Homeಅಂತರಾಷ್ಟ್ರೀಯಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

ಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

"ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು" ಎಂದು ವಕ್ತಾರರು ಹೇಳಿದ್ದಾರೆ.

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್‌ ಮತ್ತು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪೊಂಪಿಯೋ, ಗುರುವಾರ ಲಡಾಖ್‌ ಘರ್ಷಣೆಯನ್ನು ನಿಲ್ಲಿಸುವುದರ ಕುರಿತು ಚರ್ಚಿಸಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಜುಲೈ 31 ರಂದು, ಭಾರತ ಮತ್ತು ಭೂತಾನ್‌ನಲ್ಲಿ ಚೀನಾ ಪ್ರಾದೇಶಿಕ ಹಕ್ಕುಗಳನ್ನು ಮಂಡಿಸುವುದರೊಂದಿಗೆ ಜಗತ್ತನ್ನು ಪರೀಕ್ಷಿಸಲಾಗುತ್ತಿದೆ ಆದರೆ, ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಚೀನಾದ ಬೆದರಿಕೆಗಳಿಂದ ಜಗತ್ತನ್ನು ಜಾಗೃತಗೊಳಿಸಿವೆ ಎಂದು ಪೊಂಪಿಯೊ ಹೇಳಿದ್ದಾರೆ.

ನಮ್ಮ ಹುರುಪಿನ ರಾಜತಾಂತ್ರಿಕತೆಯು ಸಿ.ಸಿ.ಪಿ [ಚೈನೀಸ್ ಕಮ್ಯುನಿಸ್ಟ್ ಪಾರ್ಟಿ] ಯ ಬೆದರಿಕೆಗೆ ಅಂತರರಾಷ್ಟ್ರೀಯ ಜಾಗೃತಿ ಮೂಡಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಮತ್ತು ಶಾಂತಿ ಪ್ರಕ್ರಿಯೆಯನ್ನು ನಿಯಂತ್ರಿಸುವ ಪ್ರಯತ್ನಗಳು ಸೇರಿದಂತೆ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಕಾರದ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಕೇಲ್ ಬ್ರೌನ್ ಹೇಳಿದ್ದಾರೆ.

“ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು” ಎಂದು ವಕ್ತಾರರು ಹೇಳಿದ್ದಾರೆ.

ಜೈಶಂಕರ್ ಮತ್ತು ಪೊಂಪಿಯೊ ವಿವಿಧ ವಿಷಯಗಳ ಬಗ್ಗೆ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಅಮೇರಿಕಾ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ನೊಂದಿಗಿನ ಒಪ್ಪಂದದ ಬಗ್ಗೆ ಸಮಾಲೋಚನೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಅಮೇರಿಕಾ-ಭಾರತ 2 + 2 ಮಂತ್ರಿ ಸಂವಾದವನ್ನು ಎದುರು ನೋಡುತ್ತೇವೆ ಎಂದು ಅವರು ಹೇಳಿದರು.

ನವೆಂಬರ್ 2017 ರಲ್ಲಿ, ಭಾರತ, ಪೆಸಿಫಿಕ್‌ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಚೀನಾದ ಪ್ರಭಾವದಿಂದ ದೂರವಿಡುವ ಪ್ರಯತ್ನದಲ್ಲಿ, ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಭಾರತ, ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಜಪಾನ್ ನಾಲ್ಕು ದೇಶಗಳು ಸೇರಿ ಚತುರ್ಭುಜ ಒಕ್ಕೂಟವನ್ನು ರಚಿಸಿದವು.

ನವೆಂಬರ್ 2018 ರಲ್ಲಿ, ಮೊದಲ ಭಾರತ-ಯುಎಸ್ 2 + 2 ಸಂವಾದವನ್ನು, ಒಂದು ಕಡೆ ರಕ್ಷಣಾ ಸಚಿವರು ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು, ಇನ್ನೊಂದೆಡೆ ರಕ್ಷಣಾ ಕಾರ್ಯದರ್ಶಿ ಮತ್ತು ಅಮೇರಿಕಾ ರಾಜ್ಯ ಕಾರ್ಯದರ್ಶಿ ನಡುವೆ ನಡೆಸಲಾಯಿತು.


ಇದನ್ನೂ ಓದಿ: 500 ಮಿಲಿಯನ್ ಡಾಲರ್‌ ಖರ್ಚಿನಲ್ಲಿ ಡಾಟಾ ಸೆಂಟರ್‌ ಸ್ಥಾಪಿಸುತ್ತಿರುವ ಟಿಕ್‌ಟಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...