Homeಮುಖಪುಟ53 ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಮಹಾರಾಷ್ಟ್ರ ಡಿಸಿಎಂ ಪತ್ನಿ ಅಮೃತಾ ಫಡ್ನವಿಸ್ ಅವರ ನಿಂದನೆ:...

53 ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಮಹಾರಾಷ್ಟ್ರ ಡಿಸಿಎಂ ಪತ್ನಿ ಅಮೃತಾ ಫಡ್ನವಿಸ್ ಅವರ ನಿಂದನೆ: 50 ವರ್ಷದ ಮಹಿಳೆಯ ಬಂಧನ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಮತ್ತು ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯನ್ನು ಸೈಬರ್ ಪೊಲೀಸ್ ಇಲಾಖೆ ಮಂಗಳವಾರ ಬಂಧಿಸಿದೆ.

ಬಂಧಿತ ಮಹಿಳೆಯನ್ನು ಸ್ಮೃತಿ ಪಾಂಚಾಲ್‌ ಎಂದು ಗುರುತಿಸಲಾಗಿದ್ದು, ಕಳೆದ ಎರಡು ವರ್ಷಗಳಿಂದ ಅಮೃತಾ ಫಡ್ನವಿಸ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅನೇಕ ನಕಲಿ ಖಾತೆಗಳನ್ನು ಬಳಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಮೃತಿ ಪಾಂಚಾಲ್ ಅವರು 53 ನಕಲಿ ಫೇಸ್‌ಬುಕ್ ಐಡಿಗಳು ಮತ್ತು 13 ಜಿಮೇಲ್ ಖಾತೆಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಮಹಿಳೆಗೆ ಮುಂಬೈ ನ್ಯಾಯಾಲಯವು ಗುರುವಾರದವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪೊಲೀಸರು ಮಹಿಳೆಯ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ 419 (ವಂಚನೆ), 468 (ವಂಚನೆಯ ಉದ್ದೇಶಕ್ಕಾಗಿ ನಕಲಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...