| ನಾನುಗೌರಿ ಡೆಸ್ಕ್ |
ಈ ಚುನಾವಣೆಯಲ್ಲಿ 22 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಖಾತೆ ತೆರೆಯಲು ವಿಫಲವಾಗಿದೆ.
ರಾಜಸ್ಥಾನ(25/25), ಗುಜರಾತ್(26/26), ಹರಿಯಾಣ (10/10) ದೆಹಲಿ(07/07), ಹಿಮಾಚಲಪ್ರದೇಶ(04/04) ಮತ್ತು ಅರುಣಚಲಪ್ರದೇಶ(02/02) ಗಳಲ್ಲಿ ಬಿಜೆಪಿ ಕ್ಲೀನ್‍ಸ್ವೀಪ್ ಸಾಧನೆ ಮಾಡಿದೆ.
ಕರ್ನಾಟಕದಲ್ಲಿ ಮೊದಲ ಬಾರಿಗೆ ಬಿಜೆಪಿ 25 ಎಂಪಿ ಕ್ಷೇತ್ರಗಳನ್ನು ಗೆಲ್ಲುವ ಮಹಾನ್ ಸಾಧನೆ ಮಾಡಿದೆ. ಕಳೆದ ಬಾರಿ 17 ಕ್ಷೇತ್ರಗಳನ್ನು ಗೆದ್ದಿದ್ದು ಇದುವರೆಗಿನ ಸಾಧನೆಯಾಗಿತ್ತು.
ಕರ್ನಾಟಕದಲ್ಲಿ ಕಾಂಗ್ರೆಸ್ 1, ಜೆಡಿಎಸ್ 1 ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದಿದ್ದಾರೆ.
ಗಾಂಧಿ ಹತ್ಯೆ ಮಾಡಿದ ಗೋಡ್ಸೆಯನ್ನು ಸಮರ್ಥಿಸುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದ ಪ್ರಗ್ಯಾ ಸಿಂಗ್, ನಳೀನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.
ಅಮೇಥಿಯಲ್ಲಿ ರಾಹುಲ್ ಗಾಂಧಿ ಹಿನ್ನಡೆ ಅನುಭವಿಸಿದರೆ, ಸ್ಮೃತಿ ಇರಾನಿ ಮುನ್ನಡೆ ಕಾಯ್ದುಕೊಂಡಿದ್ದಾರೆ
ಕೇರಳದ ವಯನಾಡ್‍ನಲ್ಲಿ ರಾಹುಲ್ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಕೂಟ 20ರಲ್ಲಿ 18 ಕ್ಷೇತ್ರಗಳನ್ನು ಗೆದ್ದಿದೆ.
ತಮಿಳುನಾಡಿನಲ್ಲಿ ಡಿಎಂಕೆ ಭರ್ಜರಿ ಜಯಭೇರಿ ಬಾರಿಸಿದೆ.
ಆಂಧ್ರದಲ್ಲಿ ಜಗನ್ ಮೋಹನ್ ರೆಡ್ಡಿ ಸ್ವೀಪ್ ಸಾಧನೆ ಮಾಡಿದ್ದಾರೆ. ಅವರ ವೈಎಸ್‍ಆರ್‍ಸಿಪಿ 25ಕ್ಕೆ 25ನ್ನು ಗೆದ್ದರೆ ಟಿಡಿಪಿಯ ಚಂದ್ರಬಾಬು ನಾಯ್ಡು ಸೊನ್ನೆ ಸುತ್ತಿದ್ದಾರೆ.
ಆಂಧ್ರ ಅಸೆಂಬ್ಲಿ ಚುನಾವಣೆಯಲ್ಲಿಯೂ ಸಹ ಟಿಡಿಪಿಗೆ ಸೋಲಾಗಿದ್ದು ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 30ಕ್ಕೆ ಜಗನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ ಐಎಸ್‍ಆರ್‍ಸಿಪಿ 147, ಟಿಡಿಪಿ 27 ಮತ್ತು ಜನಸೇನಾ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ತೃಣಮೂಲ ಕಾಂಗ್ರೆಸ್‍ನ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಲಗ್ಗೆ ಇಟ್ಟಿರುವ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೆಡ್ಡು ಹೊಡೆದಿದೆ.


