಕಾಲೇಜಿಗೆ ಮನಮೋಹನ್ ಸಿಂಗ್ ಹೆಸರಿಡುವಂತೆ ಎನ್‌ಎಸ್‌ಯುಐ ಆಗ್ರಹ; ಪ್ರಧಾನಿಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...