Homeಅಂತರಾಷ್ಟ್ರೀಯಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

- Advertisement -
- Advertisement -

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಬುಧಾಬಿಯ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, “ಈ ಘಟನೆಯಲ್ಲಿ ಭಾರತೀಯ ಮೂಲದ ಐವರು ವ್ಯಕ್ತಿಗಳು ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಮಧ್ಯಮ ಮಟ್ಟದ ಗಾಯಗಳಾಗಿದ್ದರೆ, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ” ಎಂದು ತಿಳಿಸಲಾಗಿದೆ.

ಪಶ್ಚಿಮ ಏಷ್ಯಾ ಸಂಘರ್ಷವು ಒಂದು ತಿಂಗಳು ಪೂರೈಸುತ್ತಿರುವಾಗ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ಸತತ ದಾಳಿಗಳನ್ನು ನಡೆಸುತ್ತಿದೆ. “ಇರಾನ್ ಉಡಾಯಿಸಿದ ಕ್ರೂಸ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಎದುರಿಸಲು ತನ್ನ ವಾಯು ರಕ್ಷಣಾ ವ್ಯವಸ್ಥೆಯು ಸಜ್ಜಾಗಿದೆ ಎಂದು ಯುಎಇ ರಕ್ಷಣಾ ಸಚಿವಾಲಯ ಹೇಳಿದೆ.

ಅಬುಧಾಬಿ ಸರ್ಕಾರಿ ಮಾಧ್ಯಮ ಕಚೇರಿಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ, ಎಮಿರೇಟ್‌ನ ಖಲೀಫಾ ಎಕನಾಮಿಕ್ ಝೋನ್ (KEZAD) ಪ್ರದೇಶದಲ್ಲಿ ಸಂಭವಿಸಿದ ಎರಡು ಅಗ್ನಿ ಅವಘಡಗಳನ್ನು ನಿಯಂತ್ರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.

ಬ್ಯಾಲಿಸ್ಟಿಕ್ ಕ್ಷಿಪಣಿಯೊಂದನ್ನು ವಾಯು ರಕ್ಷಣಾ ವ್ಯವಸ್ಥೆಯು ಯಶಸ್ವಿಯಾಗಿ ಹೊಡೆದುರುಳಿಸಿದಾಗ, ಅದರ ಅವಶೇಷಗಳು ಕೆಳಗೆ ಬಿದ್ದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಂದರೆ, ಕ್ಷಿಪಣಿಯು ಗುರಿಯನ್ನು ತಲುಪುವ ಮೊದಲೇ ಅದನ್ನು ಆಕಾಶದಲ್ಲಿಯೇ ನಾಶಪಡಿಸಲಾಗಿದ್ದು, ಅದರ ಚೂರುಗಳು ಬಿದ್ದ ಜಾಗದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...