Homeಮುಖಪುಟಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಉದ್ಘಾಟಿಸಲು ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಜಿಲ್ಲಾಡಳಿತ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದೆ.

ಜಿಲ್ಲಾಡಳಿತವು ಗ್ರಾಮ ಪಂಚಾಯ್ತಿಗಳಿಗೆ ಜನರನ್ನು ಕರೆ ತರಲು ಆದೇಶ ನೀಡಿದೆ. ಅಲ್ಲದೆ ಪ್ರತಿ ಗ್ರಾಮಗಳಿಗೂ ಬಸ್ ಕಳಿಸಿದೆ. ಇನ್ನು ಗ್ರಾಮ ಪಂಚಾಯ್ತಿಗಳು ಕಾರ್ಯಕ್ರಮಕ್ಕೆ ಜನರು ಬರಬೇಕೆಂದು ಮೆಮೊ ಹೊರಡಿಸಿವೆ.

ಸರ್ಕಾರದ ವಿವಿಧ ಕಾರ್ಯಕ್ರಮದ ಪ್ರಯುಕ್ತ ಮೋದಿಯವರು ಆಗಮಿಸುತ್ತಿರುವುದರಿಂದ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರುಗಳು, ಗ್ರಾಮ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘ & ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಮಹಿಳಾ ಸದಸ್ಯರುಗಳು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಇಲಾಖೆಯ ನೌಕರ ವರ್ಗದವರು, ಗ್ರಾಮಗಳ ಮುಖಂಡರು, ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಲಾಗಿದೆ. ಮಂಡ್ಯ ಕಾರ್ಯಕ್ರಮಕ್ಕೆ ಹೋಗಿ ಬರಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಊಟದ ವ್ಯವಸ್ಥೆ ಇರುತ್ತದೆ ಎಂದು ಗ್ರಾಮ ಪಂಚಾಯ್ತಿಗಳು ಮೆಮೊ ಹೊರಡಿಸಿವೆ.

ಮಾರ್ಗ ಬದಲಾವಣೆಯಿಂದ ಪ್ರಯಾಣಿಕರ ಪರದಾಟ

ಇನ್ನೊಂದೆಡೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಳಿಗ್ಗೆ 6 ಗಂಟೆಯಿಂದ, ಸಂಜೆ 6 ಗಂಟೆಯವರೆಗೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಪೂರ್ಣ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಚನ್ನಪಟ್ಟಣದಿಂದ ಮೈಸೂರುವರೆಗಿನ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮಳವಳ್ಳಿ ಮಾರ್ಗದಲ್ಲಿ ತೆರಳಬೇಕೆಂದು ಆದೇಶ ಹೊರಡಿಸಲಾಗಿದೆ. ಇದರಿಂದ ಜನರಿಗೆ ಸಂಚಾರ ವ್ಯವಸ್ಥೆ ಇಲ್ಲದೆ ಪರದಾಟ ಅನುಭವಿಸಿದ್ದಾರೆ. ಇಂದು ಭಾನುವಾರ ಹಲವು ಮದುವೆಗಳು ನಿಗಧಿಯಾಗಿದ್ದು, ಬಿಗಿ ಭದ್ರತೆಯಿಂದ ಪರದಾಡುವಂತಾಗಿದೆ.

ಪ್ರಜೆಗಳ ಹಣದಲ್ಲಿ ಬಿಜೆಪಿ ಜಾತ್ರೆ- ಪ್ರಕಾಶ್ ರಾಜ್ ಕಿಡಿ

ಇಂದಿನ ಕಾರ್ಯಕ್ರಮಕ್ಕೆ ಹಣ – ಹೆಂಡ ಕೊಟ್ಟು ಜನರನ್ನು ಕರೆತರುವ ಬಿಜೆಪಿ ಕಾರ್ಯಯೋಜನೆಗೆ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪ್ರಜೆಗಳ ದುಡ್ಡು ಎಲ್ಲಮ್ಮನ ಜಾತ್ರೆ…ತಂತ್ರಜ್ಞಾನದ ವಿಶ್ವಗುರು ದಿಲ್ಲಿಯಿಂದಲೇ ಲೋಕಾರ್ಪಣೆ ಮಾಡಬಹುದಾದ ಹೆದ್ದಾರಿಗೆ … ಕುರಿಗಳ ಹಾಗೆ ಜನರನ್ನ ಹಣ..ಹೆಂಡ..ಬಿರ್ಯಾನಿ ಪ್ಯಾಕೆಟ್ ಕೊಟ್ಟು ಲಾರಿ.. ಬಸ್ಸುಗಳಲ್ಲಿ ಕರ್ಕೊಂಡ ಬರೋ ದುಡ್ಡನ್ನ .. ಈ ಹೆದ್ದಾರಿಯಿಂದ ದುಡಿಮೆ ಕಳೆದುಕೊಂಡ ಸಾವಿರಾರು ಬಡವರಿಗೆ ಹಂಚಬಹುದಿತ್ತಲ್ಲವೆ ? #justasking” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; ಮಿಥುನ್‌ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್‌ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...