Homeಕರ್ನಾಟಕಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ...

ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ಜಿ ನಾಯಕ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಎಂಟು ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕಿ ಕರೆಮ್ಮ ಅವರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದ ಹಿನ್ನೆಲೆಯವರಾದ ಕರೆಮ್ಮ, ಪ್ರಭಾವಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. 2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕರೆಮ್ಮ ಈಗ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿರಿ: ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಅವರು ಹಣಬಲವನ್ನು ಬಳಸಿ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡಿದ್ದರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು.

ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...