Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...