Homeಕರ್ನಾಟಕಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುವಾಗ ಎಬಿವಿಪಿ ಕಾರ್ಯಕರ್ತರು ಹಸ್ತಕ್ಷೇಪ ಮಾಡಲು ಮುಂದಾಗಿದ್ದಾರೆ. ಈ ವೇಳೆ ಲಾಠಿ ಚಾರ್ಜ್ ಆಗಿದೆ.

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ರವರ ಫೋಟೋವನ್ನು ಗಣರಾಜ್ಯೋತ್ಸವ ಆಚರಣೆಯಂದು ರಾಯಚೂರು ಜಿಲ್ಲಾ ನ್ಯಾಯಾಧೀಶರು ತೆರವುಗೊಳಿಸಿದ ಸಂಬಂಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ವೇಳೆ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವಿವಿಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೆಂಗಳೂರು ವಿವಿಯ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಎಬಿವಿಪಿ ಸಂಘಟನೆ ಬೇರೆ ವಿಚಾರದ ಕುರಿತು ಪ್ರತಿಭಟನೆ ನಡೆಸಲು ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಂಬೇಡ್ಕರ್‌ ರವರ ಫೋಟೋ ತೆರವು ವಿರೋಧಿಸಿ ನಡೆಯುತ್ತಿದ್ದ ಹೋರಾಟಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್‌ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್‌ ಮಾತನಾಡಿ, “ರಾಯಚೂರಿನಲ್ಲಿ ಆದ ಘಟನೆಯನ್ನು ಖಂಡಿಸಿ, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟದ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಬೇಕು ಎಂದು ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ, ಕೋಮುಗಲಭೆ ಸೃಷ್ಟಿಸಲು ವಿಶ್ವವಿದ್ಯಾನಿಲಯಕ್ಕೆ ಬಂದಿತ್ತು” ಎಂದರು.

“ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಎಬಿವಿಪಿಯವರ ವಿರುದ್ಧ ಪ್ರತಿಭಟಿಸಲಾಗಿದೆ. ಅಂಬೇಡ್ಕರ್‌‌ ಫೋಟೋ ಸಂಬಂಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಎಬಿವಿಪಿಗಳು ಯತ್ನಿಸಿದ್ದಾರೆ. ಎಚ್ಚೆತ್ತುಕೊಂಡ ಪೊಲೀಸರು ಲಾಠಿ ಜಾರ್ಜ್‌ ಮಾಡಿ ಅವರನ್ನು ತಡೆದರು. ಇದನ್ನೆಲ್ಲ ಬಗೆಹರಿಸಿ ಎಬಿವಿಪಿಗಳನ್ನು ಹೊರಗೆ ಕಳುಹಿಸಿದ ಮೇಲೆ ಎಬಿವಿಪಿ ಕಾರ್ಯಕರ್ತರು ಜ್ಞಾನಭಾರತಿ ಪೊಲೀಸ್ ಠಾಣೆಯ ಮುಂದೆ ಜಮಾಸಿದ್ದಾರೆ. ಪೊಲೀಸ್ ಇಲಾಖೆಯ ಕರೆಯಂತೆ ಕೆಲವು ವಿದ್ಯಾರ್ಥಿ ಮುಖಂಡರು ಠಾಣೆಗೆ ಭೇಟಿ ನೀಡಿದ್ದರು” ಎಂದು ಹೇಳಿದರು.

ವಿದ್ಯಾರ್ಥಿ ಮುಖಂಡ ಮನೋಜ್‌ ಮಾತನಾಡಿ, “ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಸಂಘಟನೆ ಪ್ರತಿಭಟನೆಗೆ ಬಂದಿತ್ತು. ಮೂರು ದಿನಗಳಿಂದ ನಡೆಯುತ್ತಿದ್ದ ನಮ್ಮ ಹೋರಾಟವನ್ನು ಹಾಳು ಮಾಡುವುದು ಅವರ ಉದ್ದೇಶವಾಗಿತ್ತು. ಮಾರ್ಕ್ ಕಾರ್ಡ್ ಸಮಸ್ಯೆ, ಹಾಸ್ಟೆಲ್‌ ಸಮಸ್ಯೆ ನೆಪದಲ್ಲಿ ಕ್ಯಾಂಪಸ್‌ಗೆ ಅವರು ಆಗಮಿಸಿದ್ದರು. ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ನೀವು ಬರುವ ಅಗತ್ಯವಿಲ್ಲ ಎಂದು ಮೊದಲೇ ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಎಬಿವಿಪಿ ಸಂಘಟನೆ ಅದನ್ನು ತಿರಸ್ಕರಿಸಿತ್ತು” ಎಂದು ಮಾಹಿತಿ ನೀಡಿದರು.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...