ಗಾಯಕಿ ನೇಹಾ ಸಿಂಗ್ ಕುರಿತು ಎಬಿಪಿ ನ್ಯೂಸ್ ಸುಳ್ಳು, ಮಾನಹಾನಿಕರ ವರದಿ : ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಗಾಯಕಿ ಹಾಗೂ ಹೋರಾಟಗಾರ್ತಿ ನೇಹಾ ಸಿಂಗ್ ರಾಥೋರ್ ಬಗ್ಗೆ ಎಬಿಪಿ ನ್ಯೂಸ್ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ಎಬಿಪಿ ನ್ಯೂಸ್ ಇತ್ತೀಚೆಗೆ ನೇಹಾ ಸಿಂಗ್ ಅವರ ಹೆಸರನ್ನು ವೇಶ್ಯಾವಾಟಿಕೆ ಜಾಲದೊಂದಿಗೆ ಲಿಂಕ್ ಮಾಡಿ ಸುಳ್ಳು ಸುದ್ದಿಯೊಂದನ್ನು ಪ್ರಸಾರ ಮಾಡಿತ್ತು. ಈ ವರದಿಯು ಮಹಿಳೆಯ ಘನತೆಗೆ ಧಕ್ಕೆ ತರುವಂತಹದ್ದಾಗಿದ್ದು, ನೇಹಾ ಅವರ ಚಾರಿತ್ರ್ಯ ಹರಣಕ್ಕೆ ಯತ್ನಿಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. … Continue reading ಗಾಯಕಿ ನೇಹಾ ಸಿಂಗ್ ಕುರಿತು ಎಬಿಪಿ ನ್ಯೂಸ್ ಸುಳ್ಳು, ಮಾನಹಾನಿಕರ ವರದಿ : ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ