Homeಕರ್ನಾಟಕಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

- Advertisement -
- Advertisement -

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ.

ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ ‘ಸ್ಪಾರ್ಕ್’ 1991ರ ಜಮ್ಮು ಕಾಶ್ಮೀರದ ‘ಕುನಾನ್ ಪೋಶ್ಪೋರಾ’ ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಚರ್ಚಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಈ ಕಾರ್ಯಕ್ರಮ ‘ದೇಶವಿರೋಧಿ’ ಚಟುವಟಿಕೆಯಾಗಿದೆ ಮತ್ತು ಭಾರತೀಯ ಸೇನೆಯನ್ನು ಅವಮಾನಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ ಎಬಿವಿಪಿ ಸದಸ್ಯರು, ಏಕಾಏಕಿ ವಿವಿ ಕ್ಯಾಂಪಸ್‌ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರತಿಭಟನೆಯ ನೆಪದಲ್ಲಿ ಸುಮಾರು 20-25 ಎಬಿವಿಪಿ ಸದಸ್ಯರು ವಿವಿಯ ಆವರಣಕ್ಕೆ ನುಗ್ಗಿ, ಅದರ ನಾಮಫಲಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಅಲ್ಲದೆ, ಭದ್ರತಾ ಸಿಬ್ಬಂದಿ ಮತ್ತು ಒಬ್ಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿಯಾಗಿದೆ.

ಘಟನೆ ಸಂಬಂಧ ಕಾನೂನು ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಸುಮಾರು 25 ಎಬಿವಿಪಿ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇವರಲ್ಲಿ 21 ಜನರಿಗೆ ಬುಧವಾರ (ಫೆ.25) ಮುಂಜಾನೆ ಜಾಮೀನು ದೊರೆತಿದೆ ಎಂದು ವರದಿಗಳು ಹೇಳಿವೆ.

ಕ್ಯಾಂಪಸ್‌ನಲ್ಲಿ ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ವಿದ್ಯಾರ್ಥಿಗಳಿಂದ ಕೌಂಟರ್ ಪ್ರತಿಭಟನೆ

ವಿವಿಯ ನೂರಾರು ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಕೌಂಟರ್ ಪ್ರತಿಭಟನೆ ನಡೆಸಿ, ಶೈಕ್ಷಣಿಕ ಸ್ವಾತಂತ್ರ್ಯಕ್ಕೆ ರಕ್ಷಣೆ ನೀಡಬೇಕು ಮತ್ತು ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ, ಕೇಂದ್ರ ಗೃಹ ಸಚಿವರಿಗೆ ಪತ್ರ

ವಿದ್ಯಾರ್ಥಿಗಳ ಗುಂಪು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ವಿವಿ ಮೇಲೆ ದಾಳಿ ನಡೆಸುವ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಮತ್ತೊಂದೆಡೆ, ಎಬಿವಿಪಿ ಸದಸ್ಯರು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದ ಬಗ್ಗೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...