Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...