Homeಕರ್ನಾಟಕವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ...

ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ ABVP

- Advertisement -
- Advertisement -

ಕಾಲೇಜು ವಿದ್ಯಾರ್ಥಿನಿಯರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಈತ ಮುಖ್ಯಸ್ಥನಾಗಿದ್ದ ತೀರ್ಥಹಳ್ಳಿ ABVP ಘಟಕ, ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದನು. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದನು. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದನು ಎಂದು ಆರೋಪಿಸಿ NSUI ತೀರ್ಥಹಳ್ಳಿ ಘಟಕ ಆತನ ಮೇಲೆ ದೂರು ದಾಖಲಿಸಿತ್ತು.

ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ: ABVP

ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ತೀರ್ಥಹಳ್ಳಿ ABVP ಘಟಕವು ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಪ್ಪೆ ಸಾರಿಸೋಕೆ ಹೊರಟಿದೆ.

ಸಂಘ ಪರಿವಾರದ ಕಾರ್ಯಕರ್ತರು ಇಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಿದರೂ ಇದೇ ರೀತಿ ನಮಗೂ ಅವನಿಗೂ ಸಂಬಂಧವೇ ಇಲ್ಲ ಹೇಳುತ್ತದೆ. ಇದೀಗ ಅದರ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೂಡ ಇದೇ ರೀತಿಯ ಮಾರ್ಗ ಉಪಯೋಗಿಸಿ ತಪ್ಪಿಸಿಕೊಳ್ಳುತ್ತೆ.

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಫೋಟೋ ಸಾಕ್ಷಿ:

Karnataka: ABVP Leader Arrested In Thirthahalli For Filming Nude Videos Of Girls | Crime News, Times Now

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಎನ್ನುವುದು ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲೇ ದಾಖಲಾಗಿದೆ. ಅಷ್ಟೇ ಅಲ್ಲದ ಸಂಘಟನೆಯ ವಿದ್ಯಾರ್ಥಿಗಳು ಕೂಡ ಆತ ಎಬಿವಿಪಿ ತಾಲೂಕು ಅಧ್ಯಕ್ಷ ಎನ್ನುವುದನ್ನು ಹೇಳಿಕೊಂಡಿದ್ದಾರೆ. ಕೇವಲ ಎರಡು ತಿಂಗಳ ಹಿಂದೆ ನಡೆದ ABVP ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ವೇದಿಕೆಯನ್ನೇ ಹಂಚಿಕೊಂಡ ಫೋಟೋಗಳೇ ಈತ ಆ ಸಂಘಟನೆ ಪದಾಧಿಕಾರಿ ಎಂಬುದಕ್ಕೆ ಸಾಕ್ಷ್ಯಯಾಗಿದೆ. ಆದರೆ ಎಬಿವಿಪಿ ತೀರ್ಥಹಳ್ಳಿ ತಾಲೂಕು ಘಟಕವು ಪ್ರತೀಕ್‌ನನ್ನು ಜನವರಿಯಲ್ಲೇ ಅಧ್ಯಕ್ಷ ಸ್ಥಾನದಿಂದ ವಜಾಮಾಡಲಾಗಿದೆ ಎಂದು ಸುಳ್ಳು ಹೇಳುತ್ತಿದೆ.

 

ಪ್ರತೀಕ್‌ ಮೇಲೆ ಇಂತಹ ಆರೋಪ ಇದೇ ಮೊದಲೇನಲ್ಲ ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿವೆ.

ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿ, ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡನನ್ನು ಬಂಧಿಸಲಾಗಿದೆ.

ಈ ಪ್ರತಿಗೌಡ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಕಠೋರ ಹಿಂದು, ಗಾಂಚಾಲಿ, ಧರ್ಮೋ ರಕ್ಷತಿ ರಕ್ಷಿತಃ, ಒಕ್ಕಲಿಗ, ಎಬಿವಿಪಿಯನ್ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಎಬಿವಿಪಿಯ ತಾಲ್ಲೂಕು ಅಧ್ಯಕ್ಷನಾಗಿದ್ದುಕೊಂಡು ಉಳಿದವರಿಗೆಲ್ಲ ನಮ್ಮ ಸಂಸ್ಕೃತಿ, ಪರಂಪರೆ ಎಂದು ಭಾಷಣ ಬಿಗಿಯುವ ಈತ ತಾನು ಮಾತ್ರ ಹೆಣ್ಮಕ್ಕಳ ಮಾನ ತೆಗೆಯುವ ವಿಕೃತ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಅದಕ್ಕಾಗಿ ಸಂಘಟನೆಯಲ್ಲಿ ತನಗೆ ಸಿಕ್ಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾನೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಮ್ಮ ನಾಯಕ ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಪ್ರಕಾಶ್ ರಾಜ್

0
"ನಮಗೊಬ್ಬ ನಾಯಕನಿದ್ದಾನೆ. ಆತ 2019ರಲ್ಲಿ ಕ್ಯಾಮರಾ ಮ್ಯಾನ್‌ಗಳ ಜೊತೆ ಗುಹೆ ಸೇರ್ಕೊಂಡ. ಈಗ ಚುನಾವಣೆ ಬರುವಾಗ ನೀರಿನೊಳಗೆ ಹೋಗಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ಆತ 20ನೇ ಶತಮಾನದ ದೇಶದ ನಾಯಕನಾ?"...