Homeಕರ್ನಾಟಕಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜಸ್ ಗೌಡ ಎಂಬವರು ಹೆಣ್ಣೂರು ಪೊಲೀಸ್ ಠಾಣೆಗೆ ಈ ದೂರು ನೀಡಿದ್ದಾರೆ. ದೂರಿನಲ್ಲಿ, ”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹೇಳಿದ್ದಾರೆ.

”ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ತೇಜಸ್ ಗೌಡ  ಎಂಬುವವರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಈ ಹಿಂದೆ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿತ್ತು.

ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು‌ ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್‌, ”ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್‌ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವೀಡಿಯೊ ವೈರಲ್ ಆಗಿತ್ತು.

ಎಲ್ಲರ ಎದುರಿಗೆ ಬಹಿರಂಗವಾಗಿ ‘ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಹಾಗೂ ಬಸ್ಸಿಗೆ ಬೆಂಕಿ ಹಚ್ಚುತ್ತೇನೆ’ ಎಂದು ಕಾನೂನು ಸುವ್ಯವಸ್ಥೆಗೆ ಬಹಿರಂಗ ಸವಾಲು ಹಾಕಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿತ್ತು.

”ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು” ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read