Homeಮುಖಪುಟಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುತ್ತೇವೆ: ಟಿಎಂಸಿಯ ಅಚ್ಚರಿಯ ಹೇಳಿಕೆ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುತ್ತೇವೆ: ಟಿಎಂಸಿಯ ಅಚ್ಚರಿಯ ಹೇಳಿಕೆ

- Advertisement -
- Advertisement -

ಆಗಸ್ಟ್ 6 ರಂದು ನಡೆಯುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಟಿಎಂಸಿ ಪಕ್ಷವು ಮತದಾನದಿಂದ ದೂರ ಉಳಿಯುತ್ತದೆ ಎಂದು ಪಕ್ಷದ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕಾಗಿ ಬಿಜೆಪಿ ಪಕ್ಷವು ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ದಂಖರ್‌ರವರನ್ನು ಕಣಕ್ಕಿಳಿಸಿದರೆ ವಿರೋಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷವು ಮಾರ್ಗರೇಟ್ ಆಳ್ವರನ್ನು ಕಣಕ್ಕಿಳಿಸಿತ್ತು.

ಇತ್ತೀಚೆಗೆ ಮಮತಾ ಬ್ಯಾನರ್ಜಿಯವರು ಡಾರ್ಜಲಿಂಗ್‌ನಲ್ಲಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಜಗದೀಪ್ ದಂಕರ್‌ರವರನ್ನು ಭೇಟಿ ಮಾಡಿದ್ದರು. ಅಲ್ಲಿ ದಂಖರ್‌ ತಮ್ಮನ್ನು ಬೆಂಬಲಿಸಲು ಮನವಿ ಮಾಡಿದ್ದರು ಎನ್ನಲಾಗಿದ್ದು, ಆ ಸಭೆಯ ನಂತರ ಈ ಆಶ್ಚರ್ಯಕರ ತೀರ್ಮಾನ ಬಂದಿದೆ.

ಇದುವರೆಗೂ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ದಂಖರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಬಹಳಷ್ಟು ಭಿನ್ನಾಭಿಪ್ರಾಯಗಳಿದ್ದವು. ಅವುಗಳನ್ನು ಇಬ್ಬರೂ ಹೊರಹಾಕುತ್ತಲೇ ಇದ್ದರು. ಈಗ ಅವರನ್ನು ಬೆಂಬಲಿಸಲು ಸಲುವಾಗಿ ಟಿಎಂಸಿ ಮತದಾನದಿಂದ ದೂರು ಉಳಿಯುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ಇನ್ನೊಂದೆಡೆ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಯ ಅಭ್ಯರ್ಥಿಯ ಹುಡುಕಾಟದ ಪ್ರಕ್ರಿಯೆಯ ನೇತೃತ್ವವನ್ನು ಮಮತಾ ಬ್ಯಾನರ್ಜಿ ವಹಿಸಿದ್ದರು. ಕಡೆಗೂ ಪಕ್ಷದ ಯಶವಂತ್ ಸಿನ್ಹಾರವರೆ ಅಭ್ಯರ್ಥಿ ಆಗಿದ್ದರು. ಆರಂಭದಲ್ಲಿ ವಿರೋಧ ಪಕ್ಷಗಳೆಲ್ಲವೂ ಅವರನ್ನು ಬೆಂಬಲಿಸಿದ್ದವು. ಆದರೆ ಎನ್‌ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮುರವನ್ನು ಘೋಷಿಸಿದ ನಂತರ ಶಿವಸೇನೆ, ಜೆಎಂಎಂ, ಜೆಡಿಎಸ್ ಸೇರಿದಂತೆ ಹಲವು ಪಕ್ಷಗಳು ತಮ್ಮ ಮನಸ್ಸು ಬದಲಿಸಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದ್ದವು. ಇದರಿಂದ ದ್ರೌಪದಿ ಮುರ್ಮು ಭಾರೀ ಅಂತರದಲ್ಲಿ ಗೆಲುವಿನ ಸನಿಹದಲ್ಲಿದ್ದಾರೆ. ಇದು ಸಹ ಟಿಎಂಸಿ ಮುನಿಸಿಗೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...